ನವದೆಹಲಿ:ಸೋಷಿಯಲ್ ಮೀಡಿಯಾ ಮೂಲಕ ದ್ವೇಷಪೂರಿತ ಹಾಗೂ ಕಾನೂನು ಸುವ್ಯವಸ್ಥೆಗೆ ಭಂಗ ತರುವಂಥ ಸಂದೇಶಗಳು ಪೋಸ್ಟ್​ ಆಗುವುದನ್ನು ತಡೆಯುವ ನಿಟ್ಟಿನಲ್ಲಿ ಈಗ ಮತ್ತೊಂದು ಎಚ್ಚರಿಕೆ ರವಾನೆಯಾಗಿದೆ.
ದ್ವೇಷಕಾರಿ ಪೋಸ್ಟ್​ಗಳನ್ನು ನಿಯಂತ್ರಿಸುವ ಸಂಬಂಧ ಫೇಸ್​ಬುಕ್​ ಉದ್ದೇಶಪೂರ್ವಕವಾಗಿಯೇ ನಿರಾಸಕ್ತಿ ವಹಿಸುತ್ತಿದೆ ಎಂಬ ಆರೋಪವನ್ನು ಹೊರಿಸಿದ್ದ ದೆಹಲಿ ಸದನ ಸಮಿತಿಯು ಫೇಸ್​ಬುಕ್​ ಇಂಡಿಯಾದ ಮುಖ್ಯಸ್ಥರು ನ್ಯಾಯಾಲಯದ ಮೆಟ್ಟಿಲೇರುವಂತೆ ಮಾಡಿತ್ತು.
ಇದೀಗ ಭಾರತದ ಮುಖ ಚುನಾವಣಾ ಆಯುಕ್ತ ಸುನಿಲ್​ ಅರೊರಾ ಕೂಡ ಈ ಬಗ್ಗೆ ಎಚ್ಚರಿಕೆ ನೀಡಿದ್ದು, ಸೋಷಿಯಲ್​ ಮೀಡಿಯಾದ ದುರ್ಬಳಕೆ ತಡೆಯುವಲ್ಲಿ ವಿಫಲವಾದರೆ ಅಂಥ ಸೋಷಿಯಲ್​ ಮೀಡಿಯಾ ಪ್ಲ್ಯಾಟ್​ಫಾರ್ಮ್​ಗಳನ್ನೇ ಹೊಣೆ ಆಗಿಸಲಾಗುವುದು ಎಂದಿದ್ದಾರೆ.
ಬಿಹಾರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಹೀಗೊಂದು ಎಚ್ಚರಿಕೆ ಸಂದೇಶ ರವಾನಿಸಿರುವ ಅವರು, ಹಗೆತನದ ಪೋಸ್ಟ್​ ಹಾಕುವುದು ಮುಂತಾದವುಗಳ ಮೂಲಕ ಸೋಷಿಯಲ್ ಮೀಡಿಯಾದ ದುರ್ಬಳಕೆ ಆಗದಂತೆ ನೋಡಿಕೊಳ್ಳಬೇಕು ಎಂದು ರಾಜಕೀಯ ಪಕ್ಷಗಳು ಹಾಗೂ ಅದರ ಅಭ್ಯರ್ಥಿಗಳಿಗೂ ಆಯೋಗ ಸೂಚನೆ ನೀಡಿದೆ ಎಂದೂ ತಿಳಿಸಿದ್ದಾರೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − two =
Remember me
