ರಾಜಸ್ಥಾನ:ಐಐಟಿ ಸೇರಿದಂತೆ ಇತರ ವಿದ್ಯಾರ್ಥಿಗಳು ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣ ಕಾಲೇಜು-ಹಾಸ್ಟೆಲ್​ನವರಿಗೂ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಈ ನಿಟ್ಟಿನಲ್ಲಿ ಅವರೆಲ್ಲ ಸುರಕ್ಷತಾ ಕ್ರಮಗಳ ಬಗ್ಗೆ ಯೋಚಿಸುತ್ತಿದ್ದು, ವಿನೂತನ ಕ್ರಮವೊಂದನ್ನು ಅಳವಡಿಕೆ ಮಾಡಿಕೊಳ್ಳಲಾಗಿದೆ.
ರಾಜಸ್ಥಾನದ ಕೋಟಾದಲ್ಲಿನ ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಇನ್​ಫಾರ್ಮೇಷನ್ ಟೆಕ್ನಾಲಜಿ (ಐಐಟಿ) ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಒಂದರ ಹಿಂದೊಂದರಂತೆ ನಡೆದಿದೆ. ಪಾಲಕರ ಒತ್ತಡ, ಓದಿನ ಒತ್ತಡ ಎದುರಿಸಲಾಗದೆ ಈ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಬೆಳಕಿಗೆ ಬಂದಿದೆ.
ಬಹಳಷ್ಟು ಮಂದಿ ಸೀಲಿಂಗ್ ಫ್ಯಾನ್​ಗೆ ನೇಣು ಹಾಕಿಕೊಂಡು ಸಾವಿಗೀಡಾದ್ದರಿಂದ, ಇಲ್ಲಿನ ಕಾಲೇಜು ಮತ್ತು ಪಿಜಿಗಳಲ್ಲಿನ ಸೀಲಿಂಗ್​ ಫ್ಯಾನ್​ ಒಳಗಡೆ ಸ್ಪ್ರಿಂಗ್ ಫಿಕ್ಸ್ ಮಾಡಲಾಗಿದ್ದು, ವಿದ್ಯಾರ್ಥಿಗಳು ಇವುಗಳಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದರೆ ಫ್ಯಾನ್​ ಹಾಗೇ ಕೆಳಕ್ಕೆ ಬಂದು ಬಿಡುವಂತೆ ಈ ಸ್ಪ್ರಿಂಗ್ ಅಳವಡಿಕೆ ಮಾಡಲಾಗಿದೆ.
ವಿದ್ಯಾರ್ಥಿಗಳಲ್ಲಿನ ಆತ್ಮಹತ್ಯೆ ಪ್ರಕರಣ ಕಡಿಮೆ ಮಾಡಲು ಇಂಥ ಕ್ರಮ ಕೈಗೊಳ್ಳಲಾಗಿದೆ ಎಂದು ಕೋಟಾದ ಹಾಸ್ಟೆಲ್ ಅಸೋಸಿಯೇಷನ್ ಅಧ್ಯಕ್ಷ ನವೀನ್ ಮಿತ್ತಲ್ ತಿಳಿಸಿದ್ದಾರೆ. ಇದೇ ಪ್ರದೇಶದಲ್ಲಿ ಒಂದೇ ವರ್ಷದಲ್ಲಿ 21 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. –ಏಜೆನ್ಸೀಸ್
#WATCH| Spring-loaded fans installed in all hostels and paying guest (PG) accommodations of Kota to decrease suicide cases among students, (17.08)https://t.co/laxcU1LHeWpic.twitter.com/J16ccd4X0S
— ANI MP/CG/Rajasthan (@ANI_MP_CG_RJ)August 18, 2023

ಇನ್ನುಮುಂದೆ ಕರಿಮಣಿ ಮಾಲೀಕ ನಾನಲ್ಲ: ವಿಚ್ಛೇದನ ಘೋಷಿಸಿದ ಕಿರಿಕ್ ಕೀರ್ತಿ

ಹೃದಯಾಘಾತದಿಂದ ಸಾವು: ಪುರುಷರಿಗೆ ಸಂಬಂಧಿಸಿದಂತೆ ಹೊರಬಿದ್ದಿದೆ ಆತಂಕಕಾರಿ ಮಾಹಿತಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 − 3 =
Remember me
