ಮುಂಬೈ:ಸಹಾರಾ ಸಮೂಹದ ಸಂಸ್ಥಾಪಕ ಸುಬ್ರತಾ ರಾಯ್ ಅವರು ವಿಧಿವಶರಾಗಿದ್ದಾರೆ. ಮರತರಿಗೆ 75 ವರ್ಷ ವಯಸ್ಸಾಗಿತ್ತು ಎಂದು ತಿಳಿದು ಬಂದಿದೆ.
ದೀರ್ಘಕಾಲ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮುಂಬೈನ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಸಂಸ್ಥೆಗೆ (KDAH) ದಾಖಲಿಸಲಾಗಿತ್ತು.
ಇದನ್ನೂ ಓದಿ:ಬಿಗ್​ಬಾಸ್​ನಲ್ಲಿ ಮತ್ತೊಂದು ಅವಾಂತರ;​ ಸ್ಪರ್ಧಿ ತನಿಷಾ ಕುಪ್ಪಂಡ ವಿರುದ್ಧ ಪ್ರಕರಣ ದಾಖಲು
ಈ ಕುರಿತು ಪ್ರಕಟಣೆ ಹೊರಡಿಸಿರುವ ಸಹಾರಾ ಸಂಸ್ಥೆ ನಮ್ಮ ಗೌರವಾನ್ವಿತ ‘ಸಹರಾಶ್ರೀ’ ಸುಬ್ರತಾ ರಾಯ್ ಅವರ ನಿಧನವನ್ನು ಸಹಾರಾ ಇಂಡಿಯಾ ಸಂಸ್ಥೆ ತೀವ್ರ ದುಃಖದಿಂದ ತಿಳಿಸುತ್ತದೆ. ಸ್ಪೂರ್ತಿದಾಯಕ ನಾಯಕ ಮತ್ತು ದಾರ್ಶನಿಕ ಸುಬ್ರತಾ ರಾಯ್ ಅವರು ಅಧಿಕ ರಕ್ತದೊತ್ತಡ ಮತ್ತು ಮಧುಮೇಹದಿಂದ ಬಳಲುತ್ತಿದ್ದರು. 14 ನವೆಂಬರ್ 2023 ರಂದು ರಾತ್ರಿ 10.30ಕ್ಕೆ ನಿಧನರಾದರು. ಸುಬ್ರತಾ ರಾಯ್ ಅವರು ಮಾರ್ಗದರ್ಶಕ ಶಕ್ತಿಯಾಗಿದ್ದರು, ಮಾರ್ಗದರ್ಶಕರಾಗಿದ್ದರು ಮತ್ತು ಅವರ ಜೊತೆಯಲ್ಲಿ ಕೆಲಸ ಮಾಡುವ ಸವಲತ್ತು ಹೊಂದಿರುವ ಎಲ್ಲರಿಗೂ ಸ್ಫೂರ್ತಿಯ ಮೂಲವಾಗಿದ್ದರು ಎಂದು ಸಂಸ್ಥೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಜೂನ್ 10, 1948 ರಂದು ಬಿಹಾರದ ಅರಾರಿಯಾದಲ್ಲಿ ಜನಿಸಿದ ಸುಬ್ರತಾ ರಾಯ್ ಅವರು ಹಣಕಾಸು, ರಿಯಲ್ ಎಸ್ಟೇಟ್, ಮಾಧ್ಯಮ ಮತ್ತು ಆತಿಥ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಉದ್ಯಮವನ್ನು ಸ್ಥಾಪಿಸಿದರು. ರಾಯ್ ಅವರ ಪ್ರಯಾಣವು ಗೋರಖ್‌ಪುರದ ಸರ್ಕಾರಿ ತಾಂತ್ರಿಕ ಸಂಸ್ಥೆಯಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಶಿಕ್ಷಣದೊಂದಿಗೆ ಪ್ರಾರಂಭವಾಯಿತು. ಅವರು 1976 ರಲ್ಲಿ ಸಂಕಷ್ಟದಲ್ಲಿದ್ದ ಚಿಟ್ ಫಂಡ್ ಕಂಪನಿಯಾದ ಸಹಾರಾ ಫೈನಾನ್ಸ್ ಅನ್ನು ತೆಕ್ಕೆಗೆ ತೆಗೆದುಕೊಂಡರು. 1978 ರ ಹೊತ್ತಿಗೆ ಅವರು ಅದನ್ನು ಸಹಾರಾ ಇಂಡಿಯಾ ಪರಿವಾರ್ ಆಗಿ ಪರಿವರ್ತಿಸಿದರು. ಆನಂತರ ಇದು ಭಾರತದ ಅತಿದೊಡ್ಡ ಸಂಘಟಿತ ಸಂಸ್ಥೆಗಳಲ್ಲಿ ಒಂದಾಗಿ ಬೆಳೆಯುತ್ತದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × four =
Remember me
