ಹೈದರಾಬಾದ್:ಕರೊನಾ ವೈರಸ್​ನಿಂದಾಗಿ ಈಗ ಬಹುತೇಕ ಎಲ್ಲಾ ಪರೀಕ್ಷೆಗಳೂ ರದ್ದುಗೊಂಡಿವೆ. ಆದರೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಅತಿ ಮುಖ್ಯ ಎಂದೇ ಭ್ರಮಿಸಲಾಗಿರುವ ಎಸ್​ಎಸ್​ಎಲ್​ಸಿ ಪರೀಕ್ಷೆಯನ್ನು ಕೂಡ ಇದೀಗ ರದ್ದು ಮಾಡಲಾಗಿದೆ. ಅಂದಹಾಗೆ ಪರೀಕ್ಷೆ ರದ್ದುಗೊಂಡಿರುವ ರಾಜ್ಯ ತೆಲಂಗಾಣ.
ಎಸ್​ಎಸ್​ಎಲ್​ಸಿ ಪರೀಕ್ಷೆಯನ್ನು ರದ್ದು ಮಾಡಿ ತೆಲಂಗಾಣ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಕರೊನಾ ವೈರಸ್​ ಸೋಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ತೆಲಂಗಾಣ ರಾಜ್ಯದಲ್ಲಿ ಎಸ್ಎಸ್ಎಲ್​ಸಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದೆ. ಪರೀಕ್ಷೆ ನಡೆಸುವ ವೇಳೆ ವಿದ್ಯಾರ್ಥಿಗಳಿಗೆ ಸೋಂಕು ಹರಡುವ ಅಪಾಯವಿರುವ ಕಾರಣ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅದು ಹೇಳಿದೆ.
ಇದನ್ನೂ ಓದಿ:ಪರೀಕ್ಷೆಗೆ ಹೋದ ವಿದ್ಯಾರ್ಥಿನಿಯ ಶವ ನದಿಯಲ್ಲಿ! ಸಾವಿನ ಹಿಂದೆ ನೂರೊಂದು ಪ್ರಶ್ನೆ
ತೆಲಂಗಾಣದಲ್ಲಿ ಈ ವರ್ಷ 5,34,903 ವಿದ್ಯಾರ್ಥಿಗಳು ಎಸ್​ಎಸ್​ಎಲ್​ಸಿ ಪರೀಕ್ಷೆ ತೆಗೆದುಕೊಂಡಿದ್ದರು. ಎಲ್ಲರನ್ನೂ ಈ ವರ್ಷ ಪಾಸ್​ ಮಾಡಲಾಗುತ್ತಿದೆ. ವಿದ್ಯಾರ್ಥಿಗಳು ಇಲ್ಲಿಯವರೆಗೆ ಅಂದರೆ ಇಂಟರ್ನಲ್ ಪರೀಕ್ಷೆಯಲ್ಲಿ ತೆಗೆದುಕೊಂಡಿರುವ ಅಂಕಗಳ ಆಧಾರದ ಮೇಲೆ ಗ್ರೇಡ್ ನೀಡಲಾಗುವುದು ಎಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್‌ ತಿಳಿಸಿದ್ದಾರೆ.
ಎಲ್ಲವೂ ಸರಿಯಿದ್ದರೆ ಮಾರ್ಚ್​ ಅಂತ್ಯ ಇಲ್ಲವೇ ಏಪ್ರಿಲ್​ ಮೊದಲ ವಾರದಲ್ಲಿಯೇ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಯಬೇಕಿತ್ತು. ಕರ್ನಾಟಕ ಸೇರಿದಂತೆ ಎಲ್ಲಿಯೂ ಕರೊನಾದಿಂದಾಗಿ ಪರೀಕ್ಷೆ ನಡೆದಿಲ್ಲ. ಎಲ್ಲಾ ರಾಜ್ಯಗಳೂ ಪರೀಕ್ಷೆಯನ್ನು ಮುಂದೂಡಿದೆ. ಕರ್ನಾಟಕದಲ್ಲಿಯೂ ಪರೀಕ್ಷೆ ಮುಂದೂಡಲಾಗಿದ್ದು, ಜೂನ್ 25ರಿಂದ ಜುಲೈ 4ರವರೆಗೆ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ.
ಇದನ್ನೂ ಓದಿ:ಹಿಂದಿನ ದಿನ ಸಮಾಧಿ ಮಾಡಿದ್ದ ‘ತಂದೆ’ಯ ಶವ ಮರುದಿನ ಆಸ್ಪತ್ರೆಯ ಶವಾಗಾರದಲ್ಲಿ!
ಈ ನಡುವೆಯೇ, ತೆಲಂಗಾಣ ಸರ್ಕಾರ ಪರೀಕ್ಷೆ ರದ್ದು ಮಾಡಿದ್ದು, ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳ ಬಗ್ಗೆ ಪರಿಸ್ಥಿತಿ ಅವಲೋಕಿಸಿ ಮುಂದಿನ ದಿನಗಳಲ್ಲಿ ನಿರ್ಧಾರ ತೆಗೆದುಕೊಳ್ಳಲು ತೀರ್ಮಾನಿಸಿದೆ.(ಏಜೆನ್ಸೀಸ್​)
ಕರೊನಾದ ಬಗ್ಗೆ ಬಾಯಿ ಬಿಟ್ಟ ಚೀನಾ ಶ್ವೇತ ಪತ್ರ ಬಿಡುಗಡೆ ಮಾಡಿ ಹೇಳಿದ್ದೇನು?

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:six + 20 =
Remember me
