ನವದೆಹಲಿ:ಕರೊನಾ ವೈರಸ್​ ಹೆಚ್ಚಳ, ಭಾರತ-ಚೀನಾ ಗಡಿ ಸಂಘರ್ಷ, ಆರ್ಥಿಕತೆ ಕುಸಿತ, ವಲಸೆ ಕಾರ್ಮಿಕ ಸಂಕಷ್ಟ ಹೀಗೆ ಹತ್ತು ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದೆ ಪ್ರತಿಪಕ್ಷ ಕಾಂಗ್ರೆಸ್​.ಈ ಮಧ್ಯೆ ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿಯವರು ನಾಳೆ ಬೆಳಗ್ಗೆ ತಮ್ಮ ಪಕ್ಷದ ಲೋಕಸಭಾ ಸದಸ್ಯರ ಜತೆ ಸಭೆ ನಡೆಸಲಿದ್ದಾರೆ ಎಂದು ಕಾಂಗ್ರೆಸ್​ ಮೂಲಗಳು ತಿಳಿಸಿದ್ದು, ಕುತೂಹಲ ಹುಟ್ಟಿಸಿದೆ.
ನಾಳೆ (ಶನಿವಾರ) ಬೆಳಗ್ಗೆ ಸೋನಿಯಾ ಗಾಂಧಿಯವರು ಕಾಂಗ್ರೆಸ್​ನ ಸಂಸದರ ಜತೆ ವಿಡಿಯೋ ಕಾನ್ಫರೆನ್ಸ್​ ಮೂಲಕ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಯಾವ ವಿಚಾರ ಚರ್ಚೆಯಾಗಬಹುದು ಎಂಬ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ.ಸತತವಾಗಿ ಏರುತ್ತಿರುವ ಇಂಧನ ಬೆಲೆಯ ವಿರುದ್ಧವೂ ಕಾಂಗ್ರೆಸ್​ ಮುಖಂಡರು ಪ್ರತಿಭಟನೆ ನಡೆಸುತ್ತಿದ್ದಾರೆ. ಅಷ್ಟೇ ಏಕೆ, ಪಾರ್ಲಿಮೆಂಟ್​ನಲ್ಲಿ ಕೇಂದ್ರ ಸರ್ಕಾರ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆಗೆ ಆಸ್ಪದ ಕೊಡದೆ, ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬ ಆರೋಪವನ್ನೂ ಕಾಂಗ್ರೆಸ್ ಈಗಾಗಲೇ ಮಾಡಿದೆ.ಇದನ್ನೂ ಓದಿ:ಆರೋಗ್ಯಸೇತು ಆ್ಯಪ್ ಕಡ್ಡಾಯವಲ್ಲ: ಹೈಕೋರ್ಟ್‌ನಲ್ಲಿ ಕೇಂದ್ರ ಸರ್ಕಾರದ ಹೇಳಿಕೆ
ಇಷ್ಟೆಲ್ಲ ವಿಚಾರಗಳ ಮಧ್ಯೆ ನಾಳೆ ಸೋನಿಯಾ ಗಾಂಧಿಯವರ ಸಭೆ ಕುತೂಹಲ ಹುಟ್ಟಿಸಿದೆ. (ಏಜೆನ್ಸೀಸ್)
ಮುಖ್ಯಮಂತ್ರಿ ನಿವಾಸಕ್ಕೆ ಬಾಂಬ್​ ಹಾಕುವುದಾಗಿ ಬೆದರಿಕೆ ಕರೆ ಮಾಡಿದ್ದವನ ಬಂಧನ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:11 + 14 =
Remember me
