ನವದೆಹಲಿ:ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣ (Social Media) ಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಮತ್ತು ವಸ್ತುಗಳು ಅಥವಾ ಇನ್ಯಾವುದನ್ನೋ ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ. ಅಂಥದ್ದೇ ಮತ್ತೊಂದು ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.
ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ ನಾವು ನೋಡುವುದಕ್ಕೂ ಮತ್ತು ಗ್ರಹಿಸಿವುದಕ್ಕೂ ವಿಭಿನ್ನವಾಗಿರುತ್ತದೆ. ಇದನ್ನೇ ನಾವು ದೃಷ್ಟಿ ಭ್ರಮೆ (Optical Illusion​) ಎಂದು ಕರೆಯುತ್ತೇವೆ.
ಇದನ್ನೂ ಓದಿ:ರಶ್ಮಿಕಾ ಮಂದಣ್ಣ-ವಿಜಯ್​ ದೇವರಕೊಂಡ ಬೇರೆಯಾಗಲು ಈ ನಟ ಕಾರಣವಂತೆ!?
ಈ ದೃಷ್ಟಿ ಭ್ರಮೆ ಅಥವಾ ಆಪ್ಟಿಕಲ್ ಇಲ್ಯೂಷನ್​ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆ. ಈ ಸವಾಲುಗಳನ್ನು ಸಾಕಷ್ಟು ಜನರು ಸ್ವೀಕರಿಸಿ, ಅದರಲ್ಲಿ ತೊಡಗುತ್ತಾರೆ. ನೆಟ್ಟಿಗರು ಹೊಸ ಹೊಸ ಆಪ್ಟಿಕಲ್ ಇಲ್ಯೂಷನ್ ಸವಾಲುಗಳನ್ನು ಸ್ವೀಕರಿಸುವುದನ್ನು ಆನಂದಿಸುತ್ತಾರೆ. ತಮ್ಮನ್ನು ಮನರಂಜಿಸುವ ಮೋಜಿನ ಮಾರ್ಗವಾಗಿದೆ ಮತ್ತು ಸ್ನೇಹಿತರೊಂದಿಗೆ ತಮ್ಮ ಬುದ್ಧಿವಂತಿಕೆಯನ್ನು ಸಾಬೀತುಪಡಿಸುವ ಮಾರ್ಗವಾಗಿದೆ ಎಂದು ಭಾವಿಸುತ್ತಾರೆ. ಇದರ ಹೊರತಾಗಿ, ವೀಕ್ಷಣಾ ಕೌಶಲ್ಯ ಮತ್ತು ಏಕಾಗ್ರತೆಯನ್ನು ಸುಧಾರಿಸುವಲ್ಲಿ ಈ ಆಪ್ಟಿಕಲ್ ಇಲ್ಯೂಷನ್​ಗಳು ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ.
ನಿಮ್ಮ ವೀಕ್ಷಣಾ ಕೌಶಲ್ಯವನ್ನು ಹೆಚ್ಚಿಸಲು ನೀವು ಬಯಸುವಿರಾ? ಹಾಗಾದರೆ, ಈ ಸವಾಲನ್ನು ಸ್ವೀಕರಿಸಿ….

ಸದ್ಯ ವೈರಲ್​​​ ಆಗಿರುವ ಫೋಟೋದಲ್ಲಿ ಬೆಟ್ಟದ ಒಂದು ಭಾಗವನ್ನು ನೋಡಬಹುದು. ಫೋಟೋದ ಒಂದು ಭಾಗದಲ್ಲಿ ಹಿಮಾಲಯನ್​ ಬೆಕ್ಕು ಕುಳಿತಿದೆ. ಅದನ್ನು ಕೆಲವೇ ಸೆಕೆಂಡ್​ಗಳಲ್ಲಿ ಪತ್ತೆ ಹಚ್ಚಬೇಕು. ಆದರೆ, ಅದು ಸುಲಭವಲ್ಲ. ನಮ್ಮ ತಲೆ ಮತ್ತು ಕಣ್ಣಿಗೆ ಸ್ಪಲ್ಪ ಕೆಲಸ ಕೊಡಬೇಕಾಗುತ್ತದೆ. ಸೂಕ್ಷ್ಮವಾಗಿ ಗಮನಿಸಿದರೆ ಕಾಣಿಸುತ್ತದೆ. ಆದರೆ, ನಿಮಗೆ 10 ಸೆಕೆಂಡ್​ ಸಮಯ ಕೊಡಲಾಗುತ್ತದೆ. ಅಷ್ಟರಲ್ಲಿ ನೀವು ಹಿಮಾಲಯನ್​ ಬೆಕ್ಕನ್ನು ಪತ್ತೆ ಹಚ್ಚ ಬೇಕು. ನಿಮ್ಮ ಸಮಯ ಈಗ ಶುರು.
ಇದನ್ನೂ ಓದಿ:ಎದೆನೋವೆಂದು ಮುಂಜಾನೆ ಎಚ್ಚರಗೊಂಡ ಬಾಲಕಿ ಸಾವು: ವೈದ್ಯರು ಹೇಳಿದ್ದನ್ನು ಕೇಳಿ ಪಾಲಕರ ಆಕ್ರಂದನ
10 ಸೆಕೆಂಡ್​ ಸಮಯದಲ್ಲಿ ನೀವು ಫೋಟೋದಲ್ಲಿರುವ ಹಿಮಾಲಯನ್​ ಬೆಕ್ಕನ್ನು ಪತ್ತೆಹಚ್ಚಿದ್ದಲ್ಲಿ ನಿಮ್ಮ ಕಣ್ಣಿನ ಸಾಮರ್ಥ್ಯ ಮತ್ತು ಬುದ್ಧಿಮತ್ತೆಗೆ ನೀವೇ ಫುಲ್​ ಮಾರ್ಕ್ಸ್​ ಕೊಟ್ಟುಬಿಡಿ. ಒಂದು ವೇಳೆ ಹಿಮಾಲಯನ್​ ಬೆಕ್ಕನ್ನು ಗುರುತಿಸಲು ಸಾಧ್ಯವಾಗದೇ ಎಲ್ಲಿ ಅಂತಾ ಹುಡುಕಾಡುತ್ತಿದ್ದರೆ, ಈ ಕೆಳಗಿನ ಚಿತ್ರವನ್ನು ನೋಡಿ ನಿಮಗೆ ಉತ್ತರ ಸಿಗಲಿದೆ.

ಅಂದಹಾಗೆ ಹಿಮಾಲಯ ಬೆಕ್ಕನ್ನು ಹಿಮಾಲಯನ್​ ಲಿಂಕ್ಸ್​ ಹಾಗೂ ಪರ್ವತಗಳ ಭೂತ ಎಂದೂ ಕರೆಯುತ್ತಾರೆ. ಹಿಮಾಲಯನ್ ಲಿಂಕ್ಸ್ ಪರ್ವತಗಳಲ್ಲಿ ವಾಸಿಸುವ ಅತ್ಯಂತ ವಿರಳ ಮತ್ತು ಶಕ್ತಿಯುತ ಬೆಕ್ಕುಗಳಲ್ಲಿ ಒಂದಾಗಿದೆ. ಇದು ಪ್ರಸಿದ್ಧ ಹಿಮ ಚಿರತೆಗೆ ಮಾತ್ರ ಪ್ರತಿಸ್ಪರ್ಧಿಯಾಗಿದೆ.(ಏಜೆನ್ಸೀಸ್​)

ಈ ಫೋಟೋದಲ್ಲಿರುವ ಶ್ವಾನವನ್ನು 15 ಸೆಕೆಂಡ್​ನಲ್ಲಿ ಗುರುತಿಸುವಿರಾ? ಶೇ.90 ಮಂದಿಯ ಕೈಯಲ್ಲಿ ಆಗಿಲ್ಲ!

ನಿಮ್ಮ ಕಣ್ಣಿಗೊಂದು ಸವಾಲು: ಸಾಧ್ಯವಾದ್ರೆ ಈ ಫೋಟೋದಲ್ಲಿರೋ ನೀರಿನ ಬಾಟಲ್​ ಗುರುತಿಸಿ

ನಿಮ್ಮ ಕಣ್ಣಿಗೊಂದು ಸವಾಲು: ಜೀನಿಯಸ್​ ಮಾತ್ರ ಈ ಫೋಟೋದಲ್ಲಿರುವ ಜಿಂಕೆಯನ್ನು ಪತ್ತೆಹಚ್ಚಲು ಸಾಧ್ಯ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + 9 =
Remember me
