ಲಖನೌ:ಉತ್ತರಪ್ರದೇಶದ ಪ್ರಮುಖ ವಿರೋಧ ಪಕ್ಷವಾದ ಸಮಾಜವಾದಿ ಪಾರ್ಟಿ(ಎಸ್​​ಪಿ)ಯ ಅಧ್ಯಕ್ಷ ಅಖಿಲೇಶ್​ ಯಾದವ್​ 2022ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ. ಅಜಮ್​ಗಡದ ಸಂಸದರಾಗಿರುವ ಯಾದವ್​ ಎಸ್​​ಪಿಯ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದು, ಅವರ ಈ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಇಂದು ಲಖನೌನಲ್ಲಿ ಮಾತನಾಡಿರುವ ಅಖಿಲೇಶ್​ ಯಾದವ್​ ತಮ್ಮ ಪಕ್ಷ, ರಾಷ್ಟ್ರೀಯ ಲೋಕ ದಳ(ಆರ್​ಎಲ್​ಡಿ)ದೊಂದಿಗೆ ಚುನಾವಣಾ ಒಪ್ಪಂದ ಮಾಡಿಕೊಂಡಿದೆ. ಸೀಟುಗಳ ಹಂಚಿಕೆ ಇನ್ನೂ ಅಂತಿಮವಾಗಬೇಕಿದೆ ಎಂದು ಹೇಳಿದ್ದಾರೆಂದು ಪಿಟಿಐ ವರದಿ ಮಾಡಿದೆ. ತಮ್ಮ ಚಿಕ್ಕಪ್ಪ ಶಿವಪಾಲ್​ ಯಾದವ್​ರ ಪ್ರಗತಿಶೀಲ್​ ಸಮಾಜವಾದಿ ಪಾರ್ಟಿ ಲೋಹಿಯಾ(ಪಿಎಸ್​ಪಿಎಲ್​)ದೊಂದಿಗೆ ಒಗ್ಗೂಡುವ ಸಾಧ್ಯತೆ ಬಗೆಗೆ, “ನನಗೆ ಯಾವ ಸಮಸ್ಯೆಯೂ ಇಲ್ಲ. ಅವರಿಗೆ ಮತ್ತು ಅವರ ಜನರಿಗೆ ಸೂಕ್ತ ಗೌರವ ನೀಡಲಾಗುವುದು” ಎಂದು ತೆರೆದ ಆಹ್ವಾನ ನೀಡಿದ್ದಾರೆ.(ಏಜೆನ್ಸೀಸ್)
ಬಿಜೆಪಿ ಜೊತೆ ಸೀಟು ಹಂಚಿಕೆಗೆ ಸಿದ್ಧ: ಕಾಂಗ್ರೆಸ್​ ತೊರೆದ ಮಾಜಿ ಸಿಎಂ ಉವಾಚ

2 ವರ್ಷದ ಮಗುವಿಗೆ ಲೈಂಗಿಕ ಕಿರುಕುಳ: ಕಾಮುಕನ ಬಂಧನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − six =
Remember me
