ಉತ್ತರಪ್ರದೇಶದ:ವೇಗದಲ್ಲಿದ್ದ ಮಹೀಂದ್ರ ಸ್ಕಾರ್ಪಿಯೋ ಎಸ್‌ಯುವಿ ಕಾರಿನ ನಿಯಂತ್ರಣ ತಪ್ಪಿ, ರಸ್ತೆಬದಿ ಬಲೂನ್ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಹರಿದ ಭೀಕರ ಅಪಘಾತ ಉತ್ತರಪ್ರದೇಶದ ಮೀರತ್‌ನಲ್ಲಿ ಸಂಭವಿಸಿದೆ. ಘಟನೆಯಲ್ಲಿ ವ್ಯಾಪರಿ ಮೃತಪಟ್ಟಿದ್ದಾರೆ.
ಇದನ್ನೂ ಓದಿ:ದಸರಾ ದೀಪಾಲಂಕಾರ ಅವಧಿ ವಿಸ್ತರಣೆ, ಸಂಚಾರ ವ್ಯವಸ್ಥೆಯಲ್ಲಿ ಮಾರ್ಪಾಡು
ಈ ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ. ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಮೀರತ್‌ನ ರೈಲ್ವೇ ಕಾಲೋನಿ ನಿವಾಸಿ ಭಾನು ಎಂದು ಗುರುತಿಸಲಾಗಿದ್ದು, ರಸ್ತೆಬದಿಯಲ್ಲಿ ಬಲೂನ್‌ಗಳನ್ನು ಮಾರಾಟ ಮಾಡುತ್ತಿದ್ದರು.
ಇದನ್ನೂ ಓದಿ:ಬೆಂಗಳೂರಿನ ಈ ಪ್ರದೇಶಗಳಿಗೆ ನಾಳೆ ನೀರು ಪೂರೈಕೆಯಲ್ಲಿ ವ್ಯತ್ಯಯ; ಇಲ್ಲಿದೆ ಪೂರ್ಣ ವಿವರ…
ಕಾರನ್ನು ವೇಗವಾಗಿ ಚಲಾಯಿಸಿದ್ದರಿಂದ ಕಾರು ನಿಯಂತ್ರಣ ತಪ್ಪಿದ್ದು. ಎರಡು ಬಾರಿ ಪಲ್ಟಿ ಹೊಡೆದು ಲ್ಯಾಂಪ್‌ಪೋಸ್ಟ್‌ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಸ್ಥಳದಲ್ಲಿದ್ದ ವ್ಯಾಪಾರಿ ಬಾನು ಮೇಲೆ ಎಸ್‌ಯುವಿ ಬಿದ್ದಿದೆ. ಅಪಘಾತದ ತೀವ್ರತೆಗೆ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನೊಳಗೆ ಹಲವಾರು ಮದ್ಯದ ಬಾಟಲಿಗಳು ಪತ್ತೆಯಾಗಿದ್ದು, ಚಾಲಕ ಕುಡಿದು ವಾಹನ ಚಲಾಯಿಸಿದ್ದಾನೆ ಎಂದು ಹೇಳಿರುವ ಪೊಲೀಸರು, ಎಸ್​ಯುವಿಯನ್ನು ವಶಪಡಿಸಿಕೊಂಡು, ಹೆಚ್ಚಿನ ತನಿಖೆಯನ್ನು ಕೈಗೊಂಡಿದ್ದಾರೆ.
यूपी: मेरठ में 23 अक्टूबर की रात सड़क हादसे का CCTV फुटेज सामने आया। गुब्बारे बेच रहे भानू को अनियंत्रित स्कार्पियो ने कुचल दिया। उसकी मृत्यु हो गई। कार में सवार अनुभव गोयल पकड़ा गया, बाकी भाग गये। पुलिस ने अज्ञात में FIR दर्ज की है।#Meerut#UPPolice#UttarPradeshpic.twitter.com/GizLWN9xhc
— iMayankofficial 🇮🇳 (@imayankindian)October 25, 2023

ಅಪಘಾತದ ಪ್ರಕರಣದಲ್ಲಿ ಚಾಲಕ ಸೇರಿದಂತೆ ಐವರಿಗೆ ಗಾಯಗಳಾಗಿವೆ. ಆದರೆ, ಇನ್ನೂ ಯಾರ ಬಂಧನವೂ ಆಗಿಲ್ಲ ಎಂದು ವರದಿ ತಿಳಿಸಿದೆ,(ಏಜೆನ್ಸೀಸ್).
ಯಶ್ 19: ಈ ದಿನದಂದು ರಿಲೀಸ್​ ಆಗಬಹುದು ಟೀಸರ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × four =
Remember me
