ನವದೆಹಲಿ:ಸಂಸತ್ತಿನ ವಿಶೇಷ ಅಧಿವೇಶನದ ಕಾರ್ಯಸೂಚಿಯನ್ನು ಕೋರಿ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಕೇಂದ್ರ ಸರ್ಕಾರ ಸೆ. 18ರಿಂದ 22ರ ವರೆಗೆ ಸದನದಲ್ಲಿ ವಿಶೇಷ ಅಧಿವೇಶನ ನಡೆಸುವುದಾಗಿ ಸೂಚಿಸಿದ್ದು, ವಿದೇಶಾಂಗ ಸಚಿವ ಪ್ರಹ್ಲಾದ್ ಜೋಷಿ ಅಧಿವೇಶನದ ಉದ್ದೇಶವನ್ನು ಇನ್ನೂ ತಿಳಿಸಿಲ್ಲ. ಇದಕ್ಕೆ ಪ್ರತಿಯಾಗಿ ವಿರೊಧ ಪಕ್ಷದ ನಾಯಕಿ ಸೋನಿಯಾ ಗಾಂಧಿಯು ಪ್ರಧಾನಿ ಮೋದಿಗೆ ಪತ್ರವೊಂದನ್ನು ಬರೆದಿದ್ದು, ತಾವು ಕೇಳುವ ಪ್ರಶ್ನೆಗಳ ಬಗ್ಗೆ ಪಟ್ಟಿಯನ್ನೇ ಮಾಡಿದ್ದಾರೆ.
ಸೋನಿಯಾ ಗಾಂಧಿ ಅವರು ಪ್ರಧಾನಿಗೆ ಬರೆದ ಪತ್ರದಲ್ಲಿ ಪಕ್ಷವು ವಿಶೇಷ ಸಭೆಯಲ್ಲಿ ಪ್ರಸ್ತಾಪಿಸಲು ಬಯಸುವ ವಿಷಯಗಳನ್ನು ಪ್ರಸ್ತಾಪಿಸಿದ್ದಾರೆ. ಈ ವಿಷಯಗಳ ಕುರಿತು ಚರ್ಚೆ ನಡೆಸಬೇಕು ಎಂದು ಸೋನಿಯಾ ಗಾಂಧಿ ಒತ್ತಾಯಿಸಿದರು. ಸೆಪ್ಟೆಂಬರ್ 18 ರಿಂದ 22 ರವರೆಗೆ ವಿಶೇಷ ಸಭೆ ಕರೆಯುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಈ ಕೆಳಗಿನ ಅಂಶಗಳನ್ನು ಪ್ರಸ್ತಾಪಿಸುತ್ತದೆ.
1. ಆರ್ಥಿಕತೆಯ ನೆಲೆಗಟ್ಟಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ, ಹೆಚ್ಚುತ್ತಿರುವ ನಿರುದ್ಯೋಗ, ಅಸಮಾನತೆ ಮತ್ತು ಸಣ್ಣ ಮತ್ತು ಮಧ್ಯಮ ಉದ್ಯಮಗಳು ಅನುಭವಿಸುತ್ತಿರುವ ಕಷ್ಟಗಳು.
2. ಸರ್ಕಾರವು ರೈತರು ಮತ್ತು ರೈತ ಸಂಘಗಳಿಗೆ ಕನಿಷ್ಠ ಬೆಂಬಲ ಬೆಲೆ ಇನ್ನಿತರ ಬೇಡಿಕೆಗಳನ್ನು ಪೂರೈಸುವುದಾಗಿ ಕೊಟ್ಟಿದ್ದ ಮಾತಿನ ಕುರಿತು.
3. ಅದಾನಿ ವ್ಯಾಪಾರ ಸಂಸ್ಥೆಯ ಎಲ್ಲಾ ವ್ಯವಹಾರಗಳನ್ನು ಕೂಲಂಕುಶವಾಗಿ ಪರಿಶೀಲಿಸಲು ಜಂಟಿ ಸಂಸದೀಯ ಸಮಿತಿ ರಚನೆಯಾಗಬೇಕು.4. ಮಣಿಪುರ ಹಿಂಸಾಷಾರದಲ್ಲಿ ಜನರಿಗಾದ ನೋವು, ಸಂವಿಧಾನದ ಉಲ್ಲಂಘನೆ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ಹಾನಿಯಾಗಿದೆ. ಈ ಬಗ್ಗೆ ಚರ್ಚೆಯಾಗಬೇಕಿದೆ.
5. ಹರಿಯಾಣಸಂತಹ ರಾಜ್ಯಗಲಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಘ್ನತೆಯ ಕುರಿತು ಚರ್ಚೆ ನಡೆಸುವುದು.6. ಚೀನಾದ ಅತಿಕ್ರಮಣದ ಕುರಿತು ಮೂರು ವರ್ಷಗಳ ಕಾಲ ಚರ್ಚೆ ನಡೆದಿಲ್ಲ. ಈ ಬಗ್ಗೆ ಸಾಮೂಹಿಕ ನಿರ್ಧಾರ ಕೈಗೊಳ್ಳಬೇಕು.7. ಜಾತಿ ಎಣಿಕೆಯ ಹೊರತಾಗಿ ಯಾವುದೇ ಜನಗಣತಿ ನಡೆಸಲಾಗಿಲ್ಲ. ಜಾತಿ ಗಣತಿಗೆ ಬೇಡಿಕೆ ಹಾಗೂ ಜನಗಣತಿಯ ಅಗತ್ಯವಿದೆ.
8. ಬಿಜೆಪಿಯೇತರ ಆಡಳಿತವಿರುವ ರಾಜ್ಯಗಳಿಗೆ ಕಿರುಕುಳ ನೀಡಲಾಗುತ್ತಿದೆ. ಕೇಂದ್ರ-ರಾಜ್ಯ ಸಂಬಂಧ ಚರ್ಚೆಯಾಗಬೇಕು.9. ಪ್ರಾಕೃತಿಕ ವಿಕೋಪಗಳು: ಅತಿವೃಷ್ಟಿ ಮತ್ತು ಮಳೆ ಕೊರತೆಯಿಂದ ಹಲವು ರಾಜ್ಯಗಳು ತತ್ತರಿಸಿದ್ದರೂ ಕೇಂದ್ರ ಸರ್ಕಾರ ಅವುಗಳನ್ನು ವಿಪತ್ತು ಎಂದು ಘೋಷಿಸಿಲ್ಲ. ಈ ಬಗ್ಗೆ ಚರ್ಚೆಯಾಗಬೇಕು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − thirteen =
Remember me
