ಕೇಶ್​ಪುರ್​:ತೃಣಮೂಲ ಕಾಂಗ್ರೆಸ್ ಪಕ್ಷದ ಎರಡು ತಂಡಗಳ ನಡುವೆ ನಡೆದ ಸಂಘರ್ಷಕ್ಕೆ ಹೈಸ್ಕೂಲ್ ವಿದ್ಯಾರ್ಥಿಯೊಬ್ಬ ಬಲಿಯಾಗಿದ್ದಾನೆ.ಪಶ್ಚಿಮ ಬಂಗಾಳದ ಮಿಡ್ನಾಪುರ್​ ಜಿಲ್ಲೆಯ ಕೇಶಾಪುರ್​ನಲ್ಲಿ ಗುರುವಾರ ರಾತ್ರಿ ಈ ಗಲಭೆ ನಡೆದಿದೆ.
ತೃಣಮೂಲ ಕಾಂಗ್ರೆಸ್​ ಪಕ್ಷದ ಸ್ಥಳೀಯ ಮುಖಂಡರಾದ ಉತ್ತಮ್ ತ್ರಿಪಾಠಿ ಮತ್ತು ಸಂಜಯ್​ ಪಾನ್ ಎಂಬಿಬ್ಬರ ಬೆಂಬಲಿಗರ ಮಧ್ಯೆ ಈ ಗಲಾಟೆ ನಡೆದಿದೆ. ಈ ಸಂದರ್ಭ ಅನಿರೀಕ್ಷಿತವಾಗಿ ಸಿಕ್ಕಿಹಾಕಿಕೊಂಡ ಎಂಟನೇ ತರಗತಿಯ ಬಾಲಕ ಶೇಖ್​ ಮಜಾಹರ್ ಇರಿತಕ್ಕೆ ಒಳಗಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಪಕ್ಷದ ಕಾರ್ಯಕರ್ತ ಶೇಖ್ ನಸೀಂ(42) ಗಂಭೀರ ಗಾಯಗಳಿಗೆ ಒಳಗಾಗಿ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾನೆ.
ದಾಮೋದರ್ ಚೌಕ್​ ಬಳಿ ನಡೆದ ಈ ಗಲಭೆಯಲ್ಲಿ ಕಚ್ಚಾಬಾಂಬ್​ಗಳನ್ನು ಬಳಸಿಕೊಳ್ಳಲಾಗಿತ್ತು. ಘಟನೆ ಸಂಬಂಧ ಕೊಲೆ ಕೇಸು ದಾಖಲಿಸಿಕೊಳ್ಳಲಾಗಿದ್ದು, ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ. (ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 − three =
Remember me
