ಹೈದರಾಬಾದ್:ಸಂಬಂಧಿಕರೊಬ್ಬರ ಅಂತ್ಯಸಂಸ್ಕಾವನ್ನು ಮುಗಿಸಿಕೊಂಡು ವಾಪಸ್​ ಆಗುತ್ತಿದ್ದ ದಂಪತಿಗಳಿಬ್ಬರು ಕಾರು ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ತೆಲಂಗಾಣದ ಖಮ್ಮಂ ಜಿಲ್ಲೆಯಲ್ಲಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದ್ದು, ಕಾರು ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮಾರದಲ್ಲಿ ಸೆರೆಯಾಗಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.
ఖమ్మం జాతీయ రహదారిపై కారు ఏక్సిడెంట్‌లో భార్య, భర్త మృతి#IndraSenaReddy#traffic#highwayspic.twitter.com/Hmb0nJDJFC
ಇದನ್ನೂ ಓದಿ:ಆತ್ಮಾಹುತಿ ಬಾಂಬ್​ ದಾಳಿ; ಇದರ ಹಿಂದೆ ಭಾರತದ ಕೈವಾಡವಿದೆ ಎಂದು ಆರೋಪಿಸಿದ ಪಾಕ್​
ಈ ಕುರಿತು ಪ್ರತಿಕ್ರಿಯಿಸಿರುವ ಸ್ಥಳೀಯ ಪೊಲೀಸ್​ ಅಧಿಕಾರಿಯೊಬ್ಬರು ಸೆಪ್ಟೆಂಬರ್​ 27ರಂದು ಘಟನೆ ನಡೆದಿದ್ದು, ಸಂತೋಷ್​ ಎಂಬುವವರು ತಮ್ಮ ತಾತನವರ ಅಂತ್ಯಸಂಸ್ಕಾರವನ್ನು ಮುಗಿಸಿ ಹೈದರಾಬಾದ್​ನತ್ತ ತೆರಳುತ್ತಿದ್ದರು. ಕಾರನ್ನು ವೇಗವಾಗಿ ಚಲಾಯಿಸಿದ ಪರಿಣಾಮ ಖಮ್ಮಂ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಕಾರನ್ನು ಚಲಾಯಿಸುತ್ತಿದ್ದ ಸಂತೋಷ್​ ಸ್ಥಳದಲ್ಲೇ ಮೃತಪಟ್ಟಿದ್ದು, ಅವರ ಪತ್ನಿ ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ. ಕಾರಿನಲ್ಲಿದ್ದ ನಾಲ್ವರು ಮಕ್ಕಳಿಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದಿನಲ್ಲಿ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದ್ದು, ಶೀಘ್ರದಲ್ಲೇ ಮತ್ತಷ್ಟು ಮಾಹಿತಿ ನೀಡಲಾಗುವುದು ಎಂದು ಸ್ಥಳೀಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − 11 =
Remember me
