ರಾಜಸ್ಥಾನ:ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬಂದ ಸ್ವಿಫ್ಟ್​ ಕಾರೊಂದು ಎದುರಿನಿಂದ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ವರದಿಯಾಗಿದೆ.
ಇದನ್ನೂ ಓದಿ:ಚಿಂಚೋಳಿ ತಾಲೂಕು ಪಂಚಾಯಿತಿ ಕಚೇರಿ ಛಾವಣಿ ಸಿಮೆಂಟ್ ಕುಸಿತ, ತಪ್ಪಿದ ಅನಾಹುತ
ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಪುರುಷರು ಸಾವನ್ನಪ್ಪಿದ್ದು, ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬಿಳಿ ಬಣ್ಣದ ಸ್ವಿಫ್ಟ್​​ ಕಾರು ಓವರ್ ಟೇಕ್ ಮಾಡುವಾಗ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಲಾರಿಗೆ ಗುದ್ದಿದೆ. ಮುಖಾಮುಖಿ ಡಿಕ್ಕಿಯಾದ ಬೆನ್ನಲ್ಲೇ ಹಿಂದಿನಿಂದ ಬಂದ ಮತ್ತೊಂದು ಕಾರು ಕೂಡ ವಾಹನಕ್ಕೆ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಮೃತರಾದ ಅಶೋಕ್ ಮತ್ತು ಮನೋಜ್ ಇಬ್ಬರು ಸೋದರ ಸಂಬಂಧಿಗಳು ಎಂದು ಹೇಳಲಾಗಿದ್ದು, ಅಶೋಕ್ ಅವರ ಪತ್ನಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಸಂಪೂರ್ಣ ಘಟನೆ ಹೆದ್ದಾರಿ ಸಮೀಪದ ರೆಸ್ಟೋರೆಂಟ್‌ನಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ,(ಏಜೆನ್ಸೀಸ್).
ಫೆಬ್ರವರಿಯಲ್ಲಿ ಮಾಲಿವುಡ್​​ ಮೆಗಾಸ್ಟಾರ್ ಫ್ಯಾನ್ಸ್​ಗೆ​ ಡಬಲ್ ಧಮಾಕಾ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × one =
Remember me
