ಚೆನ್ನೈ:ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಎಂ.ಕೆ.ಸ್ಟಾಲಿನ್ ಪುತ್ರ ಹಾಗೂ ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಧರ್ಮದ ಕುರಿತು ನೀಡಿದ್ದ ಹೇಳಿಕೆಯ ವಿವಾದ ತಣ್ಣಗಾಗುವ ಮುನ್ನ ಸ್ಟಾಲಿನ್ ಪುತ್ರಿ ಸೀತಾಮರೈ ಸ್ಟಾಲಿನ್ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಗಮನ ಸೆಳೆದಿದ್ದಾರೆ.
ಮೈಲಾಡುತುರೈ ಜಿಲ್ಲೆಯ ಸಿರ್ಕಾಜಿ ಗ್ರಾಮದ ಸತ್ತೇನಾಥರ್ ದೇವಸ್ಥಾನದಲ್ಲಿ ಸೀತಾಮರೈ ಭಾನುವಾರ ವಿಶೇಷ ಪೂಜೆ ಸಲ್ಲಿಸಿದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದಕ್ಕೆ ನೆಟ್ಟಿಗರು ಸಹ ಪ್ರತಿಕ್ರಿಯಿಸುತ್ತಿದ್ದಾರೆ. ಏನಂತೀರಿ ಮಿಸ್ಟರ್ ಸ್ಟಾಲಿನ್? ಏನಂತೀರಿ ಉದಯನಿಧಿಯರವೇ? ಇದು ಸನಾತನ ಧರ್ಮವಲ್ಲವೇ? ಎಂದು ಟ್ರೋಲ್‌ ಮಾಡಿ ಪ್ರಶ್ನಿಸುತ್ತಿದ್ದಾರೆ.
ಇದನ್ನೂ ಓದಿ:ವಿವಾದಕ್ಕೆ ಕಾರಣವಾದ ಸಿಪಿಐ(ಎಂ) ನಾಯಕರ ಮಾತು; ತಿರುಗಿಬಿದ್ದ ಸಂಘಟನೆಗಳು
ಸೀತಾಮರೈ ಸ್ಟಾಲಿನ್ ರನ್ನು ದೇವಸ್ಥಾನದ ಆಡಳಿತ ಮಂಡಳಿ ಸ್ವಾಗತಿಸಿತು. ಸ್ವಾಮಿ ಅಂಬಲ್ ಚಟ್ಟನಾಥರ್ ಮತ್ತು ಅಷ್ಟ ಭೈರವ ದೇವರಿಗೆ ಪೂಜೆ ಸಲ್ಲಿಸಿದರು. ಈ ದೇವಾಲಯದಲ್ಲಿ ಪೂಜೆ ಸಲ್ಲಿಸಿದರೆ ಪರಮೇಶ್ವರನ ಕೃಪೆಗೆ ಪಾತ್ರರಾಗುತ್ತಾರೆ ಎಂಬ ನಂಬಿಕೆ ಇದೆ. ಹೀಗಾಗಿ ಉದಯನಿಧಿ ಸಹೋದರಿ ಇಲ್ಲಿ ಪೂಜೆ ಸಲ್ಲಿಸಿದ್ದಾರೆ.
VIDEO | ಗೋಲ್ಡನ್ ಟೆಂಪಲ್​ಗೆ ರಾಹುಲ್​ ಗಾಂಧಿ ಭೇಟಿ; ತರಕಾರಿ ಕತ್ತರಿಸಿ, ಪೂಜೆ ಸಲ್ಲಿಸಿದ ಕಾಂಗ್ರೆಸ್​ ನಾಯಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + 14 =
Remember me
