ನವದೆಹಲಿ:ನಿರಂತರ ಪೆಟ್ರೋಲ್​ ದರ ಏರಿಕೆ ವಿಚಾರವಾಗಿ ಬಿಜೆಪಿ ಹಿರಿಯ ನಾಯಕ ಹಾಗೂ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್​ ಸ್ವಾಮಿ ತಮ್ಮದೇ ಪಕ್ಷವನ್ನು ಕಟುವಾಗಿ ಟೀಕಿಸಿದ್ದಾರೆ.
ನೇಪಾಳದ ಸೀತಾ ಮತ್ತು ಲಂಕಾದ ರಾವಣನಿಗಿಂತ ರಾಮನ ಭಾರತದಲ್ಲೇ ಪೆಟ್ರೋಲ್​ ಬೆಲೆ ಏರುಗತಿಯಲ್ಲಿ ಸಾಗಿದೆ ಎಂದು ಸುಬ್ರಮಣಿಯನ್​ ಸ್ವಾಮಿ ಕಿಡಿಕಾರಿದ್ದಾರೆ. ನಿನ್ನೆ ಮಂಡನೆಯಾದ ಬಜೆಟ್​ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​, ಪೆಟ್ರೋಲ್​ ಮೇಲೆ 2.5 ರೂಪಾಯಿ ಮತ್ತು ಡೀಸೆಲ್​ ಮೇಲೆ 4 ರೂಪಾಯಿ ಕೃಷಿ ಮೂಲ ಸೌಕರ್ಯ ಸೆಸ್​ ಹೆಚ್ಚಳ ಮಾಡಿರುವುದಾಗಿ ಘೋಷಿಸಿದ್ದರು. ಇದರ ಬೆನ್ನಲ್ಲೇ ಸುಬ್ರಮಣಿಯನ್​ ಸ್ವಾಮಿ ಅವರು ತಮ್ಮದೇ ಪಕ್ಷದ ವಿರುದ್ಧ ನೀಡಿರುವ ಹೇಳಿಕೆ ಮುಜುಗರಕ್ಕೀಡಾಗುವಂತೆ ಮಾಡಿದೆ.
ಇದನ್ನೂ ಓದಿರಿ:ಪಾಲಕರಿಗೆ ಸುಳ್ಳು ಹೇಳಿ ಲಾಡ್ಜ್​ ಸೇರಿದ್ದ ಸರ್ಕಾರಿ ನೌಕರರಿಬ್ಬರ ಸ್ಥಿತಿ ನೋಡಿ ಬೆಚ್ಚಿಬಿದ್ದ ಪೊಲೀಸರು!
ಇಂದು (ಫೆ.2 ಮಂಗಳವಾರ) ತಮ್ಮ ಟ್ವಿಟರ್​ನಲ್ಲಿ ಸುಬ್ರಮಣಿಯನ್​ ಸ್ವಾಮಿ ಫೋಟೋವೊಂದನ್ನು ಶೇರ್​ ಮಾಡಿಕೊಂಡಿದ್ದು, ಅದರಲ್ಲಿ ರಾಮನ ಭಾರತದಲ್ಲಿ ಪೆಟ್ರೋಲ್​ ಬೆಲೆ ಪ್ರತಿ ಲೀಟರ್​ಗೆ 93 ರೂ. ಇದೆ. ಸೀತೆಯ ನೇಪಾಳದಲ್ಲಿ 53 ಮತ್ತು ರಾವಣನ ಲಂಕಾದಲ್ಲಿ 51 ರೂಪಾಯಿ ಇದೆ ಎಂದಿದ್ದಾರೆ. ಈ ಮೂಲಕ ತಮ್ಮ ಪಕ್ಷದ ಆಡಳಿತ ವೈಖರಿಯನ್ನು ಟೀಕಿಸಿದ್ದಾರೆ.
pic.twitter.com/Imrz3OSag7
— Subramanian Swamy (@Swamy39)February 2, 2021

ಕಳೆದ ಒಂದು ತಿಂಗಳಿಂದಲೂ ಪೆಟ್ರೋಲ್​ ಏರುಗತಿಯಲ್ಲೇ ಸಾಗಿದೆ. ಒಮ್ಮೆಯು ಸಹ ಕಡಿಮೆಯಾಗಿಲ್ಲ. ಅಲ್ಲದೆ, ನಿನ್ನೆ ಬಜೆಟ್​ನಲ್ಲಿ ಇಂಧನ ಮೇಲಿನ ಕೃಷಿ ಮೂಲ ಸೌಕರ್ಯ ಮೇಲಿನ ಸೆಸ್​ ಹೆಚ್ಚಳದಿಂದ ಇಂಧನ ದರ ಮತ್ತಷ್ಟು ದುಬಾರಿಯಾಗಬಹುದೆಂದು ಅಂದಾಜಿಸಲಾಗಿದೆ.
ಇದನ್ನೂ ಓದಿರಿ:ಗಂಡನನ್ನು ಬಿಡಲು ಇಷ್ಟವಿಲ್ಲ ಆದ್ರೆ ಬೇರೆಯವರ ಜತೆ ಮಲಗಲು ಮನಸ್ಸು ಬಯಸುತ್ತಿದೆ ಏನು ಮಾಡಲಿ?
ಆದರೆ, ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಕೃಷಿ ಮೂಲಸೌಕರ್ಯ ಮತ್ತು ಅಭಿವೃದ್ಧಿ ಸೆಸ್ (ಎಐಡಿಸಿ) ಹೇರುವ ಪರಿಣಾಮವಾಗಿ, ಮೂಲ ಅಬಕಾರಿ ಸುಂಕ (ಬಿಇಡಿ) ಮತ್ತು ವಿಶೇಷ ಹೆಚ್ಚುವರಿ ಅಬಕಾರಿ ಸುಂಕ (ಎಸ್‌ಎಇಡಿ) ದರಗಳನ್ನು ಇಳಿಸಲಾಗಿದೆ. ಇದರಿಂದ ಗ್ರಾಹಕರಿಗೆ ಯಾವುದೇ ಹೆಚ್ಚುವರಿ ಹೊರೆ ಆಗುವುದಿಲ್ಲ ಎಂದು ವಿತ್ತಸಚಿವೆ ನಿರ್ಮಲಾ ಸೀತಾರಾಮನ್​ ಹೇಳಿದ್ದಾರೆ.(ಏಜೆನ್ಸೀಸ್​)
https://www.vijayavani.net/s-nyayadevate-nanna-sahi-illade/
ದನಿ ಕೇಳಿಯೇ ಲವ್​ ಆಯ್ತು ಎಂದು ರಾತ್ರಿಯಿಡೀ ನಿದ್ದೆಗೆಡಿಸುತ್ತಾನೆ- ಅವನ ಮನಸ್ಸು ತಿಳಿಯುವುದು ಹೇಗೆ?

ರಿಮೋಟ್​ ಕಂಟ್ರೋಲ್​​ ಸಹಾಯದಿಂದ ನಿದ್ರಿಸುತ್ತಾಳೀಕೆ! 14 ವರ್ಷ ನಿದ್ದೆಗೆಟ್ಟವಳ ವಿಚಿತ್ರ ಕೇಸಿದು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 1 =
Remember me
