ಉತ್ತರ ಪ್ರದೇಶ:ಹೆದ್ದಾರಿಯ ಟೋಲ್ ಪ್ಲಾಜಾದ ಗೇಟ್‌ನಲ್ಲಿ ನಿರ್ಮಿಸಲಾಗಿದ್ದ ಡಿವೈಡರ್‌ಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ವರದಿಯಾಗಿದೆ.
ಇದನ್ನೂ ಓದಿ:ಸಾಲದ ಕಂತು ತುಂಬದ ಹಿನ್ನೆಲೆ ರೈತ ಮಹಿಳೆಯ ಟ್ರ್ಯಾಕ್ಟರ್ ಜಪ್ತಿ
ಕಾರು ಚಲಾಯಿಸುತ್ತಿದ್ದ ವ್ಯಕ್ತಿಯನ್ನು 20 ವರ್ಷದ ಆದರ್ಶ್ ಎಂದು ಗುರುತಿಸಲಾಗಿದ್ದು, ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ಲಕ್ನೋ-ಸುಲ್ತಾನ್‌ಪುರ ಹೆದ್ದಾರಿಯಲ್ಲಿ ಹೈದರ್‌ಗಢ್ ಟೋಲ್ ಪ್ಲಾಜಾ ಸಮೀಪದ ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದಿದೆ. ಅಪಘಾತದ ಸಂಪೂರ್ಣ ದೃಶ್ಯ ಟೋಲ್​ ಪ್ಲಾಜಾದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಇದನ್ನೂ ಓದಿ:ಶ್ರೀಲೀಲಾ ಅವರ ಪಾತ್ರವನ್ನು ಎಲ್ಲರೂ ಮೆಚ್ಚುತ್ತಾರೆ: ನಿರ್ದೇಶಕ ಅನಿಲ್ ರವಿಪುಡಿ
ಅಪಘಾತ ಸಂಭವಿಸಿದ ಸ್ಥಳಕ್ಕೆ ಧಾವಿಸಿದ ಸ್ಥಳೀಯರು, ಕಾರಿನೊಳಗೆ ಸಿಲುಕಿದ್ದ ಆದರ್ಶ್‌ನನ್ನು ಹೊರತೆಗೆದು ಸಮುದಾಯ ಆರೋಗ್ಯ ಕೇಂದ್ರಕ್ಕೆ (ಸಿಎಚ್‌ಸಿ) ಕರೆದೊಯ್ದಿದ್ದಾರೆ. ಈ ವೇಳೆ ಆತ ಅಪಘಾತದಲ್ಲಿ ಮೃತಪಟ್ಟಿರುವುದು ದೃಢವಾಗಿದೆ. ಟೋಲ್ ಕಾರ್ಮಿಕರ ಪ್ರಕಾರ, ಅಪಘಾತದ ನಂತರ ಕಾರಿನಿಂದ ಹೊಗೆ ಹೊರಬರುತ್ತಿತ್ತು. ಕೂಡಲೇ ರಕ್ಷಣಾ ಕಾರ್ಯಾಚರಣೆ ಆರಂಭಿಸಿ, ಕಾರಿಗೆ ಬೆಂಕಿ ತಗುಲದಂತೆ ನೋಡಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ,(ಏಜೆನ್ಸೀಸ್).
ಶ್ರೀಲೀಲಾ ಅವರ ಪಾತ್ರವನ್ನು ಎಲ್ಲರೂ ಮೆಚ್ಚುತ್ತಾರೆ: ನಿರ್ದೇಶಕ ಅನಿಲ್ ರವಿಪುಡಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − seven =
Remember me
