ನವದೆಹಲಿ:ಲಾಕ್‌ಡೌನ್‌ನಿಂದಾಗಿ ಉತ್ತರ ಭಾರತದಲ್ಲಿ ಸಿಕ್ಕಿಹಾಕಿಕೊಂಡಿರುವ ಕನ್ನಡಿಗರು ತಮ್ಮ ರಾಜ್ಯಕ್ಕೆ ಮರಳುವುದಕ್ಕಾಗಿ ವಿಶೇಷ ರೈಲೊಂದನ್ನು ಓಡಿಸಲು ರೈಲ್ವೆ ಇಲಾಖೆ ಒಪ್ಪಿಗೆ ನೀಡಿದೆ.
ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವ ಡಿ.ವಿ. ಸದಾನಂದ ಗೌಡ ಅವರು ರೈಲ್ವೆ ಸಚಿವ ಪಿಯುಶ್ ಗೋಯಲ್ ಅವರೊಂದಿಗೆ ಈ ದಿಸೆಯಲ್ಲಿ ನಡೆಸಿದ ಮಾತುಕತೆ ಯಶಸ್ವಿಯಾಗಿದ್ದು ಒಂದೆರಡು ದಿನಗಳಲ್ಲಿ ದೆಹಲಿಯಿಂದ ಬೆಂಗಳೂರಿಗೆ ವಿಶೇಷ ರೈಲು ಸಂಚರಿಸಲಿದೆ.
ದೆಹಲಿಯ ಹೊರತಾಗಿ ಹರಿಯಾಣ, ಪಂಜಾಬ್ ಮತ್ತಿತರ ಸಮೀಪದ ಸ್ಥಳಗಳಿಂದಲೂ ರಾಜ್ಯಕ್ಕೆ ವಾಪಸ್ ಆಗಲು ಅಲ್ಲಿರುವ ಕನ್ನಡಿಗರು ಕಾತರರಾಗಿದ್ದಾರೆ. ಆ ರಾಜ್ಯಗಳ ಅಧಿಕಾರಿಗಳ ಜತೆ ಸಚಿವ ಸದಾನಂದಗೌಡ ಮಾತನಾಡಿದ್ದಾರೆ.
ಇದನ್ನೂ ಓದಿಕರೊನಾ ಕರಡು ನಿರ್ಣಯದ ವಿಷಯದಲ್ಲಿ ಅಮೆರಿಕ-ಚೀನಾ ‘ಶೀತಲ ಸಮರ’
ಅಲ್ಲಿರುವ ಕನ್ನಡಿಗರನ್ನು ಕೂಡಲೇ ದೆಹಲಿಗೆ ಕರೆಸಿಕೊಂಡು ಅವರನ್ನೂ ಇದೇ ರೈಲಿನಲ್ಲಿ ಕರ್ನಾಟಕಕ್ಕೆ ಕಳುಹಿಸಿಕೊಡಲು ಅಗತ್ಯ ವ್ಯವಸ್ಥೆ ಮಾಡುವಂತೆ ದೆಹಲಿಯಲ್ಲಿರುವ ರಾಜ್ಯದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಹಾಗೆಯೇ ಅರಬ್ ದೇಶಗಳಲ್ಲಿರುವ ಕನ್ನಡಿಗರು ಸ್ವದೇಶಕ್ಕೆ ಮರಳಲು ಎರಡು ವಿಮಾನಗಳ ವ್ಯವಸ್ಥೆಯಾಗಿದೆ. ಮೇ 12ರಂದು ಯುಎಇಯಿಂದ ಮಂಗಳೂರಿಗೆ ವಿಮಾನ ಸಂಚರಿಸುವುದನ್ನು ವಿದೇಶಾಂಗ ಸಚಿವರು ಖಚಿತಪಡಿಸಿದ್ದಾರೆ. ಅಲ್ಲಿಂದ ಇನ್ನೊಂದು ವಿಮಾನ ಬೆಂಗಳೂರಿಗೆ ಬರಲಿದ್ದು ಅದರ ವೇಳಾಪಟ್ಟಿ ಇನ್ನೂ ಪ್ರಕಟವಾಗಬೇಕಿದೆ.
ಹಾಗೆಯೇ ದೆಹಲಿ ಮತ್ತಿತರ ಸ್ಥಳಗಳಿಂದ ತಮ್ಮ ಸ್ವಂತ ವಾಹನ ವ್ಯವಸ್ಥೆ ಮಾಡಿಕೊಂಡು ಕರ್ನಾಟಕಕ್ಕೆ ಮರಳಲು ಇಚ್ಛಿಸಿದ ಅನೇಕ ದೆಹಲಿವಾಸಿ ಕನ್ನಡಿಗರು ಹಾಗೂ ಯಾತ್ರಾರ್ಥಿಗಳಿಗೆ ಅಗತ್ಯ ಪರವಾನಿಗೆಯನ್ನು ಕೊಡಿಸಲಾಗಿದೆ ಎಂದು ಸದಾನಂದಗೌಡ ಅವರು ತಿಳಿಸಿದ್ದಾರೆ.
ಇದನ್ನೂ ಓದಿಪಟ್ಟು ಹಿಡಿದು ಮದ್ಯದಂಗಡಿ ಬಂದ್ ಮಾಡಿಸಿದ ಮಹಿಳೆಯರು
ಈ ನಡುವೆ, ವಿಶೇಷ ವಿಮಾನದ ವ್ಯವಸ್ಥೆ ಕಲ್ಪಿಸಿದ್ದಕ್ಕಾಗಿ ಅರಬ್ ದೇಶಗಳಲ್ಲಿರುವ ಕನ್ನಡಿಗರು ಸದಾನಂದಗೌಡರಿಗೆ ಧನ್ಯವಾದ ಹೇಳಿದ್ದಾರೆ.
ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಕ್ಕಿಹಾಕಿಕೊಂಡಿರುವ ಭಾರತೀಯರನ್ನು ಸ್ವದೇಶಕ್ಕೆ ಕರೆತರಲು ಹಲವು ವಿಮಾನಗಳ ವ್ಯವಸ್ಥೆ ಮಾಡಲಾಗಿತ್ತು. ಆದರೆ ಮೊದಲ ಪಟ್ಟಿಯಲ್ಲಿ ದುಬೈನಿಂದ ಕರ್ನಾಟಕಕ್ಕೆ ಯಾವುದೇ ವಿಮಾನ ನಿಗದಿಯಾಗಿರಲಿಲ್ಲ. ಈ ವಿಚಾರವನ್ನು ಸದಾನಂದ ಗೌಡ ವಿದೇಶಾಂಗ ಸಚಿವರ ಜತೆ ಇತ್ತೀಚೆಗೆ ಪ್ರಸ್ತಾಪಿಸಿದ್ದರು.
ಉತ್ತರ ಪ್ರದೇಶದ ಮಸೀದಿಯಲ್ಲಿ ಅಡಗಿದ್ದ ಕರ್ನಾಟಕದ ತಬ್ಲಿಘಿಗಳ ಮೇಲೆ ಕೇಸ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 14 =
Remember me
