ಲಖನೌ:ಉತ್ತರ ಪ್ರದೇಶದಲ್ಲಿ ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ನಿರೀಕ್ಷೆಗಿಂತ ಹೆಚ್ಚು ಸ್ಥಾನ ಪಡೆದಿದ್ದು, 2027ಕ್ಕೆ ವಿಧಾನಸಭೆ ಚುನಾವಣೆ ನಡೆಯಲಿರುವುದರಿಂದ ಪಕ್ಷದ ಹವಾ ಮುಂದುವರಿಯುವಂತೆ ಮಾಡಲು ಪಕ್ಷದ ಮುಖ್ಯಸ್ಥ ಅಖಿಲೇಶ್​ ಯಾದವ್​ ಮುಂದಾಗಿದ್ದಾರೆ.
ಇದನ್ನೂ ಓದಿ:ರಾಯ್​ಲಕ್ಷ್ಮೀ ಸೆಕ್ಸಿಯೆಸ್ಟ್ ಬಿಕಿನಿ ಫೋಟೋಸ್​ ವೈರಲ್​.. ಬದಲಾದೆ ಎಂದರಾ ನೆಟ್ಟಿಗರು!
ಇದರ ಭಾಗವಾಗಿ ತನ್ನ ನಾಯಕರಿಗೆ ಬಿಜೆಪಿ ನಾಯಕರಿಂದ ದೂರ ಉಳಿಯುವಂತೆ ಅಖಿಲೇಶ್ ಯಾದವ್ ಎಚ್ಚರಿಕೆ ನೀಡಿದ್ದಾರೆ.
ಸಮಾಜವಾದಿ ಪಕ್ಷಕ್ಕೆ ಬಿಜೆಪಿ ನಾಯಕರ ಸೇರ್ಪಡೆ ಮಾಡಿಕೊಳ್ಳುವುದು ಬೇಡ ಎಂದು ಅವರು ಸಲಹೆ ನೀಡಿದ್ದಾರೆ.
ಬಿಜೆಪಿಯಲ್ಲಿ ಗೊಂದಲವಿದೆ. ನಾಯಕರೆಲ್ಲ ಸೇಫ್ ಝೋನ್ ನೋಡಿಕೊಳ್ಳುತ್ತಿದ್ದಾರೆ. ಅಂತಹವರನ್ನು ಸೇರಿಸಿಕೊಳ್ಳಬಾರದು ಎಂದು ಅಖಿಲೇಶ್ ಸ್ಪಷ್ಟಪಡಿಸಿದ್ದಾರೆ.
ಲೋಕಸಭೆ ಚುನಾವಣೆಯ ಫಲಿತಾಂಶವನ್ನು ವಿಧಾನಸಭೆ ಚುನಾವಣೆಯಲ್ಲಿ ಪುನರಾವರ್ತಿಸಲು ಎಸ್‌ಪಿ ಮುಖ್ಯಸ್ಥ ಅಖಿಲೇಶ್​ ಗಮನಹರಿಸಿದ್ದಾರೆ.
ಲೋಕಸಭೆ ಚುನಾವಣೆ ಫಲಿತಾಂಶದಿಂದ ಸಮಾಜವಾದಿ ಪಕ್ಷದಲ್ಲಿ ಹೊಸ ಉತ್ಸಾಹ ಮೂಡಿದೆ. ಬಿಜೆಪಿಯಲ್ಲಿ ಗೊಂದಲವಿದೆ. ಹಿರಿಯ ನಾಯಕರು ಪರಸ್ಪರ ಟೀಕೆ ಮಾಡುತ್ತಿದ್ದಾರೆ. ಬಿಜೆಪಿಯ ಕೆಲ ಮುಖಂಡರು ಸಮಾಜವಾದಿ ಪಕ್ಷ ಸೇರಲು ಯತ್ನಿಸುತ್ತಿದ್ದಾರೆ ಎಂಬ ವರದಿಗಳಿವೆ. ಟಿಕೆಟ್ ಗ್ಯಾರಂಟಿ ಕೊಟ್ಟರೆ ಸೈಕಲ್ ತುಳಿಯುತ್ತೇವೆ ಎಂದು ಮುಂದೆ ಬರುತ್ತಿದ್ದಾರೆ. ಆದರೆ ಬಿಜೆಪಿ ನಾಯಕರನ್ನು ಸೇರಿಸಿಕೊಳ್ಳಲು ಎಸ್‌ಪಿ ನಾಯಕನಿಗೆ ಆಸಕ್ತಿ ಇಲ್ಲದಂತಾಗಿದೆ. ಇದರೊಂದಿಗೆ ಅಖಿಲೇಶ್ ಅವರು ತಮ್ಮ ಪಕ್ಷಕ್ಕೆ ಬಿಜೆಪಿ ನಾಯಕರ ಪ್ರವೇಶಕ್ಕೆ ತೆರೆ ಎಳೆದಿದ್ದಾರೆ ಎಂಬ ಚರ್ಚೆ ನಡೆಯುತ್ತಿದೆ.
ಪೂಜಾ ಖೇಡ್ಕರ್ ವಿವಾದ: ಪಾಲಕರ ‘ವೈವಾಹಿಕ ಸ್ಥಿತಿ’ ವಿವರ ಕೇಳಿದ ಕೇಂದ್ರ!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:11 − 4 =
Remember me
