ಮುಂಬೈ:ಮರಾಠ ಮೀಸಲಾತಿಗೆ ಆಗ್ರಹಿಸಿ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಗುಂಪೊಂದು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ ವಾಹನಗಳಿಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದೆ.
ಘಟನೆಯಲ್ಲಿ ಹಲವು ಪೊಲೀಸ್​ ಅಧಿಕಾರಿಗಳು ಗಂಭೀರವಾಗಿ ಗಾಯಗೊಂಡಿದ್ದು, ಪ್ರತಿಭಟನಾ ನಿರತರ ಮೇಲೆ ಲಾಠಿ ಚಾರ್ಜ್​, ಜಲಫಿರಂಗಿ, ಅಶ್ರುವಾಯು ಪ್ರಯೋಗಿಸಲಾಗಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.
ಇದನ್ನೂ ಓದಿ:ಮತ್ತೆ ಆಪರೇಷನ್​ ಕಮಲ ಶುರುವಾಗಲಿದೆ, ಬೇಕಿದ್ದರೆ ಕಾದು ನೋಡಲಿ: ಕೆ.ಎಸ್​. ಈಶ್ವರಪ್ಪ
ಮಹಾರಾಷ್ಟ್ರದ ಮಧ್ಯಭಾಗದಲ್ಲಿರುವ ಜಲ್ನಾ ಜಿಲ್ಲೆಯಲ್ಲಿ ಮರಾಠ ಮೀಸಲಾತಿಗೆ ಆಗ್ರಹಿಸಿ ಶುಕ್ರವಾರ ಆರಂಭವಾದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಅಂಬಾಡ್​ ತಾಲ್ಲೂಕಿನಲ್ಲಿ ಧುಲೆ ಹಾಗೂ ಸೊಲ್ಲಾಪುರ ಹೆದ್ದಾರಿಯನ್ನು ತಡೆದು ಪ್ರತಿಭಟನಾ ನಿರತರು ಸಾರಿಗೆ ಹಾಗೂ ಲಾರಿಗೆಳಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದರು. ಹಿಂಸಾಚಾರ ಸಂಬಂಧ ಪೊಲೀಸರು 360 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದು, ಈ ಪೈಕಿ 16 ಮಂದಿಯನ್ನು ಘಟನೆಯ ಪ್ರಮುಖ ಆರೋಪಿಗಳು ಎಂದು ಗುರುತಿಸಲಾಗಿದೆ.
ಮನೋಜ್​ ಜಾರಂಗೆ ನೇತೃತ್ವದಲ್ಲಿ ಮೀಸಲಾತಿಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸಾಲಾಗುತ್ತಿದ್ದು, ತೀವ್ರವಾಗಿ ಅಸ್ವಸ್ಥಗೊಂಡಿದ್ದ ಪ್ರತಿಭಟನಾ ನಿರತರನ್ನು ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಿದಾಗ ಹಿಂಸಾಚಾರ ಭುಗಿಲೆದ್ದಿತ್ತು. ಹಿಂಸಾಚಾರದಲ್ಲಿ 90ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
#WATCH| Maharashtra | A clash broke out between Police and protesters demanding Maratha Reservation, in Jalna earlier today. Police resorted to lathi charge to disperse the protesters. Injuries reported.pic.twitter.com/tZ9uHAkF6B
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + eight =
Remember me
