ಲಖನೌ:ಕಳೆದ ಕೆಲವು ದಿನಗಳಿಂದ ದೇಶದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಇದರಲ್ಲಿ ಯುವ ಸಮೂಹದ ಪಾತ್ರ ಹೆಚ್ಚಾಗುತ್ತಿರುವುದು ಬೇಸರದ ಸಂಗತಿ.
ಇದೀಗ ಘಟನೆಯೊಂದರಲ್ಲಿ ವಿದ್ಯಾರ್ಥಿಯೊಬ್ಬ ತನ್ನ ಸ್ನೇಹಿತೆಯನ್ನು ಗುಂಡಿಕ್ಕಿ ಹತ್ಯೆ ಮಾಡಿ ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರಪ್ರದೇಶದ ಗೌತಮ್​ ಬುದ್ಧನಗರ ಜಿಲ್ಲೆಯ ನೋಯ್ಡಾದ ಶಿವ್​ ನಾದರ್​ ವಿಶ್ವವಿದ್ಯಾಲಯದಲ್ಲಿ ನಡೆದಿದೆ.
ಮೂರನೇ ವರ್ಷ ಸಮಾಜಶಾಸ್ತ್ರ ಪದವಿ ವಿದ್ಯಾರ್ಥಿ ಈ ಕೃತ್ಯ ಎಸಗಿದ್ದು ವಿದ್ಯಾರ್ಥಿಯೂ ತನ್ನ ಸ್ನೇಹಿತೆಯೊಂದಿಗೆ ಜಗಳವಾಡಿದ ನಂತರ ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ.
ಮೃತ ದುರ್ದೈವಿಗಳ ಹೆಸರು ಅನುಜ್ ಸಿಂಗ್(21)​ ಹಾಗೂ ನೇಹಾ ಚೌರಾಸಿಯಾ(21) ಎಂದು ತಿಳಿದು ಬಂದಿದ್ದು ಘಟನೆ ನಂತರ ವಿದ್ಯಾರ್ಥಿಯು ಹಾಸ್ಟೆಲ್​ಗೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.
ಸದ್ಯ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ:VIDEO| ಫೋಟೋ ತೆಗೆಸುವ ವಿಚಾರವಾಗಿ ತಗಾದೆ; ನೋಡ ನೋಡುತ್ತಿದ್ದಂತೆ ಬಡಿದಾಡಿಕೊಂಡ ಕುಟುಂಬಸ್ಥರು
ಈ ಕುರಿತು ಪ್ರತಿಕ್ರಿಯಿಸಿರುವ ಮೃತ ಯುವತಿ ತಂದೆ ರಾಜ್​ಕುಮಾರ್​ ಚೌರಾಸಿಯಾ ವಿಶ್ವವಿದ್ಯಾಲಯದಲ್ಲಿನ ಭದ್ರತೆಯನ್ನು ಪ್ರಶ್ನಿಸಿದ್ದಾರೆ ಮತ್ತು ಒಬ್ಬ ವ್ಯಕ್ತಿ ಗನ್​ ಹಿಡಿದು ತಿರುಗಾಡಲು ಹೇಗೆ ಬಿಟ್ಟಿದ್ದೀರಿ.
ಕಾಲೇಜ್​ನಲ್ಲಿ ಅನೇಕ ಜನ ಸೆಕ್ಯೂರಿಟಿ ಗಾರ್ಡ್​ಗಳು ಇದ್ದರೂ ಸಹ ಆತ ನನ್ನ ಮಗಳ ಮೇಲೆ ಎರಡು ಭಾರಿ ಗುಂಡು ಹಾರಿಸಿ ಹತ್ಯೆ ಮಾಡಿದ್ಧಾನೆ. ವಿಶ್ವವಿದ್ಯಾಲಯದವರು ಅಪಘಾತಕ್ಕೀಡಾಗಿದ್ದಾಳೆ ಎಂದು ನನಗೆ ಕರೆ ಮಾಡಿ ಹೇಳಿದ್ದರು ಇಲ್ಲಿನೋಡಿದರೆ ಬೇರೆಯದೆ ನಡೆದಿದೆ ಎಂದು ಪ್ರತಿಕ್ರಿಯಿಸಿದ್ದಾರೆ.
ग्रेटर नोएडा शिव नादर यूनिवर्सिटी परिसर में छात्र द्वारा परिचित छात्रा को गोली मारने व बाद में खुद को भी गोली मारकर आत्महत्या करने की घटना के संबंध में@DCPGreaterNoidaद्वारा दी गई बाइट। थाना-दादरी@Uppolicepic.twitter.com/sgIvXYJWN3
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two − two =
Remember me
