ಶ್ರೀಶೈಲಂ ಜಲವಿದ್ಯುತ್​ ಸ್ಥಾವರದಲ್ಲಿ ಸಂಭವಿಸಿದ ಭೀಕರ ಅಗ್ನಿದುರಂತದಲ್ಲಿ ಒಟ್ಟು 9 ಮಂದಿ ಮೃತಪಟ್ಟಿದ್ದಾರೆ.ಗುರುವಾರ ರಾತ್ರಿಯೇ ಬೆಂಕಿ ಹೊತ್ತಿಕೊಂಡಿದ್ದರೂ ಶುಕ್ರವಾರ ಬೆಳಗ್ಗೆವರೆಗೆ ಅಲ್ಲಿದ್ದವರ ರಕ್ಷಣಾ ಕಾರ್ಯಾಚರಣೆ ನಡೆಸಲು ಸಾಧ್ಯವಾಗಿರಲಿಲ್ಲ. ಕಾರಣ ದಟ್ಟವಾದ ಹೊಗೆ ಆವರಿಸಿತ್ತು ಎಂದು ಪೊಲೀಸರೇ ಹೇಳಿದ್ದಾರೆ.
ಇದೀಗ ಶ್ರೀಶೈಲಂ ಹೈಡಲ್​ ಬೆಂಕಿ ದುರಂತದ ತನಿಖೆಯನ್ನು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್​ ರಾವ್​ ಅವರು ಸಿಐಡಿಗೆ ವಹಿಸಿದ್ದಾರೆ. ಜಲವಿದ್ಯುತ್​ ಸ್ಥಾವರದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಳ್ಳಲು ಕಾರಣವೇನು ಎಂಬುದನ್ನು ತನಿಖೆ ಮಾಡಲು ತಿಳಿಸಿದ್ದಾರೆ.ಇದನ್ನೂ ಓದಿ:18 ತಿಂಗಳಲ್ಲಿ 8 ಮಗುವಿಗೆ ಜನ್ಮ ನೀಡಿದ ಅಜ್ಜಿ: ಹುಬ್ಬೇರಿಸೋ ಮುನ್ನ ಒಮ್ಮೆ ಓದಿ ಬಿಡಿ!
ಮುಖ್ಯಮಂತ್ರಿ ನಿರ್ದೇಶನದ ಮೇರೆಗೆ ಸಿಐಡಿ ಹೆಚ್ಚುವರಿ ಪೊಲೀಸ್​ ಮಹಾನಿರ್ದೇಶಕ ಗೋವಿಂದ್​ ಸಿಂಗ್​ ಅವರನ್ನು ವಿಚಾರಣಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.
ಬೆಂಕಿ ದುರಂತದ ಸಮಗ್ರ ತನಿಖೆ ಮಾಡಿ, ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಗೋವಿಂದ್​ ಸಿಂಗ್​ ಅವರಿಗೆ ತಿಳಿಸಿದ್ದಾರೆ. ಇನ್ನು ಶ್ರೀಶೈಲಂ ಅಗ್ನಿದುರಂತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್​ ರಾವ್​ ಸೇರಿ ಹಲವರು ಆತಂಕ ವ್ಯಕ್ತಪಡಿಸಿದ್ದು, ಮೃತರಿಗೆ ಸಂತಾಪ ಸೂಚಿಸಿದ್ದಾರೆ.(ಏಜೆನ್ಸೀಸ್​)
ಕೋವಿಡ್​ನಿಂದ ಮೃತಪಟ್ಟ ಪೌರ ಕಾರ್ಮಿಕನ ಕುಟುಂಬಕ್ಕೆ ಒಂದು ಕೋಟಿ ರೂ. ಪರಿಹಾರ…!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + five =
Remember me
