ಕೊಲಂಬೊ:ಶ್ರೀಲಂಕಾದ ನೌಕಾಪಡೆಯು ಅವರ ಸಮುದ್ರ ಪ್ರದೇಶದಲ್ಲಿ ಎರಡು ಟ್ರಾಲರ್‌ಗಳಲ್ಲಿ ಮೀನುಗಾರಿಕೆ ಮಾಡುತ್ತಿದ್ದ ಆರೋಪದ ಮೇಲೆ 15 ಭಾರತೀಯ ಮೀನುಗಾರರನ್ನು ಬಂಧಿಸಿದೆ ಎಂದು ಭಾನುವಾರ ಅಧಿಕೃತ ಹೇಳಿಕೆ ತಿಳಿಸಿದೆ.
“ಜುಲೈ 8ರ ರಾತ್ರಿ ಶ್ರೀಲಂಕಾದಲ್ಲಿ ಅಕ್ರಮ ಮೀನುಗಾರಿಕೆಯಲ್ಲಿ ತೊಡಗಿದ್ದ ಭಾರತೀಯ ಟ್ರಾಲರ್‌ಗಳನ್ನು ಹಿಡಿಯಲು ಶ್ರೀಲಂಕಾ ನೌಕಾಪಡೆ ಮತ್ತು ಕೋಸ್ಟ್ ಗಾರ್ಡ್ ವಿಶೇಷ ಕಾರ್ಯಾಚರಣೆ ನಡೆಸಿತು” ಎಂದು ಶ್ರೀಲಂಕಾ ನೌಕಾಪಡೆ ಹೇಳಿಕೆಯಲ್ಲಿ ತಿಳಿಸಿದೆ.
ಇದನ್ನೂ ಓದಿ:ಈ ದೇಶಗಳ ನಡುವೆ ಗಡಿ ಇರಬಾರದು; ಅಖಂಡ ಭಾರತದ ಪ್ರಸ್ತಾಪ ಮಾಡಿದ್ರಾ ಶ್ರೀಲಂಕಾ ಅಧ್ಯಕ್ಷ?.
ಜಾಫ್ನಾದಲ್ಲಿರುವ ಡೆಲ್ಫ್ಟ್ ದ್ವೀಪದಲ್ಲಿ ನಡೆಸಿದ ಕಾರ್ಯಾಚರಣೆಯು 15 ಭಾರತೀಯರನ್ನು ಬಂಧನಕ್ಕೆ ಕಾರಣವಾಯಿತು ಎಂದು ಅಧಿಕೃತ ಹೇಳಿಕೆ ತಿಳಿಸಿದೆ.
ಬಂಧಿತ ಮೀನುಗಾರರೊಂದಿಗೆ ವಶಪಡಿಸಿಕೊಂಡ ಟ್ರಾಲರ್‌ಗಳನ್ನು ಕಂಕಸಂತುರೈ ಬಂದರಿಗೆ ತಂದು ಮುಂದಿನ ಕಾನೂನು ಕ್ರಮಗಳಿಗಾಗಿ ಮೈಲಾಡಿ ಮೀನುಗಾರಿಕೆ ನಿರೀಕ್ಷಕರಿಗೆ ಹಸ್ತಾಂತರಿಸಲಾಗಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ:ಶ್ರೀಲಂಕಾದಲ್ಲಿ ಕಣ್ಣಿನ ಡ್ರಾಪ್ಸ್​ನಿಂದಾಗಿ ಸೋಂಕು! ಗುಜರಾತ್​ನ ಈ ಸಂಸ್ಥೆ ಮೇಲೆ ಆರೋಪ
ಕಳೆದ ತಿಂಗಳು, ಶ್ರೀಲಂಕಾ ನೌಕಾಪಡೆಯು ಅಕ್ರಮ ಈನುಗಾರಿಕೆ ಆರೋಪದ ಮೇಲೆ ತಮಿಳುನಾಡು ರಾಜ್ಯಕ್ಕೆ ಸೇರಿದ 22 ಮೀನುಗಾರರನ್ನು ಬಂಧಿಸಿತ್ತು.
ಇಲ್ಲಿಯವರೆಗೆ 2023ರಲ್ಲಿ, ಶ್ರೀಲಂಕಾ ನೌಕಾಪಡೆಯು 12 ಭಾರತೀಯ ಮೀನುಗಾರಿಕೆಗೆ ಬಳಸುವ ಟ್ರಾಲರ್‌ಗಳನ್ನು ವಶಪಡಿಸಿಕೊಂಡಿದ್ದು ಈ ವರ್ಷ 74 ಭಾರತೀಯ ಮೀನುಗಾರರನ್ನು ಬಂಧಿಸಿದೆ. ಬಂಧನದ ನಂತರ ಕಾನೂನು ಕ್ರಮಕ್ಕಾಗಿ ಅಧಿಕಾರಿಗಳಿಗೆ ಅವರನ್ನು ಹಸ್ತಾಂತರಿಸಲಾಗಿದೆ ಎಂದು ಹೇಳಿಕೆಯಲ್ಲಿ ಸೇರಿಸಲಾಗಿದೆ.
ಭಾರತ ಮತ್ತು ಶ್ರೀಲಂಕಾ ನಡುವಿನ ಬಾಂಧವ್ಯದಲ್ಲಿ ಮೀನುಗಾರರ ಸಮಸ್ಯೆ ವಿವಾದಾಸ್ಪದವಾಗಿದೆ. ಲಂಕಾ ನೌಕಾಪಡೆಯ ಸಿಬ್ಬಂದಿ ಪಾಕ್ ಜಲಸಂಧಿಯಲ್ಲಿ ಭಾರತೀಯ ಮೀನುಗಾರರ ಮೇಲೆ ಗುಂಡು ಹಾರಿಸಿದ್ದು ಶ್ರೀಲಂಕಾದ ಪ್ರಾದೇಶಿಕ ಜಲವನ್ನು ಅಕ್ರಮವಾಗಿ ಪ್ರವೇಶಿಸಿದ ಹಲವಾರು ಘಟನೆಗಳಲ್ಲಿ ಅವರ ದೋಣಿಗಳನ್ನು ವಶಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ:ಶ್ರೀಲಂಕಾದಿಂದ ತಂದು ನೆಟ್ಟʻಮರʼಕ್ಕಿದೆ ಹೈ ಸೆಕ್ಯುರಿಟಿ; ಈ ವೃಕ್ಷದ ಇತಿಹಾಸ ಗೊತ್ತಾ?
ಭಾರತ ಹಾಗೂ ಶ್ರೀಲಂಕಾ ನಡುವೆ ಇರುವ ಪಾಕ್ ಜಲಸಂಧಿಯು ತಮಿಳುನಾಡನ್ನು ಶ್ರೀಲಂಕಾದಿಂದ ಬೇರ್ಪಡಿಸುವ ನೀರಿನ ಕಿರಿದಾದ ಪಟ್ಟಿಯಾಗಿದ್ದು, ಎರಡೂ ದೇಶಗಳ ಮೀನುಗಾರರಿಗೆ ಒಳ್ಳೆಯ ಮೀನುಗಾರಿಕಾ ಕೇಂದ್ರವಾಗಿದೆ.
ಅಂತಾರಾಷ್ಟ್ರೀಯ ಕಡಲ ಗಡಿ ರೇಖೆಯನ್ನು ದಾಟಿ ಶ್ರೀಲಂಕಾದ ನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿರುವ ಆರೋಪದ ಮೇಲೆ ಭಾರತೀಯ ಮೀನುಗಾರರನ್ನು ಶ್ರೀಲಂಕಾ ಅಧಿಕಾರಿಗಳು ಬಂಧಿಸಿರುವ ಪ್ರಕರಣಗಳು ಈ ಹಿಂದೆಯೂ ನಡೆದಿವೆ.
ಉಭಯ ಪಕ್ಷಗಳ ನಡುವೆ ಹಲವು ಉನ್ನತ ಮಟ್ಟದ ಮಾತುಕತೆಗಳು ನಡೆದಿದ್ದರೂ ಭಾರತೀಯ ಮೀನುಗಾರರು ಶ್ರೀಲಂಕಾದ ಸಮುದ್ರದಲ್ಲಿ ಅಕ್ರಮ ಮೀನುಗಾರಿಕೆ ಪುನರಾವರ್ತಿತ ಸಮಸ್ಯೆಯಾಗಿದೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 3 =
Remember me
