ನವದೆಹಲಿ:ಜೆಎನ್​ಯು ವಿದ್ಯಾರ್ಥಿಗಳ ಮೇಲೆ ಭಾನುವಾರ ಮುಸುಕುಧಾರಿಗಳು ನಡೆಸಿದ ಹಲ್ಲೆಯನ್ನು ತೀವ್ರವಾಗಿ ಖಂಡಿಸಿರುವ ಕಾಂಗ್ರೆಸ್​ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ವಿದ್ಯಾರ್ಥಿಗಳ ಮೇಲೆ ಹಿಂದೆಂದೂ ಕಂಡಿರದ ರೀತಿಯ ಭಯಾನಕ ದಾಳಿಯಾಗಿದೆ ಎಂದು ಹೇಳಿರುವ ಸೋನಿಯಾ ಗಾಂಧಿ, ದೇಶದಲ್ಲಿ ಕಾಲೇಜುಗಳ ಕ್ಯಾಂಪಸ್​​ಗಳಲ್ಲಿ ಪ್ರತಿದಿನ ಒಂದಲ್ಲ ಒಂದು ಗಲಾಟೆ ನಡೆಯುತ್ತಿದೆ. ಒಂದೋ ಪೊಲೀಸರು ವಿದ್ಯಾರ್ಥಿಗಳ ಮೇಲೆ ಅಟ್ಯಾಕ್ ಮಾಡುತ್ತಾರೆ. ಇಲ್ಲವೇ ಇಂತಹ ದುಷ್ಕರ್ಮಿಗಳು ದಾಳಿ ಮಾಡುತ್ತಾರೆ. ಇವರೆಲ್ಲರಿಗೂ ಬಿಜೆಪಿ ಸರ್ಕಾರದ ಬೆಂಬಲವಿದೆ ಎಂದು ಹರಿಹಾಯ್ದಿದ್ದಾರೆ.
ಈ ದೇಶದ ಯುವಜನರು, ವಿದ್ಯಾರ್ಥಿಗಳ ಧ್ವನಿಯನ್ನು ಹತ್ತಿಕ್ಕಲಾಗುತ್ತಿದೆ. ಮೋದಿ ಸರ್ಕಾರದ ಕುಮ್ಮಕ್ಕಿನಿಂದ ದಾಳಿ ಮಾಡುತ್ತಿರುವ ಸಕ್ರಿಯ ಗೂಂಡಾಗಳ ವರ್ತನೆಯನ್ನು ಯಾವ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದಿದ್ದಾರೆ.
ಜೆಎನ್​ಯು ವಿಶ್ವವಿದ್ಯಾಲಯಕ್ಕೆ ನುಗ್ಗಿದ ಗುಂಪೊಂದು ನಿನ್ನೆ ಅಲ್ಲಿನ ವಿದ್ಯಾರ್ಥಿಗಳು, ಉಪನ್ಯಾಸಕ ಮೇಲೆ ಹಲ್ಲೆ ನಡೆಸಿತ್ತು. ಗಾಯಗೊಂಡ ಸುಮಾರು 34 ಜನರು ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + seventeen =
Remember me
