ನವದೆಹಲಿ:ಕರೊನಾ ಸೋಂಕಿನ ಹಿನ್ನಲೆಯಲ್ಲಿ ತೆಲಂಗಾಣ, ತಮಿಳುನಾಡು ಮತ್ತು ಪುದುಚೆರಿಗಳಲ್ಲಿ 10ನೇ ತರಗತಿ ವಿದ್ಯಾರ್ಥಿಗಳನ್ನು ತ್ರೖೆಮಾಸಿಕ, ಅರ್ಧವಾರ್ಷಿಕ ಪರೀಕ್ಷೆ ಮತ್ತು ಹಾಜರಾತಿ ಆಧರಿಸಿ ಮುಂದಿನ ತರಗತಿಗೆ ತೇರ್ಗಡೆ ಮಾಡಲು ನಿರ್ಧರಿಸಲಾಗಿದೆ.
ತಮಿಳುನಾಡಿನಲ್ಲಿ 9 ಲಕ್ಷಕ್ಕೂ ಹೆಚ್ಚಿನ ವಿದ್ಯಾರ್ಥಿಗಳು 10ನೇ ತರಗತಿಯಲ್ಲಿದ್ದು, ಅವರೆಲ್ಲರನ್ನು ಮುಂದಿನ ತರಗತಿಗೆ ತೇರ್ಗಡೆ ಮಾಡಿರುವುದಾಗಿ ತಿಳಿಸಲಾಗಿದೆ. ಲಾಕ್​ಡೌನ್ ಕಾರಣದಿಂದಾಗಿ ಮುಂದೂಡಲಾಗಿದ್ದ ಪರೀಕ್ಷೆ ಜೂನ್ 15ರಿಂದ ನಡೆಸಲು ನಿರ್ಧರಿಸಲಾಗಿತ್ತು. ಹೈ ಕೋರ್ಟ್ ಸೂಚನೆ ಮೇರೆಗೆ ಪಾಲಕರು ಮತ್ತು ಶಿಕ್ಷಕರೊಂದಿಗೆ ಮಂಗಳವಾರ ಸಭೆ ನಡೆಸಿ, ಪರೀಕ್ಷೆ ರದ್ದು ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ತೆಲಂಗಾಣದಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆ ರದ್ದು ಮಾಡಿರುವುದಾಗಿ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಸೋಮವಾರ ತಿಳಿಸಿದ್ದಾರೆ. 5.35 ಲಕ್ಷ ವಿದ್ಯಾರ್ಥಿಗಳಿಗೆ 6 ವಿಷಯಗಳ 11 ಪರೀಕ್ಷೆ ನಡೆಯಬೇಕಿತ್ತು. 3 ಪರೀಕ್ಷೆಗಳು ಮುಗಿಯುವಷ್ಟರಲ್ಲಿ ಲಾಕ್​ಡೌನ್ ಜಾರಿಯಾಯಿತು. ಪುದುಚೆರಿಯಲ್ಲಿಯೂ ಪರೀಕ್ಷೆ ರದ್ದು ಮಾಡಿರುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ.
ಪಠ್ಯ ಹೊರೆ, ಬೋಧನೆ ಅವಧಿ ಇಳಿಸಲು ಚಿಂತನೆ
ನವದೆಹಲಿ: ಕರೊನಾ ಹಾವಳಿ ಹಿನ್ನೆಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶಾಲಾ ಪಠ್ಯಕ್ರಮದ ಹೊರೆ ಹಾಗೂ ಬೋಧನಾ ಅವಧಿ ಇಳಿಸುವ ಬಗ್ಗೆ ಕೇಂದ್ರ ಸರ್ಕಾರ ಆಲೋಚಿಸಿದೆ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ (ಎಚ್​ಆರ್​ಡಿ) ಸಚಿವ ರಮೇಶ್ ಪೋಖ್ರಿಯಾಲ್ ಮಂಗಳವಾರ ಹೇಳಿದ್ದಾರೆ. ಈ ಬಗ್ಗೆ ಶಿಕ್ಷಕರು ಹಾಗೂ ಶಿಕ್ಷಣ ತಜ್ಞರು ಸಲಹೆ ನೀಡಬಹುದು. ಸಲಹೆಗಳನ್ನು ಸಾಮಾಜಿಕ ಜಾಲತಾಣದಲ್ಲಿ ಸಿಲಬಸ್​ಫಾರ್​ಸ್ಟುಡೆಂಟ್ಸ್2020ಗೆ ಹ್ಯಾಶ್​ಟ್ಯಾಗ್ ಮಾಡಬಹುದು ಎಂದು ತಿಳಿಸಿದ್ದಾರೆ.
ಆಗಸ್ಟ್ 15ರಂದು ಶಾಲೆಗಳ ಪುನಾರಂಭಕ್ಕೆ ಚಿಂತನೆ ನಡೆಸಲಾಗುತ್ತಿದೆಯೆಂದು ಸಚಿವರು ಮತ್ತೊಮ್ಮೆ ಹೇಳಿದ್ದಾರೆ.
ರಾಜ್ಯಗಳ ಶಿಕ್ಷಣ ಕಾರ್ಯದರ್ಶಿಗಳ ಸಭೆಯ ನಂತರ ಸಚಿವರು ಕೇಂದ್ರದ ಒಲವನ್ನು ಬಹಿರಂಗಪಡಿಸಿದ್ದಾರೆ. ವಿದ್ಯಾರ್ಥಿಗಳ ಆರೋಗ್ಯ ಮತ್ತು ಸುರಕ್ಷತೆ, ಆನ್​ಲೈನ್ ಅಥವಾ ಡಿಜಿಟಲ್ ಕಲಿಕೆ ಮುಂತಾದ ವಿಷಯಗಳನ್ನು ಸಭೆ ರ್ಚಚಿಸಿತು.
ಸಚಿವರ ಟ್ವಿಟ್ಟರ್ ಅಥವಾ ಫೇಸ್​ಬುಕ್ ಪೇಜ್​ಗೂ ಸಲಹೆ ಕಳುಹಿಸಬಹದು ಎಂದು ಎಚ್​ಆರ್​ಡಿ ಸಚಿವಾಲಯ ತಿಳಿಸಿದೆ.
ಹಳ್ಳಿಗಳಿಗೆ ಕಾಲಿಟ್ಟ ಕೊವಿಡ್​-19; ಸೋಂಕು ಮಣಿಸಲು ಹಳ್ಳಿಗರು ತೆಗೆದುಕೊಂಡ ನಿರ್ಧಾರ ಅನುಕರಣೀಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 4 =
Remember me
