ನವದೆಹಲಿ:ಸ್ಪೈಸ್​ ಜೆಟ್​ ಪೈಲಟ್​ ಓರ್ವನಿಗೆ ಕರೊನಾ ವೈರಸ್​ ತಗುಲಿದೆ. ಆದರೆ ಈ ಪೈಲಟ್​ ಮಾರ್ಚ್​ ಪ್ರಾರಂಭದಿಂದಲೂ ಯಾವುದೇ ಅಂತಾರಾಷ್ಟ್ರೀಯ ವಿಮಾನದಲ್ಲಿ ಕಾರ್ಯನಿರ್ವಹಿಸಿರಲಿಲ್ಲ ಎಂದು ವಿಮಾನಯಾನ ಸಂಸ್ಥೆ ಸ್ಪಷ್ಟಪಡಿಸಿದೆ.
ಸ್ಪೈಸ್​ಜೆಟ್​ನಲ್ಲಿ ಪ್ರಥಮ ಕೋವಿಡ್​-19 ಪ್ರಕರಣ ಪತ್ತೆಯಾಗಿದೆ. ನಮ್ಮ ಓರ್ವ ಪೈಲಟ್​​ಗೆ ಸೋಂಕು ಇರುವುದು ದೃಢಪಟ್ಟಿದೆ. ಮಾರ್ಚ್​ ಪ್ರಾರಂಭದಿಂದಲೂ ಯಾವುದೇ ಅಂತಾರಾಷ್ಟ್ರೀಯ ವಿಮಾನದಲ್ಲೂ ಕಾರ್ಯ ನಿರ್ವಹಣೆ ಮಾಡಿರಲಿಲ್ಲ. ಹಾಗಿದ್ದಾಗಿ ಕೂಡ ಸೋಂಕಿನ ಲಕ್ಷಣ ಕಾಣಿಸಿಕೊಂಡಿದ್ದರಿಂದ ತಪಾಸಣೆಗೆ ಒಳಪಡಿಸಲಾಗಿತ್ತು. ಮಾ.28ರಂದು ವೈದ್ಯಕೀಯ ವರದಿ ಬಂದಿದ್ದು, ಕರೊನಾ ಇರುವುದು ದೃಢಪಟ್ಟಿದೆ ಎಂದು ಸ್ಪೈಸ್​ಜೆಟ್​ನ ವಕ್ತಾರ ತಿಳಿಸಿದ್ದಾರೆ.
ಈ ಪೈಲಟ್​ ಕೊನೇದಾಗಿ ಮಾರ್ಚ್​ 21ರಂದು ಚೆನ್ನೈ-ದೆಹಲಿ ವಿಮಾನದಲ್ಲಿ ಕಾರ್ಯ ನಿರ್ವಹಿಸಿದ್ದ. ಅವತ್ತಿನಿಂದಲೇ ಆತನನ್ನು ಕ್ವಾರೆಂಟೈನ್​ನಲ್ಲಿ ಇಡಲಾಗಿತ್ತು. ಮುನ್ನೆಚ್ಚರಿಕಾ ಕ್ರಮವಾಗಿ ಆ ವಿಮಾನದ ಎಲ್ಲ ಸಿಬ್ಬಂದಿ, ಪೈಲಟ್​ ಸಂಪರ್ಕಕ್ಕೆ ಹೋಗಿರುವ ಮಂದಿಯನ್ನೆಲ್ಲ ಕ್ವಾರೆಂಟೈನ್​ನಲ್ಲಿ ಇಡಲಾಗಿದೆ. ಮುಂದಿನ 14 ದಿನ ಮನೆಯಲ್ಲೇ ಇರುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 1 =
Remember me
