ಮುಂಬೈ:ಆ.27ರಂದು ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಕೋಟೆಯಲ್ಲಿದ್ದ ಮರಾಠ ರಾಜ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಕುಸಿದ ವಿಚಾರಕ್ಕೆ ಸಂಬಂಧಿಸಿದಂತೆ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್‌ಗಳ ಅಡಿಯಲ್ಲಿ ಗುತ್ತಿಗೆದಾರ ಜೈದೀಪ್​​ ಅಪ್ಟೆ ಹಾಗೂ ಸ್ಟ್ರಕ್ಚರಲ್ ಕನ್ಸಲ್ಟೆಂಟ್ ಚೇತನ್ ಪಾಟೀಲ್ ವಿರುದ್ಧ ಎಫ್​ಐಆರ್​ ದಾಖಲಿಸಲಾಗಿತ್ತು. ಇದೀಗ ಈ ಕೇಸ್​ನಲ್ಲಿ ಇಂದು ಚೇತನ್​ನನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ.
ಇದನ್ನೂ ಓದಿ:ಹಿಂದೆಂದೂ ನಟಿಸಿರದ ಪಾತ್ರದಲ್ಲಿ ರಶ್ಮಿಕಾ ಮಂದಣ್ಣ: ಹೊಸ ಅವತಾರದಲ್ಲಿ ಮೋಡಿ ಮಾಡಲು ಕನ್ನಡತಿ ಸಜ್ಜು
ಒಳಸಂಚು, ವಂಚನೆ, ಸಾರ್ವಜನಿಕ ಸುರಕ್ಷತೆಗೆ ಅಪಾಯವಿದೆ ಎಂಬ ಆರೋಪಗಳ ಜತೆಗೆ ಪ್ರತಿಮೆಯ ನಿರ್ಮಾಣ ಕಳಪೆ ಗುಣಮಟ್ಟದ್ದಾಗಿದ್ದು, ಅದರಲ್ಲಿ ಬಳಸಲಾದ ನಟ್​​ ಬೋಲ್ಟ್‌ಗಳು ತುಕ್ಕು ಹಿಡಿದಿರುವುದು ಕಂಡುಬಂದಿದೆ ಎಂದು ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ನೀಡಿದ ದೂರಿನ ಮೇರೆಗೆ ಈ ಎಫ್‌ಐಆರ್​​ ದಾಖಲಿಸಲಾಗಿತ್ತು.
ಬಂಧಿತನಾಗಿರುವ ಆರೋಪಿ ಚೇತನ್​ ಮೂಲತಃ ಕೊಲ್ಹಾಪುರದ ನಿವಾಸಿ ಎಂದು ಹೇಳಲಾಗಿದೆ. ಎಫ್​ಐಆರ್​ ಬೆನ್ನಲ್ಲೇ ತನಿಖೆ ಚುರುಕುಗೊಳಿಸಿದ್ದ ಕೊಲ್ಲಾಪುರ ಅಪರಾಧ ದಳ ಮತ್ತು ಮಾಳವನ್ ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ಇಂದು ಮುಂಜಾನೆ ಚೇತನ್​ನನ್ನು ಅರೆಸ್ಟ್ ಮಾಡಿದ್ದಾರೆ,(ಏಜೆನ್ಸೀಸ್).
ಅಬ್ಬಾ! ಎಂತಹ ಜಾಗದಲ್ಲಿ ಅಡಗಿದೆ MH370 ವಿಮಾನ: ನಿಗೂಢ ನಾಪತ್ತೆ ಕೇಸ್​ ಬಗೆಹರಿದಿದೆ ಎಂದ ವಿಜ್ಞಾನಿ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:eighteen − 5 =
Remember me
