ಭೂಪಾಲ್​: ಮಾತನಾಡುವ ನೆಪದಲ್ಲಿ ರಸ್ತೆ ಮಧ್ಯೆಯೇ ಶಿಕ್ಷಕರಿಗೆ ವಿದ್ಯಾರ್ಥಿಗಳು ಗುಂಡು ಹಾರಿಸಿರುವ ಘಟನೆ ಮಧ್ಯಪ್ರದೇಶದ ಮೊರೆನಾ ಜಿಲ್ಲೆಯ ಜೌರಾದಲ್ಲಿ ನಡೆದಿದೆ.ಘಟನೆಯಲ್ಲಿ ಗಾಯಗೊಂಡಿರುವ ಶಿಕ್ಷಕನನ್ನು ಗಿರ್ವಾರ್ ಸಿಂಗ್ ಎಂದು ಗುರುತಿಸಲಾಗಿದ್ದು, ಜೌರಾ ಪ್ರದೇಶದಲ್ಲಿ ಕೋಚಿಂಗ್ ಸೆಂಟರ್​​ನ್ನು ನಡೆಸುತ್ತಿದ್ದಾನೆ. ವಿದ್ಯಾರ್ಥಿಗಳಿರಿಬ್ಬರು ಮೂರು ವರ್ಷಗಳ ಹಿಂದೆ 12ನೇ ತರಗತಿ ಪಾಸಾಗುವವರೆಗೂ ಈತನ ಕೋಚಿಂಗ್​ ಸೆಂಟರ್​ನಲ್ಲಿ ಓದಿದ್ದರು.
ಇದನ್ನೂ ಓದಿ:ವರ್ಷದ ಹಿಂದೆ ಮದುವೆಯಾಗಿದ್ದ ಯುವತಿ ಸಾವಿಗೆ ಶರಣುಆ ಸಂದರ್ಭದಲ್ಲಿ ಸಿಂಗ್,​ ವಿದ್ಯಾರ್ಥಿಗಳಿಗೆ ಸಹಾಯವನ್ನು ಮಾಡಿದ್ದರು. ಮೂರು ವರ್ಷಗಳಿಂದ ಬಾಕಿ ಇರುವ ಶುಲ್ಕವನ್ನು ಪಾವತಿಸುವಂತೆ ಸಿಂಗ್​ ಹಲವಾರು ಸಂದರ್ಭಗಳಲ್ಲಿ ಇಬ್ಬರಿಗೂ ಕೇಳಿದ್ದರು. ಇದರಿಂದ ಕುಪಿತಗೊಂಡಿದ್ದ ವಿದ್ಯಾರ್ಥಿಗಳು ಹಲ್ಲೆ ನಡೆಸಲು ನಿರ್ಧರಿಸಿದ್ದರು.ಯೋಜನೆಯಂತೆ ಇಬ್ಬರು ಗಾಡಿ ಮೇಲಿ ಬಂದು ಶಿಕ್ಷಕನನ್ನು ಕರೆದಿದ್ದಾರೆ. ಈ ಸಂದರ್ಭದಲ್ಲಿ ಶಿಕ್ಷಕ​ ಹೊರ ಬಂದು ಇಬ್ಬರ ಜೊತೆ ಮಾತನಾಡಲು ಶುರು ಮಾಡಿದ್ದಾನೆ. ಈ ನಡುವೆ ಹಿಂದೆ ಕುಳಿತಿದ್ದವನು ಕೂಡಲೇ ಪಿಸ್ತೂಲ್​ನ್ನು ಹೊರತೆಗೆದು ಗುಂಡು ಹಾರಿಸಿ ಅಲ್ಲಿಂದ ಪರಾರಿಯಾಗಿದ್ದಾರೆ.ಕೂಡಲೇ ಶಿಕ್ಷಕನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಅದೃಷ್ಟವಶಾತ್​ ಆತ ಬದುಕುಳಿದಿದ್ದಾನೆ. ಘಟನೆ ಕುರಿತು ಮಾತನಾಡಿರುವ ಪೊಲೀಸ್​​ರು, ಈ ಕುರಿತು ಎಫ್‌ಐಆರ್ ದಾಖಲಿಸಲಾಗಿದ್ದು, ಆರೋಪಿಗಳನ್ನು ಶೀಘ್ರವೇ ಬಂಧಿಸುತ್ತೇವೆ ಎಂದು ಹೇಳಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 5 =
Remember me
