ರಾಂಚಿ:ಭೂ ಹಗರಣ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನದಲ್ಲಿರುವ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರಿಗೆ ಮಧ್ಯಂತರ ಜಾಮೀನು ನೀಡಲು ರಾಂಚಿಯ ವಿಶೇಷ ಪಿಎಂಎಲ್‌ಎ ನ್ಯಾಯಾಲಯ ಶನಿವಾರ ನಿರಾಕರಿಸಿದೆ.
ಇದನ್ನೂ ಓದಿ:ಅಮೆರಿಕದಲ್ಲಿ 20 ಅಡಿ ಗಾಳಿಯಲ್ಲಿ ಹಾರಿ ಮರಕ್ಕೆ ಅಪ್ಪಳಿಸಿದ ಕಾರು; ಭಾರತ ಮೂಲದ 3 ಮಹಿಳೆಯರ ಸಾವು!
ತನ್ನ ಚಿಕ್ಕಪ್ಪನ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಸೊರೇನ್​ 13 ದಿನಗಳ ಮಧ್ಯಂತರ ಜಾಮೀನು ಕೋರಿ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು ಅವರಿಗೆ ಜಾಮೀನು ನೀಡಲು ನಿರಾಕರಿಸಿದೆ.
ಕಳೆದ ಬುಧವಾರ ಹೇಮಂತ್ ಸೊರೆನ್ ಅವರ ಬಂಧನವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಕುರಿತು ಜಾರ್ಖಂಡ್​ ಹೈಕೋರ್ಟ್​ ತನ್ನ ತೀರ್ಪು ಕಾಯ್ದಿರಿಸಿದ್ದರೂ ತೀರ್ಪು ಇನ್ನೂ ನೀಡಿಲ್ಲ ಎಂದು ಸೂರೆನ್​ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಎಸ್​ಸಿ ಪೀಠಕ್ಕೆ ತಿಳಿಸಿದ್ದರು. ಲೋಕಸಭೆ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ತುರ್ತು ವಿಚಾರಣೆ ನಡೆಸುವಂತೆ ಕೋರಿದ್ದರು.
ಸುಮಾರು 600 ಕೋಟಿ ರೂ. ಮೊತ್ತದ ಭೂ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಆರೋಪದಡಿ ಹೇಮಂತ್​ ಸೂರೇನ್​ ಅವರನ್ನು ಜಾರಿ ನಿರ್ದೇಶನಾಲಯ ಜನವರಿಯಲ್ಲಿ ಬಂಧಿಸಿತ್ತು.
ಅಧಿಕೃತ ಭೂ ದಾಖಲೆಗಳನ್ನು ತಿರುಚಿ ಭೂಮಿಯನ್ನು ಮಾರಾಟಗಾರರು ಖರೀದಿದಾರರ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಲಾಗಿದೆ, ಈ ಮೂಲಕ ಕೋಟ್ಯಂತರ ರೂಪಾತಿ ಮೌಲ್ಯದ ಭೂಮಿಯನ್ನು ಸ್ವಾಧೀನ ಪಡೆಯಲಾಗಿದೆ ಎಂಬುದು ಜಾರಿ ನಿರ್ದೇಶನಾಲಯ ಆರೋಪವಾಗಿದೆ.
ಮಣಿಪುರದಲ್ಲಿ ಕುಕಿ ಉಗ್ರರ ಬಾಂಬ್​​ ದಾಳಿ; ಇಬ್ಬರು ಯೋಧರು ಹುತಾತ್ಮ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + 18 =
Remember me
