ಹೈದರಾಬಾದ್:ತೆಲಂಗಾಣ ರಾಜ್ಯ ರಚನೆಯಾಗಲು ಸೋನಿಯಾ ಗಾಂಧಿ ಅವರೇ ಕಾರಣ, ಅವರಿರಲಿಲ್ಲದಿದ್ದರೆ ಇಂದು ತೆಲಂಗಾಣ ರಚನೆಯಾಗುತ್ತಿರಲಿಲ್ಲ ಎಂದು ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ತೆಲಂಗಾಣದ ಆರ್ಮೂರ್​ನಲ್ಲಿ ಸಾರ್ವಜನಿಕ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ರಾಹುಲ್​ ಆಡಳಿತರೂಢ ಬಿಆರ್​ಎಸ್​ ವಿರುದ್ಧ ತಮ್ಮ ವಾಗ್ದಾಳಿಯನ್ನು ಮುಂದುವರೆಸಿದ್ದಾರೆ.
ತೆಲಂಗಾಣ ರಾಜ್ಯ ರಚನೆ ಮಾಡಲು ಸೋನಿಯಾ ಗಾಂಧಿ ಅವರು ನಿಮಗೆ ಸಹಾಯ ಮಾಡಿದ್ದಾರೆ. ಅಂದು ಸೋನಿಯಾ ಗಾಂಧಿ ಅವರು ಸಹಾಯ ಮಾಡಿರದಿದ್ದರೆ ಇಂದು ತೆಲಂಗಾಣ ಪ್ರತ್ಯೇಕ ರಾಜ್ಯವಾಗಲು ಸಾಧ್ಯವಾಗುತ್ತಿರಲಿಲ್ಲ. ಸೋನಿಯಾ ಗಾಂಧಿ ಅವರು ಜನರಿಗಾಗಿ ಈ ನಿರ್ಧಾರವನ್ನು ಮಾಡಿದ್ದಾರೆ ಹೊರತು ಬೇರೆ ಯಾರ ಹಿತಕ್ಕಾಗಿ ಅಲ್ಲ.
This election is a fight between ‘Dorala’ Telangana and ‘Prajala’ Telangana.Congress' 6 Guarantees will provide support to every family of Telangana.✅ Mahalakshmi– ₹2,500/month to women– Free bus travel– Gas cylinder for ₹500✅ Indiramma Indlu– ₹5 lakh assistance to…pic.twitter.com/k2GdhQuMiW
ಇದನ್ನೂ ಓದಿ:ಅಕ್ರಮ ಹಣ ವರ್ಗಾವಣೆ ಪ್ರಕರಣ; ತಮ್ಮ ಬಂಧನ ಪ್ರಶ್ನಿಸಿ ಸಂಜಯ್ ಸಿಂಗ್ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಹೈಕೋರ್ಟ್
ಒಂದು ಕಾಲದಲ್ಲಿ ಬಿಜೆಪಿ ನಾಯಕರು ತೆಲಂಗಾಣದಲ್ಲಿ ಬಾಲಿವುಡ್​ ನಾಯಕರಂತೆ ತಿರುಗಾಡುತ್ತಿದ್ದರು. ಇಂದು ತೆಲಂಗಾಣದಲ್ಲಿ ಪಕ್ಷ ಸೋಲುತ್ತದೆ ಎಂಬ ವಿವಾರ ತಿಳಿದ ಮೇಲೆ ಅವರುಗಳು ಕಾಂಗ್ರೆಸ್​ಗೆ ಸೇರಲು ಸಾಲುಗಟ್ಟಿ ನಿಂತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್​ ಅಧಿಕಾರಕ್ಕೆ ಬಂಧಲ್ಲಿ ನಾವು ಈಗಾಗಲೇ ಘೋಷಿಸಿರುವ ಆರು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ. ತೆಲಂಗಾಣದಲ್ಲಿ ಜಾತಿಗಣತಿ ನಡೆಸುತ್ತೇವೆ ಎಂದು ಹಲವು ಭರವಸೆಗಳನ್ನು ರಾಹುಲ್ ಗಾಂಧಿ ನೀಡಿದ್ದಾರೆ.
ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ಪಂಚರಾಜ್ಯ ಚುನಾವಣೆ ಮುಂಬರುವ ಲೋಕಸಭೆ ಚುನಾವಣೆಗೆ ಸೆಮಿಫಿನಾಲೆ ಎಂದೇ ಬಿಂಬಿತವಾಗಿದೆ. ನವೆಂಬರ್ 03ರಂದು ತೆಲಂಗಾಣದಲ್ಲಿ ಮತದಾನ ನಡೆಯಲಿದ್ದು, ಡಿಸೆಂಬರ್ 3ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + ten =
Remember me
