ಬಿಲಾಸ್‌ಪುರ:ಜಿಲ್ಲೆಯ ಸರ್ಕಾರಿ ಶಾಲೆಯೊಂದರ ತರಗತಿಯಲ್ಲಿ ಬಿಯರ್ ಸೇವನೆ ಮಾಡುತ್ತಿದ್ದ ವಿದ್ಯಾರ್ಥಿನಿಯರ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ತಪ್ಪಿತಸ್ಥ ವಿದ್ಯಾರ್ಥಿಗಳ ವಿರುದ್ಧ ಇದೀಗ ಶಿಕ್ಷಣ ಇಲಾಖೆ ಗರಂ ಆಗಿದೆ. ಘಟನೆ ಬೆಳಕಿಗೆ ಬಂದ ಹಿನ್ನಲೆ ಶಿಕ್ಷಣ ಅಧಿಕಾರಿಗಳು ತನಿಖೆ ಆರಂಭಿಸಿದ್ದು, ವಿದ್ಯಾರ್ಥಿಗಳ ಹೇಳಿಕೆ ಪಡೆಯಲು ಮುಂದಾಗಿದ್ದಾರೆ.
ಇದನ್ನೂ ಓದಿ:RRR ಚಿತ್ರದ ಮಲ್ಲಿ ತಾಯಿಯ ಪಾತ್ರಧಾರಿ ನಿಜ ಜೀವನದಲ್ಲಿ ಹೇಗಿದ್ದಾರೆ ಗೊತ್ತಾ? ಹಾಟ್​ ಬ್ಯೂಟಿ ಅಹ್ಮರಿನ್
ಛತ್ತೀಸ್‌ಗಢದ ಬಿಲಾಸ್‌ಪುರ ಜಿಲ್ಲೆಯ ಮಸ್ತೂರಿ ಪ್ರದೇಶದ ಭಟಚೌರಾ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಅಸಲಿಗೆ ವಿದ್ಯಾರ್ಥಿನಿಯರು ಜುಲೈ 29ರಂದು ಮದ್ಯ ಸೇವಿಸಿದ್ದು, ದೃಶ್ಯವನ್ನು ಮೊಬೈಲ್ ಕ್ಯಾಮರಾದಲ್ಲಿ ಚಿತ್ರೀಕರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಹುಡುಗಿಯರು ಬಿಯರ್ ಮತ್ತು ಕೂಲ್​ ಡ್ರಿಂಕ್​ಗಳನ್ನು ಕುಡಿಯುತ್ತಿರುವುದು ಕಂಡುಬಂದಿದೆ ಎಂದು ಬಿಲಾಸ್‌ಪುರದ ಜಿಲ್ಲಾ ಶಿಕ್ಷಣಾಧಿಕಾರಿ (ಡಿಇಒ) ಟಿಆರ್ ಸಾಹು ತಿಳಿಸಿದ್ದಾರೆ.
ಆಪಾದಿತ ಘಟನೆಯ ತನಿಖೆಗೆ ಮೂವರು ಸದಸ್ಯರ ಸಮಿತಿಯನ್ನು ರಚಿಸಲಾಗಿದೆ ಮತ್ತು ತಂಡವು ಸೋಮವಾರ (ಸೆ.09) ಸಂಬಂಧಪಟ್ಟ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಹೇಳಿಕೆಗಳನ್ನು ದಾಖಲಿಸಿದೆ. ವಿದ್ಯಾರ್ಥಿನಿಯರು ನಾವು ವಿಡಿಯೋ ಮಾಡುವಾಗ ಮೋಜಿಗಾಗಿ ಬಿಯರ್ ಬಾಟಲಿಗಳನ್ನು ಹಿಡಿದುಕೊಂಡಿದ್ದೇ ವಿನಃ ಕುಡಿಯಲು ಅಲ್ಲ. ಅಸಲಿಗೆ ನಾವು ಮದ್ಯಪಾನ ಮಾಡಿಯೇ ಇಲ್ಲ ಎಂದು ತನಿಖಾ ತಂಡಕ್ಕೆ ತಿಳಿಸಿದ್ದಾರೆ ಎಂದು ಸಾಹು ಹೇಳಿದ್ದಾರೆ.
ಇದನ್ನೂ ಓದಿ:ಸಂತರನ್ನು ತಿಳಿದುಕೊಂಡರೆ ಬದುಕಿನಲ್ಲಿ ನೆಮ್ಮದಿ
ಶಾಲೆಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಲು ಪ್ರಾಂಶುಪಾಲರು ಮತ್ತು ಸಂಸ್ಥೆಯ ಮುಖ್ಯಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಅದಲ್ಲದೆ, ಸಂಬಂಧಪಟ್ಟ ಬಾಲಕಿಯರ ಪೋಷಕರಿಗೆ ನೋಟಿಸ್ ಕಳುಹಿಸಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ,(ಏಜೆನ್ಸೀಸ್).
26 ವರ್ಷ ಸೇವೆ, 10 ವರ್ಷದಿಂದ ಅದೇ ಸಂಬಳ! 1 ರೂ. ಹೆಚ್ಚಾಗಲಿಲ್ಲ: ಈ ಸರ್ಕಾರದ ವಿರುದ್ಧ ವೈದ್ಯ ಕಿಡಿ

ಆ ಪ್ರೀತಿಯನ್ನು ಮರೆಯಲು ಸಾಧ್ಯವೇ ಇಲ್ಲ! ಈಗಲೂ ಕಣ್ಣಿನಲ್ಲಿ ಕಟ್ಟಿದಂತಿದೆ: ‘ಕಿಂಗ್’ ಕೊಹ್ಲಿ ಮನದಾಳ

ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
Sign in to your account
Please enter an answer in digits:three × four =
Remember me
