ನವದೆಹಲಿ:ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್​-19 ಪ್ರಕರಣಗಳು ಏರಿಕೆಯಾಗುತ್ತಿದ್ದು ರಾಜ್ಯಗಳಿಗೆ ಕಟ್ಟೆಚ್ಚರ ವಹಿಸುವಂತೆ ಕೇಂದ್ರ ಸರ್ಕಾರ ಸೂಚಿಸಿದೆ.
ಶುಕ್ರವಾರ ಈ ಕುರಿತು ವರ್ಚುವಲ್​ ಮೂಲಕ ಸಭೆ ನಡೆಸಿದ ಕೇಂದ್ರ ಆರೋಗ್ಯ ಸಚಿವ ಮನ್ಸುಖ್​ ಮಾಂಡವೀಯಾ ಅಗತ್ಯ ಕಟ್ಟೆಚ್ಚರ ಹಾಗೂ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸುವಂತೆ ರಾಜ್ಯ ಸರ್ಕಾರಗಳಿಗೆ ಸೂಚಿಸಿದ್ಧಾರೆ ಎಂದು ತಿಳಿದು ಬಂದಿದೆ.
ಜೀನೋಮ್​ ಸೀಕ್ವೆನ್ಸಿಂಗ್​ ಜೊತೆಗೆ ಕೋವಿಡ್​ ಗುಣಲಕ್ಷಣ ಹೊಂದಿರುವವರ ಮೇಲೆ ತೀವ್ರ ನಿಗಾ ವಹಿಸಬೇಕು. ಅಗತ್ಯ ಬಿದ್ದಲ್ಲಿ ಈ ಹಿಂದೆ ಕೋವಿಡ್​ ಅಲೆಗಳು ಸಂಭವಿಸಿದ ಸಮಯದಲ್ಲಿ ಅನುಸರಿಸಿದ್ದ ಕ್ರಮಗಳನ್ನು ಜಾರಿಗೆ ತರಬೇಕು ಎಂದು ಸಲಹೆ ನೀಡಿದ್ದಾರೆ.
ಇದನ್ನೂ ಓದಿ:ನಾನು ಕಾಂಗ್ರೆಸ್​ ತೊರೆದು ಬಿಜೆಪಿ ಸೇರುತ್ತೇನೆ ಎಂದು ಊಹಿಸಿರಲಿಲ್ಲ: ಕಿರಣ್​ ಕುಮಾರ್​​ ರೆಡ್ಡಿ
ಏಪ್ರಿಲ್​ 8 ಮತತ್ಉ 9ರಂದು ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ. ಏಪ್ರಿಲ್​ 10 ಮತ್ತು 11ರಂದು ಮೂಲಭೂತ ಸೌಕರ್ಯಗಳ ಪರಿಶೀಲನೆಗಾಗಿ ಮಾಕ್​ ಡ್ರಿಲ್​ ನಡೆಸಿ ಎಂದು ರಾಜ್ಯ ಸರ್ಕಾರಗಳಿಗೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್​ ಮಾಂಡವೀಯ ಆದೇಶಿಸಿದ್ದಾರೆ.
ಸಭೆಯಲ್ಲಿ ವಿವಿಧ ರಾಜ್ಯ ಸರ್ಕಾರಗಳ ಆರೋಗ್ಯ ಮಂತ್ರಿಗಳು, ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × five =
Remember me
