ಮುಂಬೈ:ಕರ್ನಾಟಕದಲ್ಲಿ ಈ ಹಿಂದೆ ಒಮ್ಮೆ ಮಕ್ಕಳಿಗೆ ಪರೀಕ್ಷೆ ಇಲ್ಲದೆ ಪಾಸ್ ಮಾಡಲಾಗುವುದು ಎಂಬ ಸುದ್ದಿ ಹರಿದಾಡಿತ್ತು. ಬಳಿಕ ಅಂಥ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಆ ಕುರಿತು ಇನ್ನೂ ಚರ್ಚೆಗಳು ನಡೆಯುತ್ತಿವೆ, ಸದ್ಯಕ್ಕೆ ಪರೀಕ್ಷೆ ಇಲ್ಲದೆ ಪಾಸ್ ಮಾಡುವ ನಿರ್ಣಯ ತೆಗೆದುಕೊಂಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್​. ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದರು.
1ರಿಂದ 8ನೇ ತರಗತಿ ವರೆಗಿನ ಮಕ್ಕಳನ್ನು ಪರೀಕ್ಷೆ ಇಲ್ಲದೆ ಪಾಸ್​ ಮಾಡಲಾಗುವುದು ಎಂಬ ಸುದ್ದಿ ಇದೀಗ ಹೊರಬಿದ್ದಿದೆ. ಆದರೆ ಈ ಸುದ್ದಿ ಕೇಳಿ ಕರ್ನಾಟಕದ ಮಕ್ಕಳು ಖುಷಿಯಾಗುವಂತಿಲ್ಲ. ಏಕೆಂದರೆ ಇಂಥದ್ದೊಂದು ಸುದ್ದಿ ಕೇಳಿಬಂದಿರುವುದು ಮಹಾರಾಷ್ಟ್ರದಲ್ಲಿ. ಮಹಾರಾಷ್ಟ್ರದಲ್ಲಿ ಕರೊನಾ ಸೋಂಕು ವ್ಯಾಪಕವಾಗಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ 1ರಿಂದ 8ನೇ ತರಗತಿ ವರೆಗಿನ ಮಕ್ಕಳನ್ನು ಪರೀಕ್ಷೆ ಇಲ್ಲದೆ ಮುಂದಿನ ತರಗತಿಗೆ ಪಾಸ್ ಮಾಡಲಾಗುವುದು. ಹಾಗೆಯೇ 9 ಮತ್ತು 11ನೇ ತರಗತಿ ಮಕ್ಕಳ ಕುರಿತ ನಿರ್ಧಾರ ಸದ್ಯದಲ್ಲೇ ಘೋಷಿಸಲಾಗುವುದು ಎಂದು ಮಹಾರಾಷ್ಟ್ರದ ಶಿಕ್ಷಣ ಸಚಿವೆ ವರ್ಷಾ ಗಾಯಕ್​ವಾಡ್ ತಿಳಿಸಿದ್ದಾರೆ.
ಇದನ್ನೂ ಓದಿ:10 ಲಕ್ಷ ಜನರಿಗೆ ಒಟ್ಟು 1,500 ಕೋಟಿ ರೂ. ಮೋಸ; ಬೆಂಗಳೂರಿನ ಕಂಪನಿಯ 24 ಜನರನ್ನು ಬಂಧಿಸಿದ ಸೈಬರಾಬಾದ್ ಪೊಲೀಸರು
ಸೋಂಕು ಪ್ರಕರಣ ಹೆಚ್ಚಳ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಈಗಾಗಲೇ ಎಲ್ಲ ಶಿಕ್ಷಣ ಸಂಸ್ಥೆಗಳು ಮುಚ್ಚಲ್ಪಟ್ಟಿವೆ. ಕೆಲವು ಜಿಲ್ಲೆಗಳಲ್ಲಿ ಲಾಕ್​ಡೌನ್​ ಮಾಡಲಾಗಿದೆ. ಇನ್ನು ಪರಿಸ್ಥಿತಿ ಸುಧಾರಿಸದೇ ಇದ್ದರೆ ಲಾಕ್​ಡೌನ್ ತೆರವುಗೊಳಿಸುವುದಿಲ್ಲ ಎಂದು ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ಶುಕ್ರವಾರ ಹೇಳಿದ್ದರು.
In view of#COVID19situation, all state board students across Maharashtra state from Class 1 to Class 8 will be promoted to next class without any exam. A decision regarding students of class 9 and 11 will soon be taken: Varsha Gaikwad, Maharashtra Minister (School Education)pic.twitter.com/Fp9KxbMwfA
— ANI (@ANI)April 3, 2021

ಇಲ್ಲೆಲ್ಲ ಈ ಲಸಿಕೆ ಕೊಡುವುದು ನಿಲ್ಲಿಸಿದ್ದಾರಂತೆ!; ರಕ್ತಹೆಪ್ಪುಗಟ್ಟುತ್ತದೆ ಎಂಬ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ

ನೈಟ್ ಕರ್ಫ್ಯೂ, ವೀಕೆಂಡ್ ಲಾಕ್‍ಡೌನ್ ಆಗುತ್ತಾ? ಸಚಿವ ಸುಧಾಕರ್​ ಏನು ಹೇಳಿದ್ರು ನೋಡಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 9 =
Remember me
