ಆಂಧ್ರಪ್ರದೇಶ:ಎಷ್ಟೇ ಕಠಿಣ ಕಾನೂನು ರೂಪಿಸಿದರೂ ಕಾಲೇಜು ವಿದ್ಯಾರ್ಥಿಗಳ ನಡುವೆ ನಡೆಯುವ ರ್‍ಯಾಗಿಂಗ್ ಮಾತ್ರ ತಡೆಯಲು ಸಾಧ್ಯವಾಗುತ್ತಿಲ್ಲ. ಈಗಾಗಲೇ ಹಲವು ವಿದ್ಯಾರ್ಥಿಗಳು ರ್‍ಯಾಗಿಂಗ್ ಕಾರಣದಿಂದ ನೊಂದಿದ್ದಾರೆ. ಅಷ್ಟೇ ಅಲ್ಲಾ, ರ್‍ಯಾಗಿಂಗ್​ನ ಹುಚ್ಚಾಟ ಅನೇಕ ವಿದ್ಯಾರ್ಥಿಗಳ ಜೀವಕ್ಕೇ ಆಪತ್ತು ತಂದೊಡ್ಡಿದಂತಹ ಪ್ರಕರಣಗಳು ನಡೆದಿವೆ.
ಇದೀಗ ಆಂಧ್ರಪ್ರದೇಶದ ಪಶ್ಚಿಮ ಗೋದಾವರಿಯಲ್ಲಿರುವ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಾಲ್ವರು ವಿದ್ಯಾರ್ಥಿಗಳು ಸೇರಿಕೊಂಡು, ಒಬ್ಬನನ್ನು ರ್‍ಯಾಗಿಂಗ್ ಮಾಡಿದ್ದಾರೆ. ಈ ವೇಳೆ ಅಮಾನುಷವಾಗಿ ನಡೆದುಕೊಂಡಿದ್ದಾರೆ. ರ್‍ಯಾಗಿಂಗ್ ಮಾಡುವುದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ, ವಿದ್ಯಾರ್ಥಿಗಳ ಹುಚ್ಚಾಟಕ್ಕೆ ಸಾಕಷ್ಟು ಆಕ್ರೋಶ ಕೇಳಿ ಬರುತ್ತಿದೆ.
ವಿದ್ಯಾರ್ಥಿಯೊಬ್ಬನನ್ನು ಹಾಸ್ಟೆಲ್​ನ ಕೋಣೆಯೊಳಗೆ ಕೂಡಿ ಹಾಕಿ ಹಲ್ಲೆ ಮಾಡಿದ್ದಾರೆ. ಪಿವಿಸಿ ಪೈಪ್ ಹಾಗೂ ಕೋಲುಗಳಿಂದ ದೇಹದ ವಿವಿಧ ಭಾಗಕ್ಕೆ ಹೊಡೆದಿದ್ದಾರೆ. ಇಷ್ಟೇ ಅಲ್ಲದೆ, ಇಸ್ತ್ರಿ ಪೆಟ್ಟಿಗೆಯಿಂದ ಯುವಕನ ದೇಹಕ್ಕೆ ಬಿಸಿ ಮುಟ್ಟಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಯುವಕ ಎಷ್ಟೇ ಗೋಳಾಡಿಕೊಂಡರೂ ಸುಮ್ಮನಾಗದೆ, ನಿರಂತರವಾಗಿ ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡಿದ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು, ಯುವಕರನ್ನು ಬಂಧಿಸಿದ್ದಾರೆ. ಯುವಕನ ಮೈಮೇಲೆ ಹಲವು ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ವಿದ್ಯಾರ್ಥಿಗಳು ಹೊಡೆಯುತ್ತಿರುವಾಗಲೇ, ಬಲಿಪಶುವಾಗಿರುವ ವಿದ್ಯಾರ್ಥಿ ಕ್ಷಮೆಯಾಚಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.
Four engineering students studying in#SRKR#EngineeringCollege#Bhimavaram#WestGodavari#APhave been arrested for assaulting fellow student inside hostel room with sticks, PVC pipes & branding him on chest with hot iron box even as he is pleading to be spared#AndhraPradeshpic.twitter.com/QeMubMkt7i
— rejected guy (@NadippinNayaka)November 5, 2022

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:3 × three =
Remember me
