ಕೋಯಿಕ್ಕೋಡ್​:ಇಲ್ಲಿನ ಕರಿಪ್ಪೂರ್​ ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ಏರ್​ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಕೇರಳ ಸರ್ಕಾರ 10 ಲಕ್ಷ ರೂ.ಘೋಷಣೆ ಮಾಡಿದೆ.
ಶುಕ್ರವಾರ ರಾತ್ರಿ ದುಬೈನಿಂದ ಬಂದ ವಿಮಾನ 35 ಅಡಿ ಆಳದ ಕಮರಿಗೆ ಬಿದ್ದು ಎರಡು ಹೋಳಾಗಿದೆ. ಈ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 19ಕ್ಕೆ ಏರಿದೆ. 149 ಗಾಯಾಳುಗಳು ಮಲಪ್ಪುರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಇಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್​, ಕೇರಳ ರಾಜ್ಯಪಾಲ ಅರಿಫ್​ ಮೊಹಮ್ಮದ್​ ಖಾನ್​ ಅವರ ಉಪಸ್ಥಿತಿಯಲ್ಲಿ ಉನ್ನತ ಮಟ್ಟದ ಸಭೆ ನಡೆದಿದೆ. ಸಭೆಯ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದ ಮುಖ್ಯಮಂತ್ರಿ, ಮೃತಪಟ್ಟವರ ಕುಟುಂಬಗಳಿಗೆ 10 ಲಕ್ಷ ರೂ.ನೀಡಲು ಕೇರಳ ಸರ್ಕಾರ ನಿರ್ಧಾರ ಮಾಡಿದೆ. ಹಾಗೇ, ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ರಾಜ್ಯಸರ್ಕಾರವೇ ಭರಿಸಲಿದೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ:ಏರ್​ ಇಂಡಿಯಾ ವಿಮಾನ ಅಪಘಾತ: ಪ್ರಯಾಣಿಕರಿಬ್ಬರಲ್ಲಿ ಕರೊನಾ ದೃಢ, ಸಿಐಎಸ್​ಎಫ್ ಸಿಬ್ಬಂದಿ ಕ್ವಾರಂಟೈನ್​
ಮೃತಪಟ್ಟ 19 ಮಂದಿಯಲ್ಲಿ 15 ಜನರು ವಯಸ್ಕರು. 4 ಮಂದಿ ಮಕ್ಕಳು. ಸುಮಾರು 23 ಮಂದಿ ಪರಿಸ್ಥಿತಿ ಗಂಭೀರವಾಗಿದೆ. ಹಾಗೇ ಇಂದು 23 ಜನರನ್ನು ಡಿಸ್​ಚಾರ್ಜ್​ ಕೂಡ ಮಾಡಲಾಗಿದೆ ಎಂದು ತಿಳಿಸಿದ್ದಾರೆ. (ಏಜೆನ್ಸೀಸ್​)
PHOTOS: ಸ್ಯಾಂಡಲ್​ವುಡ್​ಗೆ ಹ್ಯಾಟ್ರಿಕ್​ ಹೀರೋ ಸಾರಥ್ಯ; ಶಿವಣ್ಣನಿಗೆ ಶುಭ ಕೋರಿದ ಮಾಜಿ ಕ್ರಿಕೆಟಿಗ ವೆಂಕಟೇಶ್​ ಪ್ರಸಾದ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − three =
Remember me
