ಉತ್ತರಪ್ರದೇಶ:ಉತ್ತರಪ್ರದೇಶದ ಸಹರಾನ್‌ಪುರದಲ್ಲಿರುವ ಬಿಲಾಸ್‌ಪುರ ಗ್ರಾಮದ ತನ್ನ ಮನೆಯ ಮುಂದಿನ ಮೈದಾನದಲ್ಲಿ ಆಟವಾಡುತ್ತಿದ್ದ 7 ವರ್ಷದ ಬಾಲಕನನ್ನು ಬೀದಿ ನಾಯಿಗಳ ಹಿಂಡು ದಾಳಿ ಮಾಡಿದ್ದು ಆತ ಸಾವನ್ನಪ್ಪಿದ್ದಾನೆ.
ಬಾಲಕ ಸಹಾಯಕ್ಕಾಗಿ ಅಳುತ್ತಲೇ ಇದ್ದ. ಆದರೆ ಗ್ರಾಮಸ್ಥರು ಆತನನ್ನು ರಕ್ಷಿಸಲು ತಲುಪುವಷ್ಟರಲ್ಲಿ ಸಮಯ ಮೀರಿತ್ತು ಎನ್ನಲಾಗಿದೆ. ಗ್ರಾಮಸ್ಥರು ನಾಯಿಗಳನ್ನು ಓಡಿಸಿ ಬಾಲಕನ ಶವವನ್ನು ಹೊರತೆಗೆದು ಅವನ ಮನೆಗೆ ಹೋದರು ಎಂದು ಅವರು ಹೇಳಿದರು.
ಈ ಘಟನೆಯಿಂದಾಗಿ ಹುಡುಗನ ಕುಟುಂಬದಲ್ಲಿ ದುಃಖ ಆವರಿಸಿದೆ. ಆತನ ತಂದೆ ವಿಕಾಸ್ ಮತ್ತು ಇತರ ಕುಟುಂಬ ಸದಸ್ಯರನ್ನು ಸಮಾಧಾನಪಡಿಸಲು ಗ್ರಾಮಸ್ಥರು ಜಮಾಯಿಸಿದ್ದರು. ಮಾಹಿತಿ ತಿಳಿದ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಈ ಪ್ರದೇಶದಲ್ಲಿ ಬೀದಿ ನಾಯಿಗಳ ಹಾವಳಿ ಕುರಿತು ಜಿಲ್ಲಾಡಳಿತಕ್ಕೆ ತಿಳಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಕೆಲವು ನಾಯಿಗಳಿಗೆ ಸೋಂಕು ತಗುಲಿರುವ ಬಗ್ಗೆ ತಿಳಿಸಿದ್ದರೂ ಅಧಿಕಾರಿಗಳು ಚಿಕಿತ್ಸೆ ನೀಡಿಲ್ಲ ಎಂದರು ಗ್ರಾಮಸ್ಥರು ಆರೋಪಿಸಿದರು. ಘಟನಾ ಸ್ಥಳಕ್ಕೆ ಎಸ್‌ಡಿಎಂ ನಾಕೂರು ರಮ್ಯಾ ಅ‌ ಅಗಮಿಸಿ ಗ್ರಾಮಸ್ಥರಿಗೆ ತಕ್ಷಣ ಕ್ರಮಕೈಗೊಂಡಿದ್ದಾರೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + three =
Remember me
