ಲಖನೌ:ಸತ್ಸಂಗ ಕಾರ್ಯಕ್ರಮದಲ್ಲಿ ಉಂಟಾದ ಭೀಕರ ಕಾಲ್ತುಳಿತದಿಂದಾಗಿ 27ಕ್ಕೂ ಹೆಚ್ಚು ಮಂದಿ ಮೃತಪಟ್ಟು ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಹತ್ರಾಸ್​ ಜಿಲ್ಲೆಯ ಸಿಕಂದರಾವು ಪಟ್ಟಣದ ಫುಲ್ರೈ ಗ್ರಾಮದಲ್ಲಿ ನಡೆದಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯ ವೈದ್ಯಕೀಯ ಅಧಿಕಾರಿ ಉಮೇಶ್​ ತ್ರಿಪಾಠಿ, ಸತ್ಸಂಗದಲ್ಲಿ ಉಂಟಾದ ಕಾಲ್ತುಳಿತದಿಂದಾಗಿ 25 ಮಹಿಳೆಯರು, 2 ಪುರುಷರು ಒಳಗೊಂಡಂತೆ 27 ಮಂದಿ ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದ್ದು, ಗಾಯಾಳುಗಳನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
#WATCH| Etah, Uttar Pradesh: Several people have died in a stampede at a religious event in Hathras.CMO Etah, Umesh Kumar Tripathi says, "27 bodies have arrived at the post-mortem house so far, including 25 women and 2 men. Many injured have also been admitted. Further details…pic.twitter.com/7tgZEQXHEe
ಇದನ್ನೂ ಓದಿ:ಕಾಲಿನ ಬದಲು ಖಾಸಗಿ ಅಂಗಕ್ಕೆ ಶಸ್ತ್ರಚಿಕಿತ್ಸೆ ಮಾಡಿದ ವೈದ್ಯರು; ಮುಂದೆ ನಡೆದಿದ್ದು ಮಾತ್ರ…!
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಹತರಾಸ್​ ಜಿಲ್ಲೆಯ ಫುಲ್ರೈ ಗ್ರಾಮದಲ್ಲಿ ಭೋಲೆ ಬಾಬಾರ ಸತ್ಸಂಗ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮವನ್ನು ವೀಕ್ಷಿಸಲು ಹೆಚ್ಚಿನ ಸಂಖ್ಯೆಯಲ್ಲಿ ಜನರು ಬಂದಿದ್ದರು. ಈ ವೇಳೆ ನೂಕುನುಗ್ಗಲಾಗಿದ್ದು, ಕಾಲ್ತುಳಿತ ಉಂಟಾಗಿದೆ. ಘಟನೆಯಲ್ಲಿ 27 ಮಂದಿ ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಲಾಗುತ್ತಿದ್ದು, ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ವಿಚಾರ ತಿಳಿಯುತ್ತಿದ್ದಂತೆ ಸಿಎಂ ಯೋಗಿ ಆದಿತ್ಯನಾಥ್​ ತನಿಖೆಗೆ ಆದೇಶಿಸಿದ್ದು, ಅಧಿಕಾರಿಗಳಿಗೆ ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸುವಂತೆ ಸೂಚಿಸಿದ್ದಾರೆ. ಆಗ್ರಾ ಎಡಿಜಿ ಮತ್ತು ಅಲಿಗಢದ ಆಯುಕ್ತರ ನೇತೃತ್ವದಲ್ಲಿ ತನಿಖೆ ನಡೆಯಲಿದ್ದು, ಮೃತರ ಬಗ್ಗೆ ಇನ್ನಷ್ಟೇ ಮಾಹಿತಿ ತಿಳಿದು ಬರಬೇಕಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + 17 =
Remember me
