ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಬಿಜೆಪಿ ಸರ್ಕಾರವೇ ಆಡಳಿತಕ್ಕೆ ಬರುತ್ತದೆ ಎಂದು ರಾಜ್ಯ ಬಿಜೆಪಿ ಮುಖ್ಯಸ್ಥ ಮನೋಜ್​ ತಿವಾರಿ ಭರವಸೆ ವ್ಯಕ್ತಪಡಿಸಿದ್ದಾರೆ.
ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಇವತ್ತು ನನ್ನ ಸಿಕ್ಸ್ತ್​ ಸೆನ್ಸ್​ ಹೇಳುತ್ತಿದೆ. ಅಲ್ಲದೆ ಇವತ್ತಿನ ಸಂದರ್ಭ ನೋಡಿದರೆ ಮತದಾರರು ಬಿಜೆಪಿ ಪರವಾಗಿಯೇ ಇದ್ದಾರೆ ಎಂಬ ನಂಬಿಕೆ ಬಲವಾಗುತ್ತಿದೆ ಎಂದು ಮತಗಟ್ಟೆಯ ಬಳಿ ಸುದ್ದಿಗಾರರೊಂದಿಗೆ ಮಾತನಾಡುತ್ತ ಹೇಳಿದರು.
ನನ್ನ ನೇತೃತ್ವದಲ್ಲಿ ದೆಹಲಿ ಚುನಾವಣೆ ಇದೇ ಮೊದಲಬಾರಿಗೆ ನಡೆಯುತ್ತಿದೆ. ನನಗೆ ನನ್ನ ತಾಯಿಯ ಆಶೀರ್ವಾದ ಇದೆ. ಇಲ್ಲಿನ ಜನ ಹಾರೈಕೆ ಇದೆ. ಗೆದ್ದೇ ಗೆಲ್ಲುತ್ತೇವೆ ಎಂದು ಹೇಳಿದರು.
ಬಿಜೆಪಿ 50ಕ್ಕಿಂತಲೂ ಹೆಚ್ಚು ಸೀಟ್​ಗಳನ್ನು ಗೆದ್ದು ಸರ್ಕಾರ ರಚನೆ ಮಾಡುತ್ತದೆ. ಪ್ರಧಾನಿ ಮೋದಿ ನೇತೃತ್ವದ ಬಿಜೆಪಿಗೆ ಜನರು ಆಶೀರ್ವಾದ ಮಾಡುತ್ತಾರೆ ಎಂಬ ನಂಬಿಕೆ ಇದೆ ಎಂದರು.
ಹಾಗೇ ದೆಹಲಿಯಲ್ಲಿ ಬಿಜೆಪಿಯಿಂದ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ಚುಟುಕಾಗಿಯಷ್ಟೇ ಉತ್ತರಿಸಿದರು. ಯಾರೋ ಒಬ್ಬರು ಅತ್ಯುತ್ತಮವಾದ ಅಭ್ಯರ್ಥಿಯೇ ಇದ್ದಾರೆ ಎಂದು ಹೇಳಿದರು. ಅಲ್ಲದೆ, ಸಿಎಂ ಕ್ಯಾಂಡಿಡೇಟ್​ ಬಗ್ಗೆ ಹೆಚ್ಚಿನ ಪ್ರಶ್ನೆ ಬೇಡ ಎಂದರು.
ಇಂದು ಮತದಾನದ ಹಿನ್ನೆಲೆಯಲ್ಲಿ ಶುಕ್ರವಾರ ಮನೋಜ್​ ತಿವಾರಿ ದೇವಸ್ಥಾನಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು. ಬಳಿಕ ರಿಲ್ಯಾಕ್ಸ್ ಆಗಿ ಕ್ರಿಕೆಟ್​ ಆಡಿದ್ದರು.
2015ರ ವಿಧಾನಸಭಾ ಚುನಾವಣೆಯಲ್ಲಿ ಆಮ್​ ಆದ್ಮಿ ಪಕ್ಷ ದೆಹಲಿಯ ಒಟ್ಟು 70 ಕ್ಷೇತ್ರಗಳಲ್ಲಿ 67 ಸೀಟುಗಳನ್ನು ಗೆದ್ದು ಅಚ್ಚರಿ ಮೂಡಿಸಿತ್ತು. ಉಳಿದ ಮೂರು ಸೀಟುಗಳು ಬಿಜೆಪಿಗೆ ಬಂದಿದ್ದರೆ, ಕಾಂಗ್ರೆಸ್ ಶೂನ್ಯ ಸಾಧನೆ ಮಾಡಿತ್ತು. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + 18 =
Remember me
