ಬೆಂಗಳೂರು:ಉತ್ತರಾಖಂಡದ ಶಾಸ್ತ್ರತಾಳ್‌ಗೆ ಚಾರಣಕ್ಕೆಂದು ತೆರಳಿ ಹವಾಮಾನ ವೈಪರೀತ್ಯದಿಂದಾಗಿ ಮೃತಪಟ್ಟಿರುವವರ ಮೃತದೇಹಗಳನ್ನು ಕುಟುಂಬದವರಿಗೆ ತಲುಪಿಸುವ ಮತ್ತು ರಕ್ಷಿಸಲ್ಪಟ್ಟಿರುವ ಉಳಿದ ಚಾರಣಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇದನ್ನೂ ಓದಿ:ಚಿಕ್ಕಬಳ್ಳಾಪುರ ಶಾಸಕರ ರಾಜೀನಾಮೆ ಪತ್ರ ವೈರಲ್​? ಖಡಕ್ ರಿಯಾಕ್ಷನ್ ಕೊಟ್ಟ ಪ್ರದೀಪ್‌ ಈಶ್ವರ್‌!
ಈ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡೆಹ್ರಾಡೋನ್ ನಲ್ಲಿರುವ ಕಂದಾಯ ಸಚಿವ ಕೃಷ್ಣಬೈರೇಗೌಡ ಮತ್ತು ರಕ್ಷಿಸಲ್ಪಟ್ಟ ಚಾರಣಿಗರ ಜೊತೆ ದೂರವಾಣಿ ಮೂಲಕ ಮಾತನಾಡಿದರು.
ಮೃತರ ಸಂಖ್ಯೆ 9ಕ್ಕೆ ಏರಿದ ಸಂಗತಿ ತಿಳಿದು ಬಹಳ ನೋವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ರಕ್ಷಿಸಲ್ಪಟ್ಟಿರುವ ಎಲ್ಲರನ್ನೂ ಯಾವುದೇ ಅಡಚಣೆ ಆಗದಂತೆ ಸುರಕ್ಷಿತವಾಗಿ ಮನೆಗಳಿಗೆ ಸೇರಿಸಬೇಕು. ಮೃತ ದೇಹಗಳನ್ನು ಕುಟುಂಬದವರಿಗೆ ತಲುಪಿಸುವ ನಿಟ್ಟಿನಲ್ಲೂ ಅಗತ್ಯವಾದ ಎಲ್ಲಾ ಪ್ರಕ್ರಿಯೆಗಳನ್ನು ತುರ್ತಾಗಿ ನಿರ್ವಹಿಸಬೇಕು ಎನ್ನುವ ಸೂಚನೆಗಳನ್ನು ಸಚಿವ ಕೃಷ್ಣಬೈರೇಗೌಡರಿಗೆ ನೀಡಿದ್ದಾರೆ.
ಉತ್ತರಾಖಂಡದ ಶಾಸ್ತ್ರತಾಳ್ ನಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಚಾರಣಕ್ಕೆ ತೆರಳಿದ್ದ ರಾಜ್ಯದ ಐವರು ಚಾರಣಿಗರು ಮೃತಪಟ್ಟ ಸುದ್ದಿ ತಿಳಿದು ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.
ಈಗಾಗಲೇ ರಕ್ಷಣಾ ಕಾರ್ಯಾಚರಣೆಯ ಮೂಲಕ 11 ಜನರನ್ನು ಸುರಕ್ಷಿತ ಪ್ರದೇಶಕ್ಕೆ ವಾಪಸು ಕರೆತರಲಾಗಿದ್ದು, ಇನ್ನೂ ಕೆಲವು ಚಾರಣಿಗರ…pic.twitter.com/IdfJpqKLpv
— Siddaramaiah (@siddaramaiah)June 5, 2024

ರಕ್ಷಿಸಲ್ಪಟ್ಟು ಸುರಕ್ಷಿತ ನೆಲೆಗೆ ಕರೆತರಲಾಗಿರುವ ಚಾರಣಿಗರ ಜೊತೆಗೂ ಮಾತನಾಡಿದ ಮುಖ್ಯಮಂತ್ರಿಗಳು, ಬಾಕಿ ಉಳಿದಿರುವ ಪ್ರತಿಯೊಬ್ಬರನ್ನೂ ಸುರಕ್ಷಿತವಾಗಿ ಕಾಪಾಡಿ ಕರೆತರುವ ಬಗ್ಗೆ ಸರ್ಕಾರಗಳ ಮಟ್ಟದಲ್ಲಿ ಸಕಲ ಪ್ರಯತ್ನಗಳೂ ನಡೆಯುತ್ತಿವೆ ಎಂದು ಭರವಸೆ ನೀಡಿದ್ದಾರೆ.
ಈಗಾಗಲೇ ರಕ್ಷಣಾ ಕಾರ್ಯಾಚರಣೆ ಮೂಲಕ ರಕ್ಷಿಸಲ್ಪಟ್ಟವರನ್ನು ಸುರಕ್ಷಿತ ಪ್ರದೇಶಕ್ಕೆ ವಾಪಸು ಕರೆತರಲಾಗಿದ್ದು, ಇನ್ನೂ ಕೆಲವು ಚಾರಣಿಗರ ರಕ್ಷಣೆ ಆಗಬೇಕಿದೆ. ಪ್ರತಿಕೂಲ ಹವಾಮಾನವು ರಕ್ಷಣಾ ಕಾರ್ಯಕ್ಕೆ ತೀವ್ರ ಅಡಚಣೆ ಉಂಟುಮಾಡುತ್ತಿದ್ದು, ಎಲ್ಲರನ್ನೂ ಸುರಕ್ಷಿತವಾಗಿ ಕರೆತರಲು ನಮ್ಮ ಸರ್ಕಾರವು ಶಕ್ತಿಮೀರಿ ಪ್ರಯತ್ನಿಸುತ್ತಿದೆ ಎಂದು ತಿಳಿಸಿದ್ದಾರೆ.
ಟ್ರೆಕ್ಕಿಂಗ್ ವೇಳೆ 9 ಸಾವು:ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಮೇಲಿನ ಹಿಮಾಲಯದಲ್ಲಿ ಸಹಸ್ತ್ರ ತಾಲ್ ಟ್ರೆಕ್ಕಿಂಗ್ ಸಮಯದಲ್ಲಿ ಕೆಟ್ಟ ಹವಾಮಾನದಿಂದಾಗಿ ದಾರಿ ತಪ್ಪಿದ 22 ಸದಸ್ಯರ ಟ್ರೆಕ್ಕಿಂಗ್ ತಂಡದ ಒಂಬತ್ತು ಸದಸ್ಯರು ಸಾವಿಗೀಡಾಗಿದ್ದಾರೆ. ಉಳಿದ 13 ಚಾರಣಿಗರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.ಭಾರತೀಯ ವಾಯುಪಡೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಮತ್ತು ಸ್ಥಳೀಯ ಅಧಿಕಾರಿಗಳು ಜಂಟಿ ವಾಯು-ನೆಲ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉತ್ತರಕಾಶಿ-ತೆಹ್ರಿ ಗಡಿಯಲ್ಲಿ ಟ್ರೆಕ್ಕಿಂಗ್‌ ಹೋಗಿ ರಕ್ಷಿಸಲ್ಪಟ್ಟ 13 ಚಾರಣಿಗರಲ್ಲಿ ಎಂಟು ಮಂದಿಯನ್ನು ಬುಧವಾರ ಡೆಹ್ರಾಡೂನ್‌ಗೆ ವಿಮಾನದ ಮೂಲಕ ಕಳುಹಿಸಲಾಗಿದೆ.
ಎನ್​ಡಿಎ ನಾಯಕರಾಗಿ ನರೇಂದ್ರ ಮೋದಿ ಆಯ್ಕೆ: ಜೂ.7ರಂದು ಪ್ರಧಾನಿಯಾಗಿ ಪ್ರಮಾಣವಚನ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 − four =
Remember me
