ಕೋಲ್ಕತಾ:ವೈದ್ಯಕೀಯ ಕಾಲೇಜಿನಲ್ಲಿನ ಮಹಿಳಾ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ರಾಷ್ಟ್ರವ್ಯಾಪಿ ಆಕ್ರೋಶವನ್ನು ಹುಟ್ಟುಹಾಕಿದೆ. ಇದು ದೇಶಾದ್ಯಂತ ವ್ಯಾಪಕ ಪ್ರತಿಭಟನೆಗಳು ಮತ್ತು ಮುಷ್ಕರಗಳಿಗೆ ಕಾರಣವಾಗಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್​​ ಮಾಡಿರುವ ವಿದ್ಯಾರ್ಥಿನಿಯನ್ನು ಪೊಲೀಸರು ಬಂಧಿಸಿದ್ದಾರೆ.
ಇದನ್ನು ಓದಿ:ಟ್ರೈನಿ ವೈದ್ಯೆ ಅತ್ಯಾಚಾರ-ಹತ್ಯೆ ಕೇಸ್​​; ಸ್ವಯಂಪ್ರೇರಿತವಾಗಿ ವಿಚಾರಣೆ ಕೈಗತ್ತಿಕೊಂಡ ಸುಪ್ರೀಂಕೋರ್ಟ್​​
ಆರೋಪಿ ವಿದ್ಯಾರ್ಥಿನಿ ಕೀರ್ತಿ ಶರ್ಮಾ ವಿರುದ್ಧ ಇನ್​ಸ್ಟಾಗ್ರಾಮ್​​ ಖಾತೆಯಲ್ಲಿ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಹತ್ಯೆಯನ್ನು ನೆನಪಿಸುವ ರೀತಿಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಹತ್ಯೆ ಮಾಡಲು ಇತರರನ್ನು ಪ್ರೋತ್ಸಾಹಿಸಿರುವ ಆರೋಪವಿದೆ. ಆರೋಪಿಯು ತನ್ನ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಮೂರು ಪೋಸ್ಟ್​ಗಳನ್ನು ಅಪ್​ಲೋಡ್​ ಮಾಡಿದ್ದಾಳೆ.
ಸಂತ್ರಸ್ತೆ ವೈದ್ಯೆಯ ಭಾವಚಿತ್ರ ಮತ್ತು ಗುರುತನ್ನು ಬಹಿರಂಗಪಡಿಸಿದ್ದಾರೆ ಎಂದು ತಲ್ತಾಳ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ. ಹಾಗೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ವಿರುದ್ಧ ಎರಡು ಪೋಸ್ಟ್​​ಗಳನ್ನು ಶೇರ್​ ಮಾಡಿದ್ದಾರೆ. ಪ್ರಚೋದನಕಾರಿ ಕಾಮೆಂಟ್​ ಮತ್ತು ಮುಖ್ಯಮಂತ್ರಿ ಕೊಲ್ಲುವುದಾಗಿ ಬೆದರಿಕೆ ಹಾಕಲಾಗಿದೆ. ಇದು ಆಕೆಯ ಸ್ವಭಾವ ಸಮಾಜದಲ್ಲಿನ ಅಶಾಂತಿಗೆ ಕಾರಣವಾಗಬಹುದು ಮತ್ತು ಸಮುದಾಯದ ನಡುವೆ ದ್ವೇಷವನ್ನು ಉತ್ತೇಜಿಸಬಹುದು ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿ ವಿದ್ಯಾರ್ಥಿನಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಹೇಳಿದರು. ಈ ಹಿಂದೆ ಪ್ರಕರಣದಕ್ಕೆ ಸಂಬಂಧಿಸಿದಂತೆರ ವದಂತಿ ಹರಡಿದ ಮತ್ತು ವೈದ್ಯೆಯ ಗುರುತನ್ನು ಬಹಿರಂಗಪಡಿಸಿದ ಆರೋಪದ ಮೇಲೆ ಕೋಲ್ಕತಾ ಪೊಲೀಸರು ಮಾಜಿ ಬಿಜೆಪಿ ಸಂಸದ ಲಾಕೆಟ್ ಚಟರ್ಜಿ ಮತ್ತು ಇಬ್ಬರು ಉನ್ನತ ವೈದ್ಯರಿಗೆ ಸಮನ್ಸ್ ನೀಡಿದ್ದರು.(ಏಜೆನ್ಸೀಸ್​​)
ಪಾಕ್​ ಅಥ್ಲೀಟ್​​​ ಅರ್ಷದ್​ ನದೀಮ್​ ಬಯೋಪಿಕ್​ ತೆಗೆದ್ರೆ ನಾಯಕ ಇವರಾಗ್ಬೇಕಂತೆ; ನೀರಜ್​ ಹೇಳಿದ್ದು ಈ ನಟನ ಬಗ್ಗೆ..

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:two × four =
Remember me
