ಮಡಗಾಸ್ಕರ್:ಕಾಲ್ತುಳಿತವೊಂದರಲ್ಲಿ ಕನಿಷ್ಠ 12 ಜನರು ಮೃತಪಟ್ಟು, 80 ಜನರು ಗಾಯಗೊಂಡಿರುವ ಘಟನೆ ಮಡಗಾಸ್ಕರ್​ದ ಅಂಟಾನಾನರಿವೊ ಎಂಬಲ್ಲಿ ನಡೆದಿದೆ.ಇಂಡಿಯನ್ ಓಷನ್ ಐಲ್ಯಾಂಡ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭಕ್ಕಾಗಿ ಕ್ರೀಡಾಭಿಮಾನಿಗಳು ರಾಷ್ಟ್ರೀಯ ಕ್ರೀಡಾಂಗಣಕ್ಕೆ ಪ್ರವೇಶಿಸಲು ಪ್ರಯತ್ನಿಸಿದಾಗ ಕಾಲ್ತುಳಿತ ಸಂಭವಿಸಿದ್ದು, ಗಾಯಗೊಂಡವರಲ್ಲಿ 11 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಮಡಗಾಸ್ಕರ್​​ದ ಪ್ರಧಾನಿ ಕ್ರಿಶ್ಚಿಯನ್ ಎನ್ಟ್ಸೆ ಹೇಳಿದ್ದಾರೆ.
ಇದನ್ನೂ ಓದಿ:ರೈಲ್ವೆ ಟಿಸಿಯಂತೆ ನಟಿಸಿ ಅಕ್ರಮವಾಗಿ ದಂಡ ವಸೂಲಿ ಮಾಡುತ್ತಿದ್ದ ಯವಕ ಅಂದರ್​​..
ವಿದೇಶಿ ಮಾಧ್ಯಮ ಅಲ್ ಜಜೀರಾ, ಬರಿಯಾ ಸ್ಟೇಡಿಯಂನ ನಡೆದ ಹಿಂದೂ ಮಹಾಸಾಗರ ದ್ವೀಪದ ಕ್ರೀಡಾಕೂಟದ ಸಮಾರಂಭದಲ್ಲಿ ಪಾಲ್ಗೊಳ್ಳಲು ಅಪಾರ ಜನರು ಸೇರಿದ್ದರು. ಈ ವೇಳೆ ಪ್ರವೇಶದ್ವಾರದ ಬಳಿ ದೊಡ್ಡ ಕಾಲ್ತುಳಿತ ನಡೆದಿದೆ ಎನ್ನಲಾಗಿದ್ದು, ಆದರ ಇದಕ್ಕೆ ನಿಖರ ಕಾರಣ ಸ್ಪಷ್ಟವಾಗಿಲ್ಲ ಎಂದು ವರದಿ ಮಾಡಿದೆ.
ಈ ಮಾರಣಾಂತಿಕ ಘಟನೆಯಲ್ಲಿ ಜನರರು ಜನರು ತಮ್ಮ ಬೂಟುಗಳನ್ನು ಮತ್ತು ಕಳೆದುಹೋದ ವಸ್ತುಗಳನ್ನು ಹುಡುಕಲು ಪ್ರಯತ್ನಿಸುತ್ತಿರುವ ದೃಶ್ಯ ಕಂಡುಬಂದಿದ್ದು, ಕ್ರೀಡಾಂಗಣದ ಒಳಗಿನ ಇತರ ಚಿತ್ರಗಳನ್ನು ಸಾಮಾಜಿಕ ಜಾಲಾತಾಣದಲ್ಲಿ ಹಂಚಿಕೊಳ್ಳಲಾಗಿದ್ದು, ಈ ಹಿಂದೆ 2019ರಲ್ಲಿ ಮಹಾಮಸಿನಾ ಕ್ರೀಡಾಂಗಣದಲ್ಲಿ ನಡೆದ ಇದೇ ರೀತಿಯ ಘಟನೆಯಲ್ಲಿ ಕನಿಷ್ಠ 15 ಜನರು ಮೃತಪಟ್ಟಿದ್ದರು.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + 1 =
Remember me
