ಅಯೋಧ್ಯೆ:ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಭವ್ಯವಾದ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯದಲ್ಲಿ ಕೈಜೋಡಿಸುವಂತೆ ಗದಗ ಜಿಲ್ಲೆಯ ಮುಂಡರಗಿ ಶಿಲ್ಪಿ ನಾಗಮೂರ್ತಿ ಅವರಿಗೆ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಆಹ್ವಾನ ನೀಡಿದೆ. ನಾಗಮೂರ್ತಿ ಅವರು ಮೂಲತಃ ಕೊಪ್ಪಳ ಜಿಲ್ಲೆ ಕಾತರಕಿ ಗ್ರಾಮದ ನಿವಾಸಿ. ಪ್ರಸ್ತುತ ಮುಂಡರಗಿಯಲ್ಲಿ ಶಿಲ್ಪ ಕಲೆ ಮಾಡುತ್ತಿದ್ದಾರೆ. ಅಂದಹಾಗೆ ನಾಗಮೂರ್ತಿ ಮೈಸೂರು ಜಿಲ್ಲೆ ಎಚ್.ಡಿ ಕೋಟೆಯಲ್ಲಿ ದೊರೆಯುವ ಕರಿಕಲ್ಲುಗಳನ್ನ (ಕೃಷ್ಣ ಶಿಲೆ) ಬಳಸಿ ಮೂರ್ತಿ ತಯಾರಿ ಮಾಡುತ್ತಾರೆ.

ಶಿವಮೊಗ್ಗ ಜಿಲ್ಲೆಯ ಸಾಗರದ ಶ್ರೀಗಂಧ ಕಲಾ ಸಂಕಿರಣ ಕಲಾ ವಿದ್ಯಾಲಯದಲ್ಲಿ ವ್ಯಾಸಂಗ ಮಾಡಿರುವ ನಾಗಮೂರ್ತಿ ಅವರು ಕೆಲ ವರ್ಷ ಶಿಲ್ಪ ಕಲೆಯ ಬಗ್ಗೆ ಮುಂಡರಗಿ ವೆಂಕಟೇಶ ಸುತಾರ ಎಂಬವರ ಹತ್ತಿರ ತರಬೇತಿ ಪಡೆದು, ಈಗ ಸ್ವತಂತ್ರವಾಗಿ ಸ್ವ ಉದ್ಯೋಗ ಆರಂಭಿಸಿದ್ದಾರೆ. ಶಿಲ್ಪಕಲೆಯಲ್ಲಿ ಬಹುಕೌಶಲ ಹೊಂದಿರುವ ನಾಗಮೂರ್ತಿಗೆ ಇದೀಗ ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಆಮಂತ್ರಣ ನೀಡಿರುವುದು ತುಂಬಾ ಸಂತಸ ತಂದಿದೆ.


ಅಯೋಧ್ಯೆ ಶ್ರೀರಾಮಮಂದಿರ ನಿರ್ಮಾಣ ಕಾರ್ಯದಲ್ಲಿ ತೊಡಗಿಕೊಳ್ಳಲಿರುವ ನಾಗಮೂರ್ತಿಗೆ ಸ್ಥಳೀಯರು ಸನ್ಮಾನ ಮಾಡಿ ಗೌರವಿಸಿ ಕಳಿಸಿಕೊಟ್ಟಿದ್ದಾರೆ. ಇನ್ನು ನಾಗಮೂರ್ತಿ ಅವರು ಅಯೋಧ್ಯೆಗೆ ತೆರಳಿ ಶ್ರೀರಾಮನ ದರ್ಶನ ಪಡೆದು ಜನ್ಮ ಪಾವನ ಮಾಡಿಕೊಳ್ಳುತ್ತೇನೆ. ಈ ಸೌಭಾಗ್ಯ ತನಗೆ ಒದಗಿ ಬಂದಿರುವುದು ತುಂಬಾ ಖುಷಿಯಾಗಿದೆ. ಶ್ರೀರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ನನಗೆ ಆಹ್ವಾನ ಬಂದಿರುವುದು ನನ್ನ ಪೂರ್ವ ಜನ್ಮದ ಪುಣ್ಯ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ.
ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಭಾರತ ಮತ್ತು ವಿದೇಶದಿಂದ 10 ಕೋಟಿಗೂ ಹೆಚ್ಚು ಹಿಂದೂ ಕುಟುಂಬಗಳನ್ನು ಈ ಸಮಾರಂಭಕ್ಕೆ ಆಹ್ವಾನಿಸುತ್ತಿದೆ ಎಂದು ವಿಶ್ವ ಹಿಂದೂ ಪರಿಷತ್ ಪ್ರಕಟಿಸಿದೆ.
ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ; ಅರ್ಚಕರ ತಂಡ ಮುನ್ನಡೆಸಲಿರುವ ಕಾಶಿಯ ವೇದ ವಿದ್ವಾಂಸ

‘ಕೋಟ್ಯಾಂತರ ಹಿಂದೂಗಳ ಕನಸು ನನಸಾಗಿದೆ’: ಭವ್ಯವಾದ ರಾಮಮಂದಿರದ ವಿಡಿಯೋ ಹಂಚಿಕೊಂಡ ಕೆಸಿಆರ್ ಪುತ್ರಿ ಕವಿತಾ


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + 5 =
Remember me
