ತಮಿಳುನಾಡು:ಉಚಿತ ಸೀರೆ ಹಂಚುವ ವೇಳೆ ಉಂಟಾದ ಕಾಲ್ತುಳಿತದಿಂದ ನಾಲ್ವರು ವೃದ್ಧೆಯರು ಸಾವನ್ನಪ್ಪಿದ್ದಾರೆ. 11 ಜನರು ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಈ ಘಟನೆ ತಿರುಪತ್ತೂರು ಜಿಲ್ಲೆಯ ವನ್ನಿಯಂಬಾಡಿ ಬಳಿ ನಡೆದಿದೆ.
ಪೊಲೀಸರು ಖಚಿತ ಪಡಿಸಿರುವ ಮಾಹಿತಿಯಂತೆ ‘ತೈಪೂಸಂ’ ಹಬ್ಬದ ಪ್ರಯುಕ್ತ ಅಯ್ಯಪ್ಪನ್ ಎಂಬಾತ ಉಚಿತ ಸೀರೆ ಹಾಗೂ ಪಂಚೆ ವಿತರಣೆ ಮಾಡುತ್ತಿದ್ದ. ಇದಕ್ಕೂ ಮೊದಲು ಟೋಕನ್ ಪಡೆಯಲು ಸಾಕಷ್ಟು ಜನರು ಮುಗಿಬಿದ್ದಿದ್ದಾರೆ. ಈ ವೇಳೆ ಉಂಟಾದ ಕಾಲ್ತುಳಿತದಿಂದ ಅಚಾತುರ್ಯ ಸಂಭವಿಸಿದೆ.
ಘಟನೆಯಲ್ಲಿ ನಾಲ್ವರು ವೃದ್ಧೆಯರು ಸಾವನ್ನಪ್ಪಿದ್ದು ಸಾಕಷ್ಟು ಸಂಖ್ಯೆಯಲ್ಲಿ ಜನರು ಗಾಯಗೊಂಡಿದ್ದಾರೆ. ಕೂಡಲೇ ಸ್ಥಳೀಯ ನಿವಾಸಿಗಳ ಸಹಕಾರದಿಂದ ಪ್ರಾಥಮಿಕ ಚಿಕಿತ್ಸೆ ನೀಡಿ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಘಟನೆಯ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ವರದಿಯಾಗಿದೆ.
ಹಿಂದು ಸಂಪ್ರದಾಯದಂತೆ ತಮಿಳುನಾಡಿನಲ್ಲಿ ಸುಮಾರು ಒಂದು ತಿಂಗಳ ಕಾಲ ತೈಪೂಸಂ ಹಬ್ಬ ಆಚರಣೆ ಮಾಡಲಾಗುತ್ತದೆ. ಹೀಗಾಗಿ ಜನರಿಗೆ ಅಯ್ಯಪ್ಪನ್ ಎಂಬಾತ ಸೀರೆ ವಿತರಣೆ ಮಾಡಲು ಮುಂದಾಗಿದ್ದ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × four =
Remember me
