ಲಖನೌ:ಸ್ಮಾರ್ಟ್​ಫೋನ್​ ಯುಗದಲ್ಲಿ ಯುವ ಜನತೆ ಅಲ್ಪಕಾಲದಲ್ಲೇ ಹೆಚ್ಚು ಖ್ಯಾತಿ ಪಡೆಯಬೇಕೆಂಬ ಹಂಬಲದೊಂದಿಗೆ ಇನ್ನಿಲ್ಲದ ಕೆಲಸಕ್ಕೆ ಕೈ ಹಾಕಿ ತಮ್ಮ ಜೀವಕ್ಕೆ ಕುತ್ತು ತಂಡುಕೊಳ್ಳುತ್ತಾರೆ. ಇದೀಗ ಅದೇ ರೀತಿಯ ಘಟನೆಯೊಂದು ಉತ್ತರಪ್ರದೇಶದ ಬಿಜ್ನೋರ್​ನಲ್ಲಿ ನಡೆದಿದ್ದು, ಇಬ್ಬರು ಯುವಕರ ಸ್ಥಿತಿ ಚಿಂತಾಜನಕವಾಗಿದೆ.
ಬಿಜ್ನೋರ್​ನ ರಾಷ್ಟ್ರೀಯ ಹೆದ್ದಾರಿ 34ರಲ್ಲಿ ಈ ಘಟನೆ ನಡೆದಿದ್ದು, ಅಪಘಾತರ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
UTTARPRADESH |@bijnorpoliceदिल्ली-पौड़ी नेशनल हाईवे पर ड्रोन कैमरे से रील्स बनाते समय दो युवक सड़क हादसे का शिकार हो गए। इस हादसे का लाइव वीडियो सोशल मीडिया पर वायरल हो गया है। दोनों युवकों को गंभीर चोटें आई हैं, लेकिन उनकी जान बच गई है। यह घटना एक महत्वपूर्ण संदेश देती है कि…pic.twitter.com/AQpMifpQpf
ವೈರಲ್​ ಆಗಿರುವ ವಿಡಿಯೋ ನೋಡುವುದಾದರೆ ಬುಲೆಟ್​ ಬೈಕ್​ನಲ್ಲಿ ಕುಳಿತುಕೊಂಡು ಇಬ್ಬರು ಯುವಕರು ರಾಷ್ಟ್ರೀಯ ಹೆದ್ದಾರಿಯಲ್ಲಿ ರೀಲ್ಸ್​ ಮಾಡುತ್ತಿದ್ದಾರೆ. ಈ ವೇಳೆ ಬೈಕ್​ ಚಲಾಯಿಸುತ್ತಿರುವ ಯುವಕ ಏಕಾಏಕಿ ಗಾಡಿಯನ್ನು ಬಲಕ್ಕೆ ಎಳೆದಿದ್ದು, ವೇಗವಾಗಿ ಬಂದ ಕಾರು ಬೈಕ್​ಗೆ ಡಿಕ್ಕಿ ಹೊಡೆದು ಮುಂದಕ್ಕೆ ಸಾಗಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಯುವಕರಿಬ್ಬರು ರಸ್ತೆಯ ಮತ್ತೊಂದು ಬದಿಗೆ ಹಾರಿ ಬಿದ್ದಿದ್ದು, ಇವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.
ಈ ಕುರಿತು ಮಾತನಾಡಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಗಾಯಾಳುಗಳಿಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ವೈದ್ಯರು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡುತ್ತಿದ್ದಾರೆ. ರೀಲ್ಸ್​ ಮಾಡುವ ವೇಳೆ ಈ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಕಾರನ್ನು ಹುಡುಕಲಾಗುತ್ತಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:two × three =
Remember me
