ನವದೆಹಲಿ:ಸಹಪಾಠಿಯೊಂದಿಗೆ ಸಲುಗೆಯಿಂದ ಮಾತನಾಡಿದ ಎಂಬ ಕಾರಣಕ್ಕೆ ವ್ಯಕ್ತಿಯೋರ್ವ 12ನೇ ತರಗತಿ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿ ಕೈ ಬೆರಳುಗಳನ್ನು ಕತ್ತರಿಸಿ ವಿಕೃತಿ ಮೆರೆದಿರುವ ಘಟನೆ ರಾಷ್ಟ್ರ ರಾಜದ್ಥಾನಿ ನವದೆಹಲಿಯ ದಕ್ಷಿಣ ದ್ವಾರಕಾದಲ್ಲಿ ನಡೆದಿದೆ.
ಘಟನೆ ಸಂಬಂಧ ಓರ್ವ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆಗೆ ಒಳಪಡಿಸಲಾಗಿದೆ. ಸಂತ್ರಸ್ತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ನಟಿ ರಶ್ಮಿಕಾ ಮಂದಣ್ಣ ಡೀಪ್​ಫೇಕ್​ ವಿಡಿಯೋ; ಪ್ರಕರಣ ದಾಖಲಿಸಿಕೊಂಡ ದೆಹಲಿ ಪೊಲೀಸರು
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಘಟನೆ ಅಕ್ಟೋಬರ್​ 21ರಂದು ನಡೆದಿದ್ದು, ಹಲ್ಲೆಗೊಳಗಾದ ವಿದ್ಯಾರ್ಥಿ ಹೆದರಿ ಮನೆಯಲ್ಲಿ ಈ ವಿಚಾರವನ್ನು ಹೇಳಿರಲಿಲ್ಲ. ಒಮ್ಮೆ ಆತನ ಪೋಷಕರು ಈ ಬಗ್ಗೆ ವಿಚಾರಸಿದಾಗ ಆತ ಮೋಟಾರ್​ ಸೈಕಲ್​ ಚೈನಿನಿಂದ ಬೆರಳುಗಳು ತುಂಡಾಗಿದ್ದಾಗಿ ಹೇಳಿದ್ದಾನೆ.
ಬಳಿಕ ಕುಟುಂಬದವರ ಒತ್ತಡಕ್ಕೆ ಮಣಿದ ಸಂತ್ರಸ್ತ ಶುಕ್ರವಾರ ಸಂಜೆ ನಡೆದ ಘಟನೆ ಬಗ್ಗೆ ಮನೆಯಲ್ಲಿ ಹೇಳಿಕೊಂಡಿದ್ದಾನೆ. ಬಳಿಕ ದೂರು ದಾಖಲಿಸಿದ್ದು, ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ. ಈ ಸಂಬಂಧ FIR ದಾಖಲಾಗಿದ್ದು ಶೀಘ್ರದಲ್ಲೇ ಆರೋಪಿ ವಿರುದ್ಧ ಚಾರ್ಜ್​ಶೀಟ್​ ಸಿದ್ದಪಡಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + 5 =
Remember me
