ನವದೆಹಲಿ:ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣ (Social Media) ಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಅಥವಾ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ. ಅಂಥದ್ದೇ ಮತ್ತೊಂದು ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.
ದೃಷ್ಟಿ ಭ್ರಮೆ ಎಂದರೇನು?ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ ನಾವು ನೋಡುವುದಕ್ಕೂ ಮತ್ತು ಗ್ರಹಿಸಿವುದಕ್ಕೂ ವಿಭಿನ್ನವಾಗಿರುತ್ತದೆ. ಇದನ್ನೇ ನಾವು ದೃಷ್ಟಿ ಭ್ರಮೆ (Optical Illusion​) ಎಂದು ಕರೆಯುತ್ತೇವೆ.
ಮೋಜಿನ ಮಾರ್ಗಈ ದೃಷ್ಟಿ ಭ್ರಮೆ ಅಥವಾ ಆಪ್ಟಿಕಲ್ ಇಲ್ಯೂಷನ್​ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆ. ಈ ಸವಾಲುಗಳನ್ನು ಸಾಕಷ್ಟು ಜನರು ಸ್ವೀಕರಿಸಿ, ಅದರಲ್ಲಿ ತೊಡಗುತ್ತಾರೆ. ನೆಟ್ಟಿಗರು ಹೊಸ ಹೊಸ ಆಪ್ಟಿಕಲ್ ಇಲ್ಯೂಷನ್ ಸವಾಲುಗಳನ್ನು ಸ್ವೀಕರಿಸುವುದನ್ನು ಆನಂದಿಸುತ್ತಾರೆ. ತಮ್ಮನ್ನು ಮನರಂಜಿಸುವ ಮೋಜಿನ ಮಾರ್ಗವಾಗಿದೆ ಮತ್ತು ಸ್ನೇಹಿತರೊಂದಿಗೆ ತಮ್ಮ ಬುದ್ಧಿವಂತಿಕೆಯನ್ನು ಸಾಬೀತುಪಡಿಸುವ ಮಾರ್ಗವಾಗಿದೆ ಎಂದು ಭಾವಿಸುತ್ತಾರೆ. ಇದರ ಹೊರತಾಗಿ, ವೀಕ್ಷಣಾ ಕೌಶಲ್ಯ ಮತ್ತು ಏಕಾಗ್ರತೆಯನ್ನು ಸುಧಾರಿಸುವಲ್ಲಿ ಆಪ್ಟಿಕಲ್ ಇಲ್ಯೂಷನ್​ಗಳು ಸಹ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ.
ನಿಮ್ಮ ವೀಕ್ಷಣಾ ಕೌಶಲ್ಯವನ್ನು ಹೆಚ್ಚಿಸಲು ನೀವು ಬಯಸುವಿರಾ? ಹಾಗಾದರೆ, ಈ ಸವಾಲನ್ನು ಸ್ವೀಕರಿಸಿ….

ಸದ್ಯ ವೈರಲ್​​​ ಆಗಿರುವ ಫೋಟೋದಲ್ಲಿ ಹಸಿರಾದ ಗಿಡ-ಮರಗಳ ಮುಂದೆ ಬಂಡೆಗಳಿರುವುದನ್ನು ಕಾಣಬಹುದು. ಬಂಡೆಗಳ ಮೇಲೆ ಹಲವಾರು ಕಪ್ಪು ಕೊಳವೆಯಂತಹ ರಚನೆಗಳು ಇವೆ. ಅವುಗಳ ನಡುವೆ ಒಂದು ಹಾವು ಇದೆ. ಆ ಹಾವು ಎಲ್ಲಿದೆ ಎಂಬುದನ್ನು ಪತ್ತೆಹಚ್ಚಬೇಕು. ಆದರೆ, ಪತ್ತೆಹಚ್ಚುವುದು ಅಷ್ಟು ಸುಲಭವಲ್ಲ. ಏಕೆಂದರೆ, ಪ್ರತಿಯೊಂದು ರಚನೆಯೂ ಕಪ್ಪು ಹಾವಿನಂತೆಯೇ ಕಾಣುವುದರಿಂದ ನೋಡುಗರನ್ನು ಗೊಂದಲಕ್ಕೆ ದೂಡುತ್ತಿದೆ. ಹೀಗಾಗಿ ಮೊದಲ ನೋಟದಲ್ಲಿ ಹಾವು ಎಲ್ಲಿದೆ ಎಂಬುದು ಗೊತ್ತಾಗುವುದಿಲ್ಲ. ಆದರೆ, ಸೂಕ್ಷ್ಮವಾಗಿ ಗಮನಿಸಿದರೆ ಹಾವು ಎಲ್ಲಿದೆ ಎಂಬುದನ್ನು ಪತ್ತೆಹಚ್ಚಬಹುದು. ನಿಮಗೆ 10 ಸೆಕೆಂಡ್​ ಸಮಯ ಕೊಡಲಾಗುತ್ತದೆ. ಅಷ್ಟರಲ್ಲಿ ನೀವು ಫೋಟೋದಲ್ಲಿ ಹಾವು ಎಲ್ಲಿದೆ ಎಂಬುದನ್ನು ಪತ್ತೆ ಹಚ್ಚಬೇಕು. ನಿಮ್ಮ ಸಮಯ ಈಗ ಶುರು.
10 ಸೆಕೆಂಡ್​ ಸಮಯದಲ್ಲಿ ನೀವು ಫೋಟೋದಲ್ಲಿರುವ ಹಾವನ್ನು ಪತ್ತೆಹಚ್ಚಿದ್ದರೆ, ನಿಮ್ಮ ಕಣ್ಣಿನ ಸಾಮರ್ಥ್ಯ ಮತ್ತು ಬುದ್ಧಿಮತ್ತೆಗೆ ನೀವೇ ಫುಲ್​ ಮಾರ್ಕ್ಸ್​ ಕೊಟ್ಟುಬಿಡಿ. ಒಂದು ವೇಳೆ ಹಾವು ಎಲ್ಲಿದೆ ಎಂದು ಗುರುತಿಸಲು ಸಾಧ್ಯವಾಗದೇ ಪರದಾಡುತ್ತಿದ್ದರೆ, ಈ ಕೆಳಗಿನ ಚಿತ್ರವನ್ನು ನೋಡಿ ನಿಮಗೆ ಉತ್ತರ ಸಿಗಲಿದೆ.(ಏಜೆನ್ಸೀಸ್​)


ಟೀಮ್​ ಇಂಡಿಯಾದ ಈ ಬ್ಯಾಟ್ಸ್​ಮನ್​ ಔಟ್​ ಮಾಡೋದು ಕಷ್ಟ ಅಂದ್ರು ಪಾಕ್​ ವೇಗಿ ಮೊಹಮ್ಮದ್​ ಅಮೀರ್​!

ಕಂಗನಾ ರಣಾವತ್​ ಕಪಾಳಕ್ಕೆ ಬಾರಿಸಿದ ಸಿಐಎಸ್​ಎಫ್​ ಮಹಿಳಾ ಕಾನ್​ಸ್ಟೇಬಲ್​ಗೆ ಚಿನ್ನದ ಉಂಗುರ ಗಿಫ್ಟ್​!

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:1 × 3 =
Remember me
