ನವದೆಹಲಿ:ಮಹದಾಯಿ ನ್ಯಾಯಾಧಿಕರಣದ ಐತೀರ್ಪಿನ ಅಧಿಸೂಚನೆ ಹೊರಡಿಸುವ ಬಗ್ಗೆ ಸುಪ್ರೀಂಕೋರ್ಟ್ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ಪೂರಕ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮತ್ತು ಕೇಂದ್ರ ಸಚಿವ ಸುರೇಶ್ ಅಂಗಡಿ ನೇತೃತ್ವದ ನಿಯೋಗ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಮನವಿ ಸಲ್ಲಿಸಿದೆ.
ದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ನಿಯೋಗ, ನೋಟಿಫಿಕೇಷನ್ ಜಾರಿಗೆ ಗೋವಾ ವಿರೋಧಿಸಿಲ್ಲ. ಹೀಗಾಗಿ ಕೇಂದ್ರದ ಮುಂದೆ ಯಾವುದೇ ಸಮಸ್ಯೆ ಇಲ್ಲ. ಶೀಘ್ರದಲ್ಲಿ ಅಧಿಸೂಚನೆ ಹೊರಡಿಸಿದರೆ ನ್ಯಾಯಾಧಿಕರಣ ನಿಗದಿ ಮಾಡಿರುವ ನೀರಿನ ಬಳಕೆ ಹಾಗೂ ಸಂಬಂಧಪಟ್ಟ ಕಾಮಗಾರಿ ಕಾರ್ಯ ಕೈಗೊಳ್ಳಲು ಸಹಕಾರಿಯಾಗುತ್ತದೆ ಎಂದು ವಿವರಿಸಿತು.
ರಾಜ್ಯದ ಮನವಿ ಸ್ವೀಕರಿಸಿದ ಕೇಂದ್ರ ಸಚಿವರು, ಕೋರ್ಟ್ ಆದೇಶ ಗಮನಕ್ಕೆ ಬಂದಿದೆ. ಕಾನೂನಾತ್ಮಕವಾಗಿ ಪೂರಕ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಭರವಸೆ ನೀಡಿದರು. ರಾಜ್ಯ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಚಿವ ಜಗದೀಶ ಶೆಟ್ಟರ್ ಹಾಗೂ ಸಂಸದ ಶಿವಕುಮಾರ್ ಉದಾಸಿ ನಿಯೋಗದಲ್ಲಿದ್ದರು. ಮಹದಾಯಿ ಸಂಬಂಧ ಕರ್ನಾಟಕ ಸರ್ಕಾರಕ್ಕೆ ಕಾಮಗಾರಿ ಚಟುವಟಿಕೆಗಳಿಗೆ ಯಾವುದೇ ಅನುಮತಿ ನೀಡಬಾರದು ಎಂದು ಗೋವಾ ಸರ್ಕಾರ ಸುಪ್ರೀಂಕೋರ್ಟ್​ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದು, ಮುಂದಿನ ಸೋಮವಾರ ವಿಚಾರಣೆಗೆ ಬರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಬುಧವಾರ ಬೆಳಗ್ಗೆ ರಾಜ್ಯದ ಉನ್ನತಾಧಿಕಾರಿಗಳೊಂದಿಗೆ ರಾಜ್ಯದ ಸಚಿವರು ಸಭೆ ನಡೆಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + eleven =
Remember me
