ಬೆಂಗಳೂರು:ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ ಉದ್ಘಾಟನೆ ಜನವರಿ 22, 2024ರಂದು ನೆರವೇರಲಿದ್ದು, ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಕೋಟ್ಯಾಂತರ ಭಕ್ತರು ಕಾತುರದಿಂದ  ಕಾಯುತ್ತಿದ್ದಾರೆ. ಕಳೆದ ಕೆಲ ದಿನಗಳಿಂದ ಒಂದಲ್ಲ ಒಂದು ವಿಚಾರಕ್ಕೆ ರಾಮಮಂದಿರ ಎಲ್ಲರ ಗಮನ ಸೆಳೆಯುತ್ತಿದ್ದು, ದೇಶದ ಜನರು ಸಂಭ್ರಮದ ಕ್ಷಣಕ್ಕೆ ಕಾತುರದಿಂದ ಕಾಯುತ್ತಿದ್ದಾರೆ.
ಆದರೆ, ರಾಮಮಂದಿರ ಉದ್ಘಾಟನೆಯನ್ನು ಕೆಲವು ದುರುಳರು ಸಾಮಾಜಿಕ ಜಾಲತಾಣದ ಮೂಲಕ ಸುಳ್ಳು ಸುದ್ದಿಗಳನ್ನು ಹರಡಲು ಯತ್ನಿಸುತ್ತಿದ್ದಾರೆ. ಇದೀಗ ಶೃಂಗೇರಿ ಶಾರದಾ ಪೀಠದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಲಾಗಿದ್ದು, ಮಠದ ಆಡಳಿತ ಮಂಡಳಿ ಈ ಬಗ್ಗೆ ಸ್ಪಷ್ಟನೆ ನೀಡಿದೆ.
ಸುಮಾರು ಐದುನೂರು ವರ್ಷಗಳ ಸುದೀರ್ಘವಾದ ಹೋರಾಟದ ನಂತರ ಶ್ರೀರಾಮಚಂದ್ರನ ಅವತಾರ ಕ್ಷೇತ್ರವಾದ ಪವಿತ್ರ ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನಿಗೆ ಭವ್ಯವಾದ ದೇವಸ್ಥಾನದ ನಿರ್ಮಾಣವು ನೆರವೇರಿ ಇದೇ ಶೋಭಕೃತ್ ಪುಷ್ಯ ಶುಕ್ಲದ್ವಾದಶಿ (22-1-2024) ಸೋಮವಾರದಂದು ಪ್ರಾಣಪ್ರತಿಷ್ಠಾಮಹೋತ್ಸವವು ಅತ್ಯಂತ ವೈಭವೋಪೇತವಾಗಿ ಸಂಪನ್ನಗೊಳ್ಳಲಿದೆ. ಈ ವಿಷಯವು ಸಮಸ್ತ ಆಸ್ತಿಕಸ್ತೋಮಕ್ಕೂ ಅತ್ಯಂತಾನಂದದಾಯಕವಾಗಿದೆ.
ಆದರೆ ಇಂತಹ ಸಂದರ್ಭದಲ್ಲಿ ಕೆಲವರು ಧರ್ಮದ್ವೇಷಿಗಳು ಸಾಮಾಜಿಕ ಜಾಲತಾಣದಲ್ಲಿ ಶೃಂಗೇರಿ ಶಾರದಾಪೀಠದ ಪ್ರಸ್ತುತ ಅಧಿಪತಿಗಳಾದ ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ಭಾರತೀತೀರ್ಥ ಮಹಾಸ್ವಾಮಿಗಳವರ ಛಾಯಾಚಿತ್ರದ ಜೊತೆಗೆ ಶ್ರೀಗಳು ಈ ಪವಿತ್ರ ಪ್ರಾಣಪ್ರತಿಷ್ಠಾ ಮಹೋತ್ಸವವನ್ನು ವಿರೋಧಿಸುತ್ತಿದ್ದಾರೆ ಎಂಬ ಅರ್ಥವು ಬರುವ ಹಾಗೆ ಸಂದೇಶವನ್ನು ಹಾಕಿ ಪ್ರಚಾರ ಮಾಡುತ್ತಿದ್ದಾರೆ.
ಇದನ್ನೂ ಓದಿ:ಅಫ್ಘಾನಿಸ್ತಾನ ವಿರುದ್ಧದ ಮೊದಲ ಪಂದ್ಯಕ್ಕೆ ವಿರಾಟ್​ ಕೊಹ್ಲಿ ಅಲಭ್ಯ​; ಕಾರಣ ಹೀಗಿದೆ
ಆದರೆ ಜಗದ್ಗುರು ಶ್ರೀಶ್ರೀ ಭಾರತೀತೀರ್ಥ ಮಹಾಸ್ವಾಮಿಗಳವರು ಇಂತಹ ಯಾವುದೇ ಸಂದೇಶವನ್ನು ನೀಡಿರುವುದಿಲ್ಲ. ಇದು ಕೇವಲ ಧರ್ಮದ್ವೇಷಿಗಳಾದ ಕೆಲವರು ಮಾಡುತ್ತಿರುವ ಮಿಥ್ಯಾಪ್ರಚಾರವೇ ಸರಿ. ಆದ್ದರಿಂದ ಆಸ್ತಿಕಮಹಾಜನರು ಯಾವುದೇ ಕಾರಣಕ್ಕೆ ಇಂತಹ ಅಪಪ್ರಚಾರಗಳಿಗೆ ಬೆಲೆಯನ್ನು ಕೊಡಬಾರದು ಎಂದು ಮನವಿ ಮಾಡಲಾಗಿದೆ.
ಹಾಗೆಯೇ ದಕ್ಷಿಣಾಮ್ನಾಯ ಶೃಂಗೇರಿ ಶಾರದಾಪೀಠದ ಅಧಿಕೃತವಾದwww.sringeri.netಎಂಬ ವೆಬ್‌ಸೈಟಿನಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾದ ವಿಷಯಗಳನ್ನು ಮಾತ್ರವೇ ಪ್ರಾಮಾಣಿಕವಾಗಿ ಪರಿಗಣಿಸಬೇಕೆಂದು ಈ ಮೂಲಕ ನಿವೇದಿಸುತ್ತಿದ್ದೇವೆ.“sharadapeetham”ಯೂಟ್ಯೂಬ್ ಚ್ಯಾನೆಲ್ ಮೂಲಕ ಕಳೆದ ದೀಪಾವಳಿಯ (12-11-2023) ಸಂದರ್ಭದಲ್ಲಿ ಈ ಪವಿತ್ರ ಪ್ರಾಣಪ್ರತಿಷ್ಠಾ ಮಹೋತ್ಸವವನ್ನು ಮನಸ್ಸಿನಲ್ಲಿಟ್ಟುಕೊಂಡು ಶ್ರೀರಾಮತಾರಕ ಮಹಾಮಂತ್ರವನ್ನು ಜಪಿಸುವಂತೆ ಎಲ್ಲಾ ಆಸ್ತಿಕರಿಗೂ ಶೃಂಗೇರಿ ಜಗದ್ಗುರುಗಳು ಸಂದೇಶವನ್ನು ನೀಡಿದ್ದರು. ಅದನ್ನನುಸರಿಸಿ ಆಸ್ತಿಕರು ಅತ್ಯಧಿಕ ಸಂಖ್ಯೆಯಲ್ಲಿ ಮಂತ್ರಜಪವನ್ನು ಮಾಡುತ್ತಿರುವುದು ಈ ಸಂದರ್ಭದಲ್ಲಿ ಗಮನಾರ್ಹವಾಗಿದೆ.
ಹಾಗೆಯೇ ಅತ್ಯಂತ ಪವಿತ್ರವೂ ಅಪರೂಪವು ಆದ ಈ ಪ್ರಾಣಪ್ರತಿಷ್ಠಾಮಹೋತ್ಸವದ ಸುಸಂದರ್ಭದಲ್ಲಿ ಎಲ್ಲಾ ಆಸ್ತಿಕರು ಯಥಾಯೋಗ್ಯವಾಗಿ ಭಾಗವಹಿಸಿ ಶ್ರೀರಾಮನ ಪರಿಪೂರ್ಣಕೃಪೆಗೆ ಪಾತ್ರರಾಗಿ ಕೃತಾರ್ಥರಾಗಬೇಕೆಂದು ಜಗದ್ಗುರು ಮಹಾಸ್ವಾಮಿಗಳವರು ಆಶೀರ್ವದಿಸಿದ್ದಾರೆ ಎಂದು ಶೃಂಗೇರಿ ಶಾರದ ಪೀಠದ ಆಡಳಿತ ಮಂಡಳಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 4 =
Remember me
