ಆಗ್ರಾ:ವಿಶ್ವ ಪ್ರಸಿದ್ಧ ತಾಜ್​ಮಹಲ್ ವೀಕ್ಷಣೆಗೆ ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಾರೆ. ವಿದೇಶಿ ಪ್ರವಾಸಿಗರ ಸಂಖ್ಯೆಯೂ ಹೆಚ್ಚಿದೆ. ಈ ನಡುವೆ ಸ್ಪೈನ್​ ದೇಶದಿಂದ ಬಂದಿದ್ದ ಮಹಿಳಾ ಪ್ರವಾಸಿಯೊಬ್ಬರ ಮೇಲೆ ಕೋತಿಯೊಂದು ದಾಳಿ ಮಾಡಿದ ಘಟನೆ ನಡೆದಿದೆ.
ತಾಜ್​ಮಹಲ್ ಮುಂಭಾಗದ ರಾಯಲ್ ಗೇಟ್​ ಬಳಿ ಫೊಟೋ ತೆಗೆಯಲೆಂದು ಸ್ಪೈನ್ ದೇಶದ ಮಹಿಳೆ ನಿಂತಿದ್ದರು. ಈ ವೇಳೆ ಕೋತಿಯೊಂದು ಬಂದು ದಾಳಿ ಮಾಡಿದೆ. ಈ ವೇಳೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪ್ರಥಮ ಚಿಕಿತ್ಸೆ ನೀಡಲಾಗಿದೆ. ನಂತರ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
2019ರಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ತಾಜ್​ ಮಹಲ್​ನ ರಕ್ಷಣೆಯ ಜವಾಬ್ದಾರಿಯನ್ನು ವಹಿಸಿತ್ತು. ಈ ವೇಳೆ ಕೋತಿಗಳನ್ನು ಓಡಿಸಲು ಸಿಂಗಲ್​​ಶಾಟ್ ಗನ್​​ ಬಳಕೆ ಮಾಡಲಾಗುತ್ತಿತ್ತು. ಇದಕ್ಕೆ ಪ್ರಾಣಿಪ್ರಿಯರಿಂದ ತೀವ್ರ ವಿರೋಧ ವ್ಯಕ್ತವಾಯಿತು. ಪ್ರವಾಸಿಗರ ಮೇಲೆ ಕೋತಿಗಳು ದಾಳಿ ನಡೆಸುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ, ಸಮಸ್ಯೆ ಬಗೆಹರಿಸುವಂತೆ ಅರಣ್ಯ ಇಲಾಖೆಗೆ ಪತ್ರ ಬರೆಯಲಾಗಿದೆ ಎಂದು ಭಧ್ರತಾ ಸಿಬ್ಬಂದಿ ತಿಳಿಸಿದ್ದಾರೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × five =
Remember me
