| ಕಿರಣ್ ಮಾದರಹಳ್ಳಿ ಚಾಮರಾಜನಗರಮುಂದಿನ ವರ್ಷ ರಾಜ್ಯದ ಪ್ರತಿ ಜಿಲ್ಲೆಯಿಂದ ಒಬ್ಬರು ಬೀದಿಬದಿ ವ್ಯಾಪಾರಿಗೆ ದೆಹಲಿಗೆ ಹೋಗುವ ಭಾಗ್ಯ ಲಭಿಸುತ್ತಿದೆ. 2024ರ ಜನವರಿ 26ರ ಗಣರಾಜ್ಯೋತ್ಸವದಲ್ಲಿ ಭಾಗವಹಿಸುವ ಅವಕಾಶ ಸಿಗುತ್ತಿದೆ.
ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ‘ಪ್ರಧಾನಮಂತ್ರಿ ಬೀದಿಬದಿ ವ್ಯಾಪಾರಿಗಳ ಆತ್ಮನಿರ್ಭರ ನಿಧಿ’ (ಪಿಎಂ ಸ್ವ ನಿಧಿ) ಯೋಜನೆಯಲ್ಲಿ ಕಿರುಸಾಲ ಸೌಲಭ್ಯ ಪಡೆದು ನಿಗದಿತ ಅವಧಿಯಲ್ಲಿ ಮರುಪಾವತಿ ಮಾಡುತ್ತಿರುವ ಫಲಾನುಭವಿಗಳನ್ನು ಪರಿಗಣಿಸಲಾಗಿದೆ. ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳು ಮತ್ತು ನಗರದ ಜೀವನೋಪಾಯ ಅಭಿಯಾನ (ಡೇ ನಲ್ಮ್) ಕಚೇರಿ ಯಿಂದ ಅರ್ಹರ ಹೆಸರು ಆಯ್ಕೆ ಮಾಡಲಾಗಿದೆ.
ಬೀದಿ ಬದಿ ವ್ಯಾಪಾರಿಗಳ ಸಬಲೀಕರಣಕ್ಕಾಗಿ ಪಿಎಂ ಸ್ವ ನಿಧಿ ಯೋಜನೆಯನ್ನು 2020ರಲ್ಲಿ ಜಾರಿಗೆ ತರಲಾಯಿತು. ಕೋವಿಡ್ ಸಂದರ್ಭದಲ್ಲಿ ಬೀದಿ ಬದಿ ವ್ಯಾಪಾರಿಗಳು ಆರ್ಥಿಕ ಹೊಡೆತಕ್ಕೆ ಸಿಲುಕಿದ್ದರು. ಇದನ್ನು ಲೇವಾದೇವಿಗಾರರು ಬಂಡವಾಳ ಮಾಡಿಕೊಂಡು ದಿನ, ವಾರದ ಬಡ್ಡಿಗೆ ಸಾಲ ಕೊಟ್ಟು ಬೀದಿ ಬದಿ ವ್ಯಾಪಾರಿಗಳಿಗೆ ತೊಂದರೆ ಕೊಡುವುದನ್ನು ತಡೆಯಲು ಈ ಯೋಜನೆಯನ್ನು ಸ್ಥಳೀಯ ಸಂಸ್ಥೆಗಳು ಮತ್ತು ರಾಷ್ಟ್ರೀಯ ಜೀವನೋಪಾಯ ಅಭಿಯಾನ (ಡೇ ನಲ್ಮ್) ಅನುಷ್ಠಾನಗೊಳಿಸುತ್ತಿವೆ.
ನಾನು ಟೀ ಅಂಗಡಿ ಇಟ್ಟುಕೊಂಡಿದ್ದೇನೆ. ಪಿಎಂ ಸ್ವ ನಿಧಿ ಯೋಜನೆಯಡಿ ಸಾಲ ಪಡೆದುಕೊಂಡಿದ್ದೆ. ನಿಗದಿತ ಅವಧಿಯಲ್ಲಿ ಸಾಲ ಮರುಪಾವತಿ ಮಾಡಿದ್ದೇನೆ. ಇದಕ್ಕಾಗಿ ಜಿಲ್ಲೆಯಲ್ಲಿರುವ ಎಲ್ಲ ಬೀದಿ ಬದಿ ವ್ಯಾಪಾರಿಗಳ ನಡುವೆ ದೆಹಲಿಗೆ ಹೋಗಲು ಆಯ್ಕೆಯಾಗಿರೋದು ತುಂಬ ಖುಷಿಯಾಗಿದೆ.
| ಸಮೀವುಲ್ಲಾ, ಚಾಮರಾಜನಗರ
ಮೊದಲ ಹಂತದಲ್ಲಿ ಬ್ಯಾಂಕ್ ಮೂಲಕ 10 ಸಾವಿರ ರೂ., ಎರಡನೇ ಹಂತದಲ್ಲಿ 20 ಸಾವಿರ ರೂ., ಮೂರನೇ ಹಂತದಲ್ಲಿ 50 ಸಾವಿರ ರೂ. ಕಿರುಸಾಲ ಸೌಲಭ್ಯ ಕಡಿಮೆ ಬಡ್ಡಿ ದರದಲ್ಲಿ ಸಿಗುತ್ತಿದೆ. ಮೊದಲ ಹಂತದಲ್ಲಿ ನಿಗದಿತ ಅವಧಿಯೊಳಗೆ ಸಾಲ ಮರುಪಾವತಿ ಮಾಡಿದವರು ಎರಡು ಮತ್ತು ಮೂರನೇ ಹಂತದಲ್ಲಿ ಸಾಲ ಪಡೆಯಲು ಅರ್ಹತೆ ಪಡೆಯುತ್ತಾರೆ. ಈ ಸವಲತ್ತನ್ನು ಪಡೆಯಲು ಪತ್ರಿಕಾ ವಿತರಕರು, ಹಾಲು ವಿತರಕರು, ಕಮ್ಮಾರರು, ಎಳನೀರು ಮಾರಾಟ ಮಾಡುವವರೂ ಅರ್ಹರಾಗಿದ್ದಾರೆ.
ಸಾಲ ಕೊಡೋದ್ರಲ್ಲಿ ಫಸ್ಟ್:ಪಿಎಂ ಸ್ವನಿಧಿ ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳಿಗೆ ಕಿರುಸಾಲ ನೀಡುವುದರಲ್ಲಿ (ಸೆ.9ರವರೆಗೆ) ಉಡುಪಿ, ಚಾಮರಾಜನಗರ, ಕೊಡಗು, ಯಾದಗಿರಿ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಕೊಪ್ಪಳ, ಚಿಕ್ಕಮಗಳೂರು, ಶಿವಮೊಗ್ಗ ಟಾಪ್ 10 ಸ್ಥಾನದಲ್ಲಿ ಮುಂಚೂಣಿಯಲ್ಲಿವೆ.
ಚಾಯ್ ವಾಲಾ ಆಯ್ಕೆ:ಚಾಮರಾಜನಗರದ ಹಳೇ ಆರ್​ಟಿಒ ಕಚೇರಿ ರಸ್ತೆಯ ಬೀದಿ ಬದಿಯಲ್ಲಿ ಟೀ ಮಾರಾಟ ಮಾಡುವ ಸಮೀವುಲ್ಲಾ ಹೆಸರನ್ನು ಜಿಲ್ಲೆಯಿಂದ ಆಯ್ಕೆ ಮಾಡಿ ಇಲ್ಲಿನ ಅಧಿಕಾರಿಗಳು ರಾಷ್ಟ್ರೀಯ ಜೀವನೋಪಾಯ ಅಭಿಯಾನಕ್ಕೆ ಶಿಫಾರಸು ಮಾಡಿದ್ದಾರೆ. ಇವರು 2024ರ ಜ. 26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಭಾಗವಹಿಸಲಿದ್ದಾರೆ.
ನಿಧನದ ವಿಚಾರದಲ್ಲಿರಲಿ ನಿಧಾನ: ಸುಳ್ಳೇ ಏಕೆ ಸಾಯಿಸುವರೋ!; ಇನ್ನಿಲ್ಲ ಎಂಬ ಸುದ್ದಿ ಬಂದಾಗ ಇನ್ನೇನು ಮಾಡಬೇಕು?

ಪೊದೆಯಲ್ಲಿ ಯುವ ಜೋಡಿ, ಫೋಟೋ ವೈರಲ್​: ಅಷ್ಟಕ್ಕೂ ಅಲ್ಲಿ ಆಗಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + 20 =
Remember me
