ಪುಲ್ವಾಮಾದಲ್ಲಿ 2019ರ ಫೆಬ್ರವರಿ 14ರಂದು ಭಯೋತ್ಪಾದಕರು ನಡೆಸಿದ ದಾಳಿ ಭಾರತದಲ್ಲೇ ನಡೆದ ದೊಡ್ಡ ಹಾಗೂ ಭೀಕರ ಭಯೋತ್ಪಾದನಾ ದಾಳಿಗಳಲ್ಲಿ ಒಂದು. ಕೇಂದ್ರೀಯ ಮೀಸಲು ಪೊಲೀಸ್​ ಪಡೆ (ಸಿಆರ್​ಪಿಎ್​) ವಾಹನಗಳ ಸಾಲಿನ (ಕಾನ್ವಾಯ್​) ಮೇಲೆ ನಡೆದ ಅಂದಿನ ದಾಳಿಯಲ್ಲಿ 40 ಸಿಆರ್​ಪಿಎ್​ ಯೋಧರು ಹುತಾತ್ಮರಾದರು. ಹಲವರು ಗಾಯಗೊಂಡಿದ್ದರು.
ಜೈಷ್​ ಹೊಣೆದೇಶ ಕಾಯುವ ಯೋಧರನ್ನು ಬಲಿತೆಗೆದುಕೊಂಡ ಈ ಘೋರ ಹತ್ಯಾಕಾಂಡಕ್ಕೆ ತಾನೇ ಹೊಣೆಯೆಂದು ಪಾಕಿಸ್ತಾನ ಮೂಲದ ಜೈಷ್​-ಎ-ಮೊಹಮದ್​ ಭಯೋತ್ಪಾದಕ ಸಂಟನೆ ಹೇಳಿಕೊಂಡಿತು. ಈ ದಾಳಿ ಹಿಂದೆ ಪಾಕಿಸ್ತಾನದ ಕೈವಾಡ ಇದೆಯೆಂದು ಭಾರತ ಆಪಾದಿಸಿದ್ದು ಅದನ್ನು “ಪಾಪಿ’ಸ್ತಾನ ತಳ್ಳಿಹಾಕಿತು.
ದೇಶಕ್ಕಾಗಿ ಬಲಿದಾನ2019 ಫೆಬ್ರವರಿ 14ರ ಆ ದುದಿರ್ನ, ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಲೆಥಾಪೋರಾ ಎಂಬಲ್ಲಿ ಈ ಘೋರ ದುಷತ್ಯ ನಡೆಯಿತು. ಜಮ್ಮು-ಶ್ರೀನಗರ ಹೆದ್ದಾರಿಯಲ್ಲಿ ಸಾಗುತ್ತಿದ್ದ ಸಿಆರ್​ಪಿಎ್​ ಜವಾನರ ಕಾನ್ವಾಯ್​ ಮೇಲೆ ಒಬ್ಬ ಆತ್ಮಹತ್ಯಾ ಬಾಂಬರ್​ ಎರಗಿ ಭೀಕರ ಸ್ಫೋಟಕ್ಕೆ ಕಾರಣವಾಗಿದ್ದ.* 78 ವಾಹನಗಳಲ್ಲಿ 2,547 ಯೋಧರು ಸಾಗುತ್ತಿದ್ದರು.* ಭಾರತೀಯ ಕಾಲಮಾನ ಮುಂಜಾನೆ 3.30ಕ್ಕೆ ಜಮ್ಮುನಿಂದ ಹೊರಟ ಕಾನ್ವಾಯ್​.* ಆವಂತಿಪೋರಾ ಸಮೀಪ ಲೆಥಾಪೋರಾದಲ್ಲಿ ಮಧ್ಯಾಹ್ನ 3.15ಕ್ಕೆ ಭದ್ರತಾ ಸಿಬ್ಬಂದಿಯಿದ್ದ ಒಂದು ಬಸ್​ಗೆ ಸ್ಫೋಟಕ ತುಂಬಿದ್ದ ಕಾರು ಡಿಕ್ಕಿ ಹೊಡೆಸಿದ ಆತ್ಮಹತ್ಯಾ ದಾಳಿಕೋರ.* 76ನೇ ಬೆಟಾಲಿಯನ್​ನ 40 ಯೋಧರು ಹುತಾತ್ಮ.* ಸುಮಾರು 80 ಕೆಜಿ ಸ್ಫೋಟಕವನ್ನು ಬಳಸಲಾಗಿತ್ತು.
19 ಆರೋಪಿಗಳು:ಭಾರತೀಯ ತನಿಖಾ ಸಂಸ್ಥೆಗಳು 19 ಆರೋಪಿಗಳನ್ನು ಗುರುತಿಸಿದವು. 2021ರ ಆಗಸ್ಟ್​ ಹೊತ್ತಿಗೆ ಇತರ ಆರು ಜನರೊಂದಿಗೆ ಪ್ರಮುಖ ಆರೋಪಿ ಹತರಾದರು. ಏಳು ಜನರನ್ನು ಬಂಧಿಸಲಾಯಿತು. ಕಾಶ್ಮೀರ ಕಬಳಿಸುವ ಸಂಚಿನ ಅಂಗವಾಗಿ ಭಯೋತ್ಪಾದಕ ಕೃತ್ಯಗಳನ್ನು ಪಾಕಿಸ್ತಾನ ಬೆಂಬಲಿಸುತ್ತಿದ್ದು, ಪುಲ್ವಾಮಾದ ಘೋರ ದಾಳಿ ಅದರ ಭಾಗವಾಗಿದೆ.
ಭಾರತದ ಖಡಕ್​ ಸಂದೇಶಪುಲ್ವಾಮಾ ದಾಳಿ ನಡೆಯುತ್ತಲೇ ಪಾಕ್​ನ ಉನ್ನತ ರಾಯಭಾರಿಯನ್ನು ಕರೆಸಿಕೊಂಡ ಭಾರತ ಪ್ರಬಲ ಪ್ರತಿಭಟನೆಯನ್ನು ದಾಖಲಿಸಿತು. ದಾಳಿಗೆ ಪ್ರತಿಯಾಗಿ ಕಾರ್ಯಾಚರಣೆ ನಡೆಸುವ ಪೂರ್ಣ ಸ್ವಾತಂತ್ರ್ಯವನ್ನು ಭದ್ರತಾ ಪಡೆಗಳಿಗೆ ನೀಡಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದರು. ಉಗ್ರರ ಅಮಾನುಷ ಕೃತ್ಯಕ್ಕೆ ಇಡೀ ದೇಶದಲ್ಲಿ ಆಕ್ರೋಶದ ಅಲೆ ಎದ್ದಿತು.
ಬಾಲಾಕೋಟ್​ ದಾಳಿ ಮೂಲಕ ಎದುರೇಟುಉಗ್ರರ ಅಟ್ಟಹಾಸಕ್ಕೆ ಉತ್ತರ ನೀಡಲು ಭಾರತ ಸಂಕಲ್ಪ ಮಾಡಿತು. ಪಾಕಿಸ್ತಾನದ ಖೈಬರ್​ ಪಖ್ತುನ್​ಖ್ವಾದ ಬಾಲಾಕೋಟ್​ನಲ್ಲಿರುವ ಜೈಷ್​ ಉಗ್ರಗಾಮಿಗಳ ತಾಣಗಳ ಮೇಲೆ ಪುಲ್ವಾಮಾ ದಾಳಿಯ 12 ದಿನಗಳ ನಂತರ, ಅಂದರೆ ಫೆಬ್ರವರಿ 26ರಂದು ಭಾರತೀಯ ವಾಯುಪಡೆಯ ಫೈಟರ್​ ವಿಮಾನಗಳು ನುಗ್ಗಿ ಬಾಂಬ್​ ದಾಳಿ ನಡೆಸಿ ಶಿಬಿರಗಳನ್ನು ಉಧ್ವಸ್ತಗೊಳಿಸಿದವು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + 20 =
Remember me
