ನವದೆಹಲಿ:ಸಾರ್ವಜನಿಕ ಸ್ಥಳಗಳಲ್ಲಿ ಎಂಜಲು ಉಗಿಯುವುದರಿಂದ, ತಂಬಾಕು ಜಗಿದು ರಸ ಉಗುಳುವುದರಿಂದ ಕರೊನಾ ವೈರಸ್​ ಸೋಂಕು ಹಬ್ಬುತ್ತದೆ ಎಂದು ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.
ಭಾನುವಾರ ಈ ಹೇಳಿಕೆ ಬಿಡುಗಡೆ ಮಾಡಿರುವ ಸರ್ಕಾರ, ಕರೊನಾ ಸೋಂಕು ಗಾಳಿಯಿಂದ ಹರಡುವುದಿಲ್ಲ ಎಂದು ಸ್ಪಷ್ಪಪಡಿಸಿದೆ.ದೇಶದಲ್ಲಿ ಕೋವಿಡ್​ 19 ಪಿಡುಗು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್​) ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡದಂತೆ, ಸಾರ್ವಜನಿಕ ಸ್ಥಳಗಳಲ್ಲಿ ಎಂಜಲು ಉಗಿಯದಂತೆ, ತಂಬಾಕು ಆಧಾರಿತ ಪದಾರ್ಥಗಳ ಜಗಿಯದಂತೆ ಸಲಹೆ ನೀಡಿದೆ. ದೇಶದ ಹಿತದೃಷ್ಟಿಯಿಂದ ಈ ಸಲಹೆಗಳನ್ನು ಪಾಲಿಸುವುದು ಮುಖ್ಯವಾಗುತ್ತದೆ ಎಂದು ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ ಅಗರ್​ವಾಲ್​ ಹೇಳಿದ್ದಾರೆ.
ಉತ್ತರ ಪ್ರದೇಶ ಸರ್ಕಾರ ಈಗಾಗಲೆ ಸಾರ್ವಜನಿಕ ಸ್ಥಳಗಳಲ್ಲಿ ಎಂಜಲು ಉಗಿಯುವುದು, ಧೂಮಪಾನ ಮತ್ತು ತಂಬಾಕು ಪದಾರ್ಥಗಳನ್ನು ಅಗಿದು, ಎಂಜಲು ಉಗಿಯುವುದನ್ನು ನಿಷೇಧಿಸಿದೆ. ಇನ್ನುಳಿದ ರಾಜ್ಯಗಳು ಕೂಡ ಈ ನಿಯಮವನ್ನು ಪಾಲಿಸಬೇಕು ಎಂದು ತಿಳಿಸಿದ್ದಾರೆ.
ಕರೊನಾ ವೈರಸ್​ ಗಾಳಿಯಿಂದ ಹರಡುವುದಕ್ಕೆ ಆಧಾರಗಳಿಲ್ಲ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಸ್ಪಷ್ಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 5 =
Remember me
